AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್​​​​ನಲ್ಲಿ RBI ಗವರ್ನರ್ ಶಕ್ತಿಕಾಂತ ದಾಸ್​​ಗೆ A ಪ್ಲಸ್ ಗ್ರೇಡ್

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ ಎ ಪ್ಲಸ್ ರೇಟಿಂಗ್ ಪಡೆದಿದ್ದಕ್ಕಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಆರ್ಥಿಕ ನಾಯಕತ್ವವನ್ನು ಪ್ರತಿಬಿಂಬಿಸುವ ಭಾರತಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಆರ್‌ಬಿಐ ಗವರ್ನರ್‌ರ ಸಮರ್ಪಣೆ ಮತ್ತು ದೂರದೃಷ್ಟಿಯು ರಾಷ್ಟ್ರದ ಬೆಳವಣಿಗೆಯ ಪಥವನ್ನು ಬಲಪಡಿಸಲಿದೆ ಎಂದು ಮೋದಿ ಹೇಳಿದ್ದಾರೆ.

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್​​​​ನಲ್ಲಿ RBI ಗವರ್ನರ್ ಶಕ್ತಿಕಾಂತ ದಾಸ್​​ಗೆ A ಪ್ಲಸ್ ಗ್ರೇಡ್
ಶಕ್ತಿಕಾಂತ ದಾಸ್
ರಶ್ಮಿ ಕಲ್ಲಕಟ್ಟ
|

Updated on:Sep 02, 2023 | 1:38 PM

Share

ದೆಹಲಿ ಸೆಪ್ಟೆಂಬರ್ 02: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das)ಅವರು ಗ್ಲೋಬಲ್ ಫೈನಾನ್ಸ್‌ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ್ದಾರೆ. ಅಮೆರಿಕ ಮೂಲದ ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್‌ ಪ್ರಕಾರ ಮೂರು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಪಟ್ಟಿಯಲ್ಲಿ ದಾಸ್ ಅಗ್ರಸ್ಥಾನದಲ್ಲಿದ್ದಾರೆ. ಸ್ವಿಟ್ಜರ್ಲೆಂಡ್‌ನ ಥಾಮಸ್ ಜೆ ಜೋರ್ಡಾನ್ ಮತ್ತು ವಿಯೆಟ್ನಾಂನ ನ್ಗುಯೆನ್ ಥಿ ಹಾಂಗ್ ಕ್ರಮವಾಗಿ ನಂತರದ ಎರಡು ಸ್ಥಾನಗಳಲ್ಲಿದ್ದಾರೆ.

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ ಎ ಪ್ಲಸ್ ರೇಟಿಂಗ್ ಪಡೆದಿದ್ದಕ್ಕಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಆರ್ಥಿಕ ನಾಯಕತ್ವವನ್ನು ಪ್ರತಿಬಿಂಬಿಸುವ ಭಾರತಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಆರ್‌ಬಿಐ ಗವರ್ನರ್‌ರ ಸಮರ್ಪಣೆ ಮತ್ತು ದೂರದೃಷ್ಟಿಯು ರಾಷ್ಟ್ರದ ಬೆಳವಣಿಗೆಯ ಪಥವನ್ನು ಬಲಪಡಿಸಲಿದೆ ಎಂದು ಮೋದಿ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಕೂಡಾ ಆರ್‌ಬಿಐ ಗವರ್ನರ್ ಶಕ್ತಿಕಾಂತ ಅವರನ್ನು ಅಭಿನಂದಿಸಿದ್ದಾರೆ. ದೇಶದ ಸೆಂಟ್ರಲ್ ಬ್ಯಾಂಕ್‌ನ ಅವರ ನಾಯಕತ್ವವು ಇತ್ತೀಚಿನ ಪರೀಕ್ಷೆಗಳು ಮತ್ತು ಸವಾಲುಗಳನ್ನು ತಡೆದುಕೊಡಿದೆ ಎಂದು ನಿರ್ಮಲಾ ಸೀತಾರಾಮನ್ ಸಾಮಾಜಿಕ ಮಾಧ್ಯಮ Xನಲ್ಲಿ ಪೋಸ್ಟ್ ಮಾಡಿದ್ದಾರೆ.

ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್‌ನ ಹೇಳಿಕೆಯ ಪ್ರಕಾರ, ಹಣದುಬ್ಬರ ನಿಯಂತ್ರಣ, ಆರ್ಥಿಕ ಬೆಳವಣಿಗೆಯ ಗುರಿಗಳು, ಕರೆನ್ಸಿ ಸ್ಥಿರತೆ ಮತ್ತು ಬಡ್ಡಿದರ ನಿರ್ವಹಣೆಯಲ್ಲಿ ಯಶಸ್ಸಿಗೆ A ನಿಂದ F ವರೆಗಿನ ಶ್ರೇಣಿಗಳನ್ನು ಆಧರಿಸಿದೆ. ಒಂದು ‘A’ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪ್ರತಿನಿಧಿಸುತ್ತದೆ ಮತ್ತು ‘F’ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ.

ಇದನ್ನೂ ಓದಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಮುಂದಿನ ಸಭೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯುವ ಸಾಧ್ಯತೆ

ಎ ಗ್ರೇಡ್ ಗಳಿಸಿದ ಗವರ್ನರ್‌ಗಳಲ್ಲಿ ಬ್ರೆಜಿಲ್‌ನ ರಾಬರ್ಟೊ ಕ್ಯಾಂಪೋಸ್ ನೆಟೊ, ಇಸ್ರೇಲ್‌ನ ಅಮೀರ್ ಯಾರೋನ್, ಮಾರಿಷಸ್‌ನ ಹರ್ವೇಶ್ ಕುಮಾರ್ ಸೀಗೋಲಮ್, ನ್ಯೂಜಿಲೆಂಡ್‌ನ ಆಡ್ರಿಯನ್ ಓರ್ ಮತ್ತು ಇತರರು ಸೇರಿದ್ದಾರೆ.ಆದರೆ ಎ ಮೈನಸ್ ಗ್ರೇಡ್ ಗಳಿಸಿದ ಗವರ್ನರ್‌ಗಳಲ್ಲಿ ಕೊಲಂಬಿಯಾದ ಲಿಯೊನಾರ್ಡೊ ವಿಲ್ಲಾರ್, ಡೊಮಿನಿಕನ್ ರಿಪಬ್ಲಿಕ್‌ನ ಹೆಕ್ಟರ್ ವಾಲ್ಡೆಜ್ ಅಸ್ಗೆಜ್ ಅಲ್ಬಿಝ್ಸನ್, ಐಸ್ ಲ್ಯಾಂಡ್ ನ ಇಸ್ಜೆಜ್ ಅಲ್ಬಿಸ್ಸನ್, ಇಂಡೋನೇಷ್ಯಾದ ಪೆರ್ರಿ ವಾರ್ಜಿಯೋ, ಮೆಕ್ಸಿಕೋದ ವಿಕ್ಟೋರಿಯಾ ರೋಡ್ರಿಗಸ್ ಸೆಜಾ ಇದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 2 September 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್