Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ
ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು.
ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು.
ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಎರಡು ಬಾರಿ ದೂರು ನೀಡಿದ್ದೇವೆ, ಅಜಾಗರೂಕ ರಿಕ್ಷಾ ಚಾಲನೆ, ನಿಂದನೀಯ ಭಾಷೆ ಮತ್ತು ನಾಲ್ಕರಿಂದ ಐದು ಪ್ರಯಾಣಿಕರನ್ನು ಸಾಗಿಸುವುದಕ್ಕೆ ಸಂಬಂಧಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದೇವೆ ಎಂದು ಒಬ್ಬ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

