AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹ 500 ಹಿಂಪಡೆಯುವ, ₹ 1000 ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಆರ್‌ಬಿಐ ಯೋಚಿಸುತ್ತಿಲ್ಲ: ಶಕ್ತಿಕಾಂತ ದಾಸ್

ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌ಬಿಐ ಗವರ್ನರ್, ₹ 1.80 ಲಕ್ಷ ಕೋಟಿ ₹ 2,000 ನೋಟುಗಳು ವಾಪಸಾಗಿವೆ. 3.50 ಲಕ್ಷಕ್ಕೂ ಹೆಚ್ಚು ಕೋಟಿ ರೂ ಮೊತ್ತದ 2000 ರೂ ನೋಟುಗಳ ಪೈಕಿ ಅರ್ಧದಷ್ಟು ನೋಟುಗಳು ಆರ್ಬಿಐ ಅಥವಾ ಬ್ಯಾಂಕುಗಳಿಗೆ ಮರಳಿವೆ ಎಂದಿದ್ದಾರೆ.

₹ 500 ಹಿಂಪಡೆಯುವ, ₹ 1000  ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಆರ್‌ಬಿಐ ಯೋಚಿಸುತ್ತಿಲ್ಲ: ಶಕ್ತಿಕಾಂತ ದಾಸ್
ಶಕ್ತಿಕಾಂತ ದಾಸ್
ರಶ್ಮಿ ಕಲ್ಲಕಟ್ಟ
|

Updated on:Jun 08, 2023 | 6:23 PM

Share

ವಿತ್ತೀಯ ನೀತಿ ಪ್ರಕಟ ಮಾಡಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ₹ 500 ನೋಟುಗಳನ್ನು ಹಿಂಪಡೆಯುವ ಅಥವಾ ₹ 1,000 ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಇದೆಲ್ಲವೂ ವದಂತಿ ಎಂದು ಅವರು ಹೇಳಿದ್ದಾರೆ. ಕೇಂದ್ರೀಯ ಬ್ಯಾಂಕ್ ಇತ್ತೀಚೆಗೆ ₹ 2000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ನಂತರ ಈ ನೋಟು ಇರುವವರು ಅದನ್ನು ಬ್ಯಾಂಕ್​​ಗೆ ನೀಡಿ ವಿನಿಮಯ ಮಾಡಿಕೊಳ್ಳಲು ಹೇಳಿದೆ. ಆರ್​​ಬಿಐ ₹ 500 ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ ₹ 1,000 ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯೋಚಿಸುವುದಿಲ್ಲ. ಇಂಥಾ ಊಹಾಪೋಹಗಳನ್ನು ಸೃಷ್ಟಿಸಬೇಡಿ ಎಂದು ಶಕ್ತಿಕಾಂತ ದಾಸ್ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

₹2000 ನೋಟುಗಳ ಬಗ್ಗೆ ಆರ್‌ಬಿಐ ಗವರ್ನರ್ ಹೇಳಿದ್ದೇನು?

ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌ಬಿಐ ಗವರ್ನರ್, ₹ 1.80 ಲಕ್ಷ ಕೋಟಿ ₹ 2,000 ನೋಟುಗಳು ವಾಪಸಾಗಿವೆ. 3.50 ಲಕ್ಷಕ್ಕೂ ಹೆಚ್ಚು ಕೋಟಿ ರೂ ಮೊತ್ತದ 2000 ರೂ ನೋಟುಗಳ ಪೈಕಿ ಅರ್ಧದಷ್ಟು ನೋಟುಗಳು ಆರ್ಬಿಐ ಅಥವಾ ಬ್ಯಾಂಕುಗಳಿಗೆ ಮರಳಿವೆ ಎಂದಿದ್ದಾರೆ. ಆರ್ಬಿಐನ ಎಂಪಿಸಿ ಸಭೆ ಬಳಿಕ ನಡೆದ ಮಾಧ್ಯಮ ಸಂವಾದದಲ್ಲಿ ಆರ್ಬಿಐ ಈ ಬಗ್ಗೆ ಮಾಹಿತಿ ನೀಡಿದ್ದು, ಇಲ್ಲಿಯವರೆಗೆ 1.82 ಲಕ್ಷ ಕೋಟಿ ರೂ ಮೌಲ್ಯದ 2,000 ರೂ ಮುಖಬೆಲೆಯ ನೋಟುಗಳು ವಾಪಸ್ ಬಂದಿವೆ ಎಂದು ಹೇಳಿದೆ. ಈ ಪೈಕಿ ಶೇ. 85ರಷ್ಟು ನೋಟುಗಳು ಗ್ರಾಹಕರ ಬ್ಯಾಂಕ್ ಖಾತೆಗೆ ಠೇವಣಿಯಾಗಿವೆ. ಅಂದರೆ ಶೇ. 15ರಷ್ಟು ನೋಟು ಬದಲಾವಣೆ ಆಗಿರುವುದು ತಿಳಿದುಬಂದಿದೆ.

