ಭಯೋತ್ಪಾದನೆ ಬಿಟ್ಟು ಬಂದರೆ ಮಾತ್ರ ಪಾಕಿಸ್ತಾನದ ಜತೆಗೆ ಮಾತುಕತೆಗೆ ಸಿದ್ಧ : ಎಸ್.ಜೈಶಂಕರ್
S Jaishankar: ಭಾರತ ಯಾವತ್ತಿಗೂ ಭಯೋತ್ಪಾದನೆಗೆ ಬೆಂಬಲ ನೀಡುವ ದೇಶದೊಂದಿಗೆ ವ್ಯವಹಾರ ನಡೆಸುವುದಿಲ್ಲ. ಭಾರತಕ್ಕೆ ಪಾಕಿಸ್ತಾನದೊಂದಿಗೆ ವ್ಯವಹರಿಸಲು ಇಷ್ಟವಿಲ್ಲ. ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸಬೇಕಾಗಿದೆ ಎಂದು ಭಾರತ ವಿದೇಶಾಂಗ ಸಚಿವ ಜೈ ಶಂಕರ್ ಹೇಳಿದರು.
ದೆಹಲಿ, ಜ.2: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿಲ್ಲ. ಅದು ಅಪ್ರಸ್ತುತ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಹೇಳಿದ್ದಾರೆ. ಅವರು ಇಂದು ಸುದ್ದಿ ಸಂಸ್ಥೆ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಪಾಕಿಸ್ತಾನ ನಮ್ಮೊಂದಿಗೆ ಹೇಳಿಕೊಳ್ಳವಷ್ಟು ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಿಲ್ಲ, ಭಾರತವು ಕೂಡ ಪಾಕಿಸ್ತಾನದ ಜತೆಗೆ ಅಂತಹ ರಾಜತಾಂತ್ರಿಕ ವ್ಯವಹಾರ ಬಿಟ್ಟು ಮತ್ತೆ ಯಾವುದೇ ಸ್ನೇಹವನ್ನು ಬೆಳೆಸಿಕೊಳ್ಳಲು ಇಷ್ಟಪಡುವುದಿಲ್ಲ, ಏಕೆಂದರೆ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಭಾರತ ಯಾವತ್ತಿಗೂ ಭಯೋತ್ಪಾದನೆಗೆ ಬೆಂಬಲ ನೀಡುವ ದೇಶದೊಂದಿಗೆ ವ್ಯವಹಾರ ನಡೆಸುವುದಿಲ್ಲ. ಭಾರತಕ್ಕೆ ಪಾಕಿಸ್ತಾನದೊಂದಿಗೆ ವ್ಯವಹರಿಸಲು ಇಷ್ಟವಿಲ್ಲ. ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸಬೇಕಾಗಿದೆ ಎಂದು ಹೇಳಿದರು. ಪಾಕಿಸ್ತಾನದೊಂದಿಗೆ ವ್ಯವಹರಿಸುವಾಗ ಮೋದಿ ಸರ್ಕಾರದ ವಿಧಾನವನ್ನು ತಿಳಿಸಿದ ಅವರು ಭಾರತವು “ಈಗ ಆ ಆಟವನ್ನು ಆಡುತ್ತಿಲ್ಲ” ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಪಾಕಿಸ್ತಾನ ಹಲವು ದಶಕಗಳಿಂದ ಭಾರತದೊಳಗೆ ಭಯೋತ್ಪಾದನೆಯನ್ನು ತರಬೇಕು ಎಂಬ ಯೋಜನೆಯನ್ನು ಹಾಕಿಕೊಂಡಿದೆ. ಇದು ಪಾಕಿಸ್ತಾನದ ಮೂಲ ಅಜಾಂಡ ಕೂಡ ಆಗಿದೆ. ಇಂತಹ ಪಾಕಿಸ್ತಾನದ ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಈ ರೀತಿಯ ಮನಸ್ಥಿತಿ ಹೊಂದಿರುವ ಯಾವುದೇ ರಾಷ್ಟ್ರವಾಗಲಿ ಅವರೊಂದಿಗೆ ನಾವು ವ್ಯವಹಾರವನ್ನು ನಡೆಸುವುದಿಲ್ಲ. ಜತೆಗೆ ಅವರು ನಿರ್ಧಾರ ಮಾಡಿರುವ ಕ್ರಮಗಳು ಹಾಗೂ ಕಾನೂನಿಗೆ ನಾವು ಒಪ್ಪುದಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ತಮ್ಮ ಹೊಸ ಪುಸ್ತಕ ‘ವೈ ಭಾರತ್ ಮ್ಯಾಟರ್ಸ್’ ನಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ.
