RBI ಸುದ್ದಿಗೋಷ್ಠಿ, EMI ಮತ್ತೆ 3 ತಿಂಗಳು ವಿಸ್ತರಣೆ

ದೆಹಲಿ: ಕೊರೊನಾ ಸಂಕಷ್ಟದ ವೇಳೆ ಈ ಹಿಂದೆ ಎರಡು ಬಾರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಮುಖ್ಯಸ್ಥ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಹಣದ ಹರಿವು ಹೆಚ್ಚಿಸಲು ವಿವಿಧ ಕ್ರಮಗಳನ್ನು ಪ್ರಕಟಿಸಿದ್ದರು. ಇಂದು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ ಮಾರುಕಟ್ಟೆ ಚೈತನ್ಯಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. 40 ಬೇಸಿಸ್ ಪಾಯಿಂಟ್ ರೆಪೋ ದರ ಕಡಿತವಾಗಲಿದೆ. ಶೇಕಡಾ 4.4ರಷ್ಟಿದ್ದ ರೆಪೋ ದರ ಶೇಕಡಾ 4ಕ್ಕೆ ಇಳಿಕೆಯಾಗಲಿದೆ. ಗೃಹಸಾಲ, ವಾಹನ ಸಾಲ,ವೈಯಕ್ತಿಕ ಸಾಲದ ಬಡ್ಡಿ ದರ ಕಡಿತವಾಗುತ್ತೆ. ರಿವರ್ಸ್ ರೆಪೋ ದರ […]

RBI ಸುದ್ದಿಗೋಷ್ಠಿ, EMI ಮತ್ತೆ 3 ತಿಂಗಳು ವಿಸ್ತರಣೆ
ಶಕ್ತಿಕಾಂತ್​ ದಾಸ್
Follow us
ಆಯೇಷಾ ಬಾನು
|

Updated on:May 22, 2020 | 12:48 PM

ದೆಹಲಿ: ಕೊರೊನಾ ಸಂಕಷ್ಟದ ವೇಳೆ ಈ ಹಿಂದೆ ಎರಡು ಬಾರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಮುಖ್ಯಸ್ಥ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಹಣದ ಹರಿವು ಹೆಚ್ಚಿಸಲು ವಿವಿಧ ಕ್ರಮಗಳನ್ನು ಪ್ರಕಟಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ ಮಾರುಕಟ್ಟೆ ಚೈತನ್ಯಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. 40 ಬೇಸಿಸ್ ಪಾಯಿಂಟ್ ರೆಪೋ ದರ ಕಡಿತವಾಗಲಿದೆ. ಶೇಕಡಾ 4.4ರಷ್ಟಿದ್ದ ರೆಪೋ ದರ ಶೇಕಡಾ 4ಕ್ಕೆ ಇಳಿಕೆಯಾಗಲಿದೆ. ಗೃಹಸಾಲ, ವಾಹನ ಸಾಲ,ವೈಯಕ್ತಿಕ ಸಾಲದ ಬಡ್ಡಿ ದರ ಕಡಿತವಾಗುತ್ತೆ. ರಿವರ್ಸ್ ರೆಪೋ ದರ ಶೇಕಡಾ 3.35ಕ್ಕೆ ಇಳಿಕೆಯಾಗುತ್ತದೆ. ಕೈಗಾರಿಕಾ ವಲಯದ ಉತ್ಪಾದನೆ ಶೇ.17ರಷ್ಟು ಕಡಿಮೆ ಆಗಿದೆ.

ಕೈಗಾರಿಕಾ ವಲಯಗಳ ಉತ್ಪಾದನೆ ಕುಸಿತ: ಲಾಕ್​ಡೌನ್ ಸಂದರ್ಭದಲ್ಲಿ ಬೇಡಿಕೆ ಮತ್ತು ಪೂರೈಕೆ ಕುಸಿದಿದೆ. ಪ್ರಮುಖ ಕೈಗಾರಿಕಾ ವಲಯಗಳ ಉತ್ಪಾದನೆ ಶೇ. 6.5ರಷ್ಟು ಕುಸಿತ ಕಂಡಿದೆ. ಮಾರ್ಚ್ ತಿಂಗಳಲ್ಲಿ ಸಿಮೆಂಟ್ ಉತ್ಪಾದನೆ ಶೇ.19ರಷ್ಟು ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಶೇ.3.7ರಷ್ಟು ಏರಿಕೆಯಾಗಿದೆ. ಆಹಾರ ಹಣದುಬ್ಬರ ಏಪ್ರಿಲ್​ನಲ್ಲಿ ಶೇ. 8.7ರಷ್ಟು ಏರಿಕೆ. ಕಳೆದ 30 ವರ್ಷಗಳಲ್ಲೇ ರಫ್ತು ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಗ್ರಾಹಕ ಬಳಕೆಯ ವಸ್ತುಗಳ ಉತ್ಪಾದನೆ ಶೇ.33ರಷ್ಟು ಇಳಿಕೆಯಾಗಿದೆ. ಎರಡು ತಿಂಗಳಲ್ಲಿ ದೇಶೀಯ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಿದೆ. ವಿದೇಶಿ ವಿನಿಮಯ 9.2 ಬಿಲಿಯನ್ ಡಾಲರ್ ಏರಿಕೆಯಾಗಿದೆ.

ಮತ್ತೆ ಮೂರು ತಿಂಗಳು EMI ಪಾವತಿ ಮುಂದೂಡಿಕೆ: 2021ರಲ್ಲಿ ಜಿಡಿಪಿ ಬೆಳವಣಿಗೆಯಲ್ಲಿ ನಕಾರಾತ್ಮಕ ಬೆಳವಣಿಗೆ ಆಗಲಿದೆ. ಹಣದುಬ್ಬರದ ಅನಿಶ್ಚಿತತೆ ಮುಂದಿನ ದಿನಗಳಲ್ಲಿ ಕಾಡಲಿದೆ. SIDBIಗೆ ಮುಂದಿನ 3 ತಿಂಗಳಲ್ಲಿ 15 ಸಾವಿರ ಕೋಟಿ. ಆಮದು, ರಫ್ತು ವಲಯಕ್ಕೆ ಆರ್​ಬಿಐನಿಂದ ರಿಲೀಫ್ ಸಿಕ್ಕಿದೆ. ಜೂನ್ 1ರಿಂದ ಆಗಸ್ಟ್ 31ರವರೆಗೆ ಇಎಂಐ ಪಾವತಿ ಮುಂದೂಡಿಕೆ ಮಾಡಲಾಗಿದೆ.

Published On - 9:07 am, Fri, 22 May 20

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್