AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ

ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಇದರಿಂದ ಬಿಹಾರದಲ್ಲಿ ಭಾರೀ ತೊಂದರೆಯಾಗಿದೆ. ಈ ಬಗ್ಗೆ ಲೋಕಸಭೆ ಚುನಾವಣೆ ಸಮಯದಲ್ಲಿ ಕಂಡು ಬಂದಿದೆ. ಮೊದಲು ಈ ಬಗ್ಗೆ ಯೋಚನೆ ಮಾಡಿ ಎಂದು ಹೇಳಿದ್ದಾರೆ. ಎನ್​​ಡಿಎಗೆ ಬೆಂಬಲ ನೀಡಿರುವ ನಿತೀಶ್ ಕುಮಾರ್​​ ಜೆಡಿಯು ಪಕ್ಷ, ಇದೀಗ ಈ ಸಲಹೆಯನ್ನು ಮೋದಿ ಸರ್ಕಾರಕ್ಕೆ ನೀಡಿದೆ.

ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2024 | 2:50 PM

Share

ಬಿಹಾರ, ಜೂ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂ.7 ಅಥವಾ 8ರಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ, ಎನ್​ಡಿಎ ಒಕ್ಕೂಟದ ಮೂಲಕ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳಿಗೆ ಮೋದಿ ನೇತೃತ್ವದ ಸರ್ಕಾರ ರಚನೆ ಮಾಡುವ ಬಗ್ಗೆ ಹಕ್ಕು ಮಂಡನೆ ಮಾಡಿದೆ. ಎನ್​ಡಿಎ ಸರ್ಕಾರ ರಚನೆಗೆ ನೀತಿಶ್ ಕುಮಾರ್​ ಮತ್ತು ಚಂದ್ರ ಬಾಬು ನಾಯ್ಡು ಅವರು ಕೂಡ ಬೆಂಬಲ ನೀಡಿದ್ದಾರೆ. ಮೋದಿ ಸರ್ಕಾರ ರಚನೆ ಮಾಡಲು ಇವರ ಬೆಂಬಲ ಅಗತ್ಯವು ಕೂಡ ಆಗಿತ್ತು. ಇದೀಗ ಇದರ ನಡುವೆ ಜೆಡಿಯು ನಾಯಕರೊಬ್ಬರು ಒಂದು ಅಪಸ್ವರವನ್ನು ಎತ್ತಿದೆ. ಹೌದು 2022ರಲ್ಲಿ ಮೋದಿ ಸರ್ಕಾರ ಪರಿಚಯ ಮಾಡಿದ ಅಗ್ನಿವೀರ್​​​​ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.

ಅಗ್ನಿಪಥ ಯೋಜನೆ ವಿರುದ್ಧ ಅಸಮಾಧಾನವಿದ್ದು, ಚುನಾವಣೆ ಸಂದರ್ಭದಲ್ಲಿ ಅದು ಗೊತ್ತಾಗಿದೆ. ಹಾಗಾಗಿ ಅಗ್ನಿಪಥ ಯೋಜನೆ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ. ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಅದರ ಪರಿಣಾಮ ಚುನಾವಣೆಯಲ್ಲೂ ಕಂಡುಬಂದಿದೆ ಎಂದು ಹೇಳಿದ್ದಾರೆ. ಅಗ್ನಿಪಥ್ ಯೋಜನೆ ಪರಿಚಯಿಸಿದಾಗ, ಸಶಸ್ತ್ರ ಪಡೆಗಳ ವರ್ಗದಲ್ಲಿ ಈ ಬಗ್ಗೆ ಅಸಮಾಧಾನವಿತ್ತು.

ಇನ್ನು ಅಗ್ನಿವೀರ್​​​ಗೆ ನೇಮಕವಾದ ಸೈನಿಕರ ಕುಟುಂಬದವರು ಚುನಾವಣೆ ಸಮಯದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಆದ್ದರಿಂದ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದರು. ಯುವಕರನ್ನು ಸಶಸ್ತ್ರ ಪಡೆಗಳತ್ತ ಒಲವು ಮೂಡಿಸಲು ಹಾಗೂ ರಕ್ಷಣಾ ಪಿಂಚಣಿ ಬಿಲ್​​ನ್ನು ಕಡಿಮೆ ಮಾಡಲು ಕೇಂದ್ರವು 2022 ರಲ್ಲಿ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿತು.

ಇದನ್ನೂ ಓದಿ: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ

ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ಒಟ್ಟು ವಾರ್ಷಿಕ ನೇಮಕಾತಿಗಳಲ್ಲಿ, 25% ಮಾತ್ರ ಶಾಶ್ವತ ಆಯೋಗದ ಅಡಿಯಲ್ಲಿ ಇನ್ನೂ 15 ವರ್ಷಗಳವರೆಗೆ ಮುಂದುವರೆಯಲು ಅನುಮತಿಸಲಾಗಿದೆ. ಈ ಯೋಜನೆಯ ವಿರುದ್ಧ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