ಹೈದರಾಬಾದ್: ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ ಶುರುವಾಗಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದಾಗಿ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು ಚಂಡಮಾರುತವಾಗಿ ಬದಲಾಗಿ ದಕ್ಷಿಣ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ನಾಗಪಟ್ನಂ, ತಂಜಾವೂರ, ಪುದುಕೊಟ್ಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ತೀವ್ರ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೂ 24ಮತ್ತು 25 ರಂದು ಭಾರಿಮಳೆಯಾಗುವ ಸಂಭವವಿದೆ. ಸಮುದ್ರ ತೀರದಲ್ಲಿ 80 ರಿಂದ 100ಕಿ.ಮೀ ವೇಗದಲ್ಲಿ ಭಾರಿ ಗಾಳಿ ಬೀಸುತ್ತದೆ ಎಂದು ಅಂದಾಜಿಸಲಾಗಿದೆ. ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಚಂಡಮಾರುತದ ಪರಿಣಾಮ ಇರೋ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
The well-marked low pressure over southwest Bay of Bengal is very likely to intensify further into a cyclonic storm during next 24 hrs & move towards Tamil Nadu-Puducherry coast. It's likely to cross between Karaikal & Mamallapuram by Nov 25 afternoon: S Balachandran, IMD Chennai pic.twitter.com/eWAqWSEJuo
— ANI (@ANI) November 23, 2020