ಉತ್ತರ ಪ್ರದೇಶ: ರಾಮಲಲ್ಲಾನ ನಂತರ ಇದೀಗ ರಾಷ್ಟ್ರ ಪ್ರತಿಷ್ಠೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಸಮಯ: ಮೋದಿ

ರಾಮಲಲ್ಲಾನ ಪ್ರಾಣಪ್ರತಿಷ್ಠೆ ಮುಗಿದಿದೆ ಇದೀಗ ರಾಷ್ಟ್ರ ಪ್ರತಿಷ್ಠೆಯ ಸಮಯ, 2047ರ ಹೊತ್ತಿಗೆ ಭಾರತವವನ್ನು ಅಭಿವೃದ್ಧಿ ಹೊಂದಿಗೆ ರಾಷ್ಟ್ರವನ್ನಾಗಿಸುವುದೇ ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ 19,100 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ರಾಮಲಲ್ಲಾನ ಪ್ರತಿಷ್ಠಾಪನೆ ಮುಗಿದಿದೆ ಈಗ ರಾಷ್ಟ್ರದ ಪ್ರತಿಷ್ಠೆಯನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುವ ಸಮಯ ಬಂದಿದೆ ಎಂದರು.

ಉತ್ತರ ಪ್ರದೇಶ: ರಾಮಲಲ್ಲಾನ ನಂತರ ಇದೀಗ ರಾಷ್ಟ್ರ ಪ್ರತಿಷ್ಠೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಸಮಯ: ಮೋದಿ
ನರೇಂದ್ರ ಮೋದಿ
Image Credit source: Financial Express

Updated on: Jan 25, 2024 | 3:24 PM

ರಾಮಲಲ್ಲಾನ ಪ್ರಾಣಪ್ರತಿಷ್ಠೆ ಮುಗಿದಿದೆ ಇದೀಗ ರಾಷ್ಟ್ರ ಪ್ರತಿಷ್ಠೆಯ ಸಮಯ, 2047ರ ಹೊತ್ತಿಗೆ ಭಾರತವವನ್ನು ಅಭಿವೃದ್ಧಿ ಹೊಂದಿಗೆ ರಾಷ್ಟ್ರವನ್ನಾಗಿಸುವುದೇ ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ 19,100 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ರಾಮಲಲ್ಲಾನ ಪ್ರತಿಷ್ಠಾಪನೆ ಮುಗಿದಿದೆ ಈಗ ರಾಷ್ಟ್ರದ ಪ್ರತಿಷ್ಠೆಯನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುವ ಸಮಯ ಬಂದಿದೆ ಎಂದರು.

ಸ್ವಾತಂತ್ರ್ಯದ ನಂತರ ಕೆಲವು ದಶಕಗಳವರೆಗೆ ಭಾರತದಲ್ಲಿ ಅಭಿವೃದ್ಧಿ ಕೆಲವೇ ಪ್ರದೇಶಗಳಿಗೆ ಸೀಮಿತವಾಗಿತ್ತು. ದೇಶದ ಹೆಚ್ಚಿನ ಭಾಗವು ಅಭಿವೃದ್ಧಿಯಿಂದ ವಂಚಿತವಾಗಿತ್ತು. ದೇಶದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶವೂ ಅಭಿವೃದ್ಧಿಯಿಂದ ವಂಚಿತವಾಗಿತ್ತು.

ಇಲ್ಲಿ ಆಡಳಿತ ನಡೆಸಿದವರು ಬಹುಕಾಲ ಆಡಳಿತಗಾರರಂತೆ ನಡೆದುಕೊಂಡಿದ್ದರಿಂದ ಹೀಗಾಯಿತು ಎಂದು ಮೋದಿ ಹೇಳಿದರು. ಜನರನ್ನು ಬಡತನದಲ್ಲಿ ಇಟ್ಟು ಸಮಾಜದಲ್ಲಿ ಒಡಕು ಮೂಡಿಸುವುದು ಅವರಿಗೆ ಅತ್ಯಂತ ಸುಲಭವಾದ ಮಾರ್ಗವಾಗಿ ಕಂಡಿತು.

ಮತ್ತಷ್ಟು ಓದಿ: Lok Sabha Elections 2024: ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಿಂದಲೇ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ ಪ್ರಧಾನಿ ಮೋದಿ

ರೈತರ ಕಲ್ಯಾಣವು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಇಂದು ಸರ್ಕಾರವು ಪ್ರತಿ ರೈತ ಕುಟುಂಬದ ಸುತ್ತಲೂ ಸಂಪೂರ್ಣ ಭದ್ರತೆಯ ಹೊದಿಕೆಯನ್ನು ರಚಿಸುತ್ತಿದೆ. ನಮ್ಮ ಸರ್ಕಾರವು ಕಳೆದ ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದೆ ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿದೆ, ಇಂದು ವಿಶ್ವದಲ್ಲಿ 3 ಸಾವಿರ ರೂ.ವರೆಗೆ ಸಿಗುವ ಯೂರಿಯಾವನ್ನು ಭಾರತೀಯ ರೈತರಿಗೆ 300 ರೂ.ಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರುವಂತೆ ಮಾಡಲಾಗಿದೆ ಎಂದರು.

ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು, ಮಥುರಾ-ಪಲ್ವಾಲ್ ಮತ್ತು ಚಿಪಿಯಾನ ಬುಡ್ಜರ್​-ದಾದ್ರಿ ವಿಭಾಗಗಳನ್ನು ಸಂಪರ್ಕಿಸುವ ನಾಲ್ಕನೇ ರೈಲು ಮಾರ್ಗ ಮತ್ತು ಹಲವಾರು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us