AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಾನ್ಪುರ ಶಾಖೆಯಲ್ಲಿ ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC) ಹುದ್ದೆಗಳಿಗೆ ಅರ್ಹ ವೈದ್ಯಕೀಯ ವೃತ್ತಿಪರರಿಂದ ಅರ್ಜಿ ಆಹ್ವಾನಿಸಿದೆ. ಇದು ಒಪ್ಪಂದ ಆಧಾರಿತ ನೇಮಕಾತಿಯಾಗಿದ್ದು, ಗಂಟೆಗೆ 1,000ರೂ. ಸಂಭಾವನೆ ನೀಡಲಾಗುತ್ತದೆ. ಎಂಬಿಬಿಎಸ್ ಪದವಿ ಕಡ್ಡಾಯ. ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ. ಜುಲೈ 31 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!
ಉದ್ಯೋಗ ಅವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 19, 2026 | 12:55 PM

Share

ಮುಖ್ಯಾಂಶಗಳು

  • ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ ನೇಮಕಾತಿ
  • ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC) ಹುದ್ದೆಗೆ ಅರ್ಜಿ ಆಹ್ವಾನ
  • ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಉದ್ಯೋಗ ಹುಡುಕುತ್ತಿರುವ ವೈದ್ಯಕೀಯ ವೃತ್ತಿಪರರಿಗೆ ಒಂದು ಸುವರ್ಣ ಅವಕಾಶ ಇಲ್ಲಿದೆ. ಕಾನ್ಪುರದಲ್ಲಿರುವ ಆರ್‌ಬಿಐ ಶಾಖೆಯಲ್ಲಿ ಖಾಲಿ ಇರುವ ಬ್ಯಾಂಕ್ ವೈದ್ಯಕೀಯ ಸಲಹೆಗಾರ (Bank Medical Consultant – BMC) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಆರ್‌ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಒಪ್ಪಂದದ (Contract) ಆಧಾರದ ಮೇಲೆ ನಡೆಯಲಿದ್ದು, ಗಂಟೆಯ ಲೆಕ್ಕದಲ್ಲಿ ಆಕರ್ಷಕ ಸಂಭಾವನೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ (ಅಂಚೆ) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಉದ್ಯೋಗದ ಪ್ರಮುಖ ವಿವರಗಳು:

  • ಹುದ್ದೆಯ ಹೆಸರು: ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC)
  • ಒಟ್ಟು ಹುದ್ದೆಗಳು: 02
  • ಉದ್ಯೋಗದ ಸ್ಥಳ: ಕಾನ್ಪುರ ಶಾಖೆ, ಉತ್ತರ ಪ್ರದೇಶ
  • ನೇಮಕಾತಿ ವಿಧಾನ: ಒಪ್ಪಂದದ ಆಧಾರ (Contract Basis)
  • ವೇತನ/ಸಂಭಾವನೆ: ಗಂಟೆಗೆ 1,000 ರೂ.
  • ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ನೇಮಕಾತಿ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2026

ಶೈಕ್ಷಣಿಕ ಅರ್ಹತೆ ಮತ್ತು ಅನುಭವ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಎಂಬಿಬಿಎಸ್ (MBBS) ಪದವಿ ಪೂರ್ಣಗೊಳಿಸಿರಬೇಕು. ಜನರಲ್ ಮೆಡಿಸಿನ್‌ನಲ್ಲಿ ಎಂಎಸ್ (MS) ಅಥವಾ ಎಂಡಿ (MD) ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇದರೊಂದಿಗೆ ಸಂಬಂಧಿತ ವೈದ್ಯಕೀಯ ಸೇವೆಗಳಲ್ಲಿ ಸೂಕ್ತ ಅನುಭವ ಹೊಂದಿರುವುದು ಅತ್ಯಗತ್ಯ.

ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ!

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಮೊದಲು ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಧಿಸೂಚನೆಯೊಂದಿಗೆ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು, ನಿಖರವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ವಿದ್ಯಾರ್ಹತೆ, ಅನುಭವ ಹಾಗೂ ಇತರ ಅಗತ್ಯ ದಾಖಲೆಗಳ ನಕಲು ಪ್ರತಿಯನ್ನು ಲಗತ್ತಿಸಬೇಕು. ಸಿದ್ಧಪಡಿಸಿದ ಅರ್ಜಿ ಲಕೋಟೆಯನ್ನು ಜುಲೈ 31 ರೊಳಗೆ ತಲುಪುವಂತೆ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ಪ್ರಾದೇಶಿಕ ನಿರ್ದೇಶಕರು,ಭಾರತೀಯ ರಿಸರ್ವ್ ಬ್ಯಾಂಕ್, ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆ (ನೇಮಕಾತಿ ವಿಭಾಗ), ಮಹಾತ್ಮ ಗಾಂಧಿ ಮಾರ್ಗ, ಕಾನ್ಪುರ.

ಅಭ್ಯರ್ಥಿಗಳು ಕರ್ತವ್ಯಗಳ ಸ್ವರೂಪ, ಆಯ್ಕೆ ಪ್ರಕ್ರಿಯೆಯ ನಿಯಮಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಮುನ್ನ ಆರ್‌ಬಿಐ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