#WATCH | On Pakistan, EAM, Dr S Jaishankar says, “What Pakistan was trying to do, not now but over multiple decades, was really to use cross-border terrorism to bring India to the table. That, in essence, was its core policy. We have made that irrelevant by not playing that game… pic.twitter.com/8BfuGFTGNL
— ANI (@ANI) January 2, 2024
ಪಾಕಿಸ್ತಾನದೊಂದಿಗೆ ನಾವು ಉತ್ತಮ ಸಂಬಂಧ ಹಾಗೂ ವ್ಯವಹಾರ ನಡೆಸಬೇಕಾದರೆ, ಅದು ಮೊದಲು ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾಗಿರಬೇಕು ಎಂದು ಹೇಳಿದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತದೊಂದಿಗೆ ಮಾತುಕತೆ ನಡೆಸಲು ಇಚ್ಛೆ ವ್ಯಕ್ತಪಡಿಸಿದ್ದರು. ಈ ಸಮಯದಲ್ಲಿ ಭಾರತವು ಪಾಕಿಸ್ತಾನ ಸೇರಿದಂತೆ ತನ್ನ ಎಲ್ಲಾ ನೆರೆಯ ರಾಷ್ಟ್ರಗಳೊಂದಿಗೆ ಸಾಮಾನ್ಯ ಸಂಬಂಧವನ್ನು ಬಯಸುತ್ತದೆ ಎಂದು ಹೇಳಿದೆ. ಆದರೆ ಇದಕ್ಕೆ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ವಾತಾವರಣವು ಅತ್ಯಗತ್ಯ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
ಇದನ್ನೂ ಓದಿ: ಬಿಬಿಸಿ ಭಾರತದ ಕಾನೂನನ್ನು ಗೌರವಿಸಲೇಬೇಕು; ಬ್ರಿಟನ್ ವಿದೇಶಾಂಗ ಸಚಿವರಿಗೆ ಜೈಶಂಕರ್ ಖಡಕ್ ಉತ್ತರ
ಪಾಕಿಸ್ತಾನದ ಭವಿಷ್ಯವು ತನ್ನದೇ ಆದ ಕ್ರಮಗಳು ಮತ್ತು ಆಯ್ಕೆಗಳಿಂದ ಹೆಚ್ಚಾಗಿ ನಿರ್ಧರಿಸಲ್ಪಡುತ್ತದೆ. ಈ ಕಾರಣದಿಂದ ಇತರ ರಾಷ್ಟ್ರಗಳೊಂದಿಗೆ ಆರ್ಥಿಕವಾಗಿ ವ್ಯವಹಾರ ನಡೆಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಆರ್ಥಿಕ ಸಂಕಷ್ಟದಿಂದ ಹೊರಬರಲು ತುಂಬಾ ಪ್ರಯತ್ನ ಮಾಡುತ್ತದೆ ಎಂದು ಹೇಳಿದರು. ಇನ್ನು ದ್ವೀಪ ದೇಶವು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರೀಲಂಕಾಕ್ಕೆ ಭಾರತ ನೀಡಿದ ಸಹಾಯವನ್ನು ಉಲ್ಲೇಖಿಸಿದ ಅವರು ಇದು ವಿಭಿನ್ನ ಸಂಬಂಧವಾಗಿದೆ ಎಂದು ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:40 pm, Tue, 2 January 24