2,000 ರೂ ಮುಖಬೆಲೆಯ ನೋಟುಗಳನ್ನು ಹೊಂದಿರುವ ಜನರು ತಮಗೆ ಅನುಕೂಲವಾಗುವ ಸಮಯದಲ್ಲಿ ಬ್ಯಾಂಕ್ಗೆ ಹೋಗಿ ಠೇವಣಿ ಇಟ್ಟು ಬರಬಹುದು ಅಥವಾ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಯಾವುದೇ ಆತುರ ಬೇಡ. ಆದರೆ, ಕೊನೆಯ ಕ್ಷಣದವರೆಗೂ ಕಾಯುವುದೂ ಬೇಡ ಎಂದು ದಾಸ್ ಹೇಳಿದರು.

ಆರ್ಬಿಐ ಘೋಷಣೆ ಪ್ರಕಾರ 2,000 ರೂ ನೋಟುಗಳನ್ನು ವಾಪಸ್ ಮಾಡಲು ಸೆಪ್ಟೆಂಬರ್ 30ರವರೆಗೂ ಕಾಲಾವಕಾಶ ಇದೆ. ಮೇ 19ರಂದು 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವುದಾಗಿ ಆರ್ಬಿಐ ಘೋಷಣೆ ಮಾಡಿತ್ತು.

ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ.ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್ಬಿಐನ ಹಣಕಾಸು ನೀತಿ ಸಮಿತಿ ಸಭೆ (RBI Monetary Policy Committee) ಇಂದು ಮುಕ್ತಾಗೊಂಡ ಬಳಿಕ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಹಣದುಬ್ಬರ ಕಡಿಮೆ ಆಗಿರುವುದರಿಂದ ಈ ಬಾರಿ ಬಡ್ಡಿ ದರ ಏರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು. ರೆಪೋ ದರ ಮಾತ್ರವಲ್ಲ ರಿವರ್ಸ್ ರಿಪೋ ಮತ್ತಿತರ ದರಗಳಲ್ಲೂ ಬದಲಾವಣೆಗಳಾಗಿಲ್ಲ.

ಪತ್ರಿಕಾಗೋಷ್ಠಿಯಲ್ಲಿ ಶಕ್ತಿಕಾಂತ ದಾಸ್ ಅವರು ಹಣದುಬ್ಬರ ಇಳಿಕೆಯಾದರೂ ಸಮಾಧಾನಪಡುವಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದೂ ಎಚ್ಚರಿಸಿದ್ದಾರೆ. ಹೆಡ್ಲೈನ್ ಹಣದುಬ್ಬರವು ಕಡಿಮೆ ಆಗಿದ್ದರೂ ಅದು ನಮ್ಮ ಗುರಿಗಿಂತ ಮೇಲ್ಮಟ್ಟದಲ್ಲೇ ಇದೆ. ಈ ಹಣದುಬ್ಬರದ ಬಗ್ಗೆ ಅರ್ಜುನನ ಕಣ್ಣಿಡುವುದು ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: RBI: ಸಹಕಾರಿ ಬ್ಯಾಂಕುಗಳಿಗೂ ಲೋನ್ ರೈಟಾಫ್, ರಾಜೀ ಸಂಧಾನಕ್ಕೆ ಸಿಗಲಿದೆ ಅವಕಾಶ; ಎನ್​ಪಿಎ, ರೈಟ್ ಆಫ್, ಸಾಲಮನ್ನಾ ಏನು ವ್ಯತ್ಯಾಸ?

ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೇರಿ ಎಂಪಿಸಿಯ 6 ಸದಸ್ಯರು 3 ದಿನಗಳ ಕಾಲ ನಡೆಸಿದ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡರೆನ್ನಲಾಗಿದೆ. ಕಳೆದ ಮೇ ತಿಂಗಳಿಂದೀಚೆ ರೆಪೋ ದರವನ್ನು ಸತತವಾಗಿ ಏರಿಸುತ್ತಾ ಬರಲಾಗಿದೆ. ಈ ಅವಧಿಯಲ್ಲಿ 250 ಬೇಸಿಸ್ ಪಾಯಿಂಟ್ಗಳಷ್ಟು ಏರಿಕೆ ಮಾಡಲಾಗಿದೆ. ಶೇ. 7ಕ್ಕಿಂತ ಹೆಚ್ಚು ಇದ್ದ ಹಣದುಬ್ಬರ ಏಪ್ರಿಲ್ ತಿಂಗಳಲ್ಲಿ ಶೇ. 4.7ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರೆಪೋ ದರದ ಏರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Thu, 8 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!