ಸ್ಮೃತಿ ಇರಾನಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಬೇಡ: ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಮನವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೀವನದಲ್ಲಿ ಸೋಲು-ಗೆಲುವು ಸಂಭವಿಸುತ್ತವೆ. ಶ್ರೀಮತಿ ಸ್ಮೃತಿ ಇರಾನಿ ಬಗ್ಗೆ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಬೇಡಿ ಎಂದು ನಾನು ವಿನಂತಿಸುತ್ತೇನೆ.ಅವಮಾನಿಸುವುದು ದೌರ್ಬಲ್ಯದ ಸಂಕೇತವೇ ಹೊರತು ಶಕ್ತಿಯಲ್ಲ" ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ. ಅಂದಹಾಗೆ ರಾಹುಲ್ ಗಾಂಧಿ ಮನವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಸ್ಮೃತಿ ಇರಾನಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಬೇಡ: ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಮನವಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Jul 12, 2024 | 6:54 PM

ದೆಹಲಿ ಜುಲೈ 12: ಮಾಜಿ ಸಚಿವೆ ಸ್ಮೃತಿ ಇರಾನಿ (Smriti Irani) ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ತಮ್ಮ ಬೆಂಬಲಿಗರು ಮತ್ತು ಇತರರರಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಶುಕ್ರವಾರ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ (Congress) ನಾಯಕ ಜನರನ್ನು ಅವಮಾನಿಸುವುದು ದೌರ್ಬಲ್ಯದ ಸಂಕೇತ, ಶಕ್ತಿಯಲ್ಲ ಎಂದು ಹೇಳಿದ್ದರು.  ಸ್ಮೃತಿ ಇರಾನಿ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಲ್ಲಿ ಸೋತಿದ್ದರು. ರಾಹುಲ್ ಗಾಂಧಿ ಅವರ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರು 1.5 ಲಕ್ಷ ಮತಗಳ ಅಂತರದಿಂದ ಸ್ಮೃತಿ ಅವರನ್ನು ಪರಾಭವಗೊಳಿಸಿದ್ದರು.

ಜೀವನದಲ್ಲಿ ಸೋಲು-ಗೆಲುವು ಸಂಭವಿಸುತ್ತವೆ. ಶ್ರೀಮತಿ ಸ್ಮೃತಿ ಇರಾನಿ ಬಗ್ಗೆ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಬೇಡಿ ಎಂದು ನಾನು ವಿನಂತಿಸುತ್ತೇನೆ.ಅವಮಾನಿಸುವುದು ದೌರ್ಬಲ್ಯದ ಸಂಕೇತವೇ ಹೊರತು ಶಕ್ತಿಯಲ್ಲ” ಎಂದು ರಾಹುಲ್ ಎಕ್ಸ್ ನಲ್ಲಿ ಬರೆದಿದ್ದಾರೆ.  ಅಂದಹಾಗೆ ರಾಹುಲ್ ಗಾಂಧಿ ಮನವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ರಾಹುಲ್ ಟ್ವೀಟ್

2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ಅವರನ್ನು ಅವರ ಭದ್ರಕೋಟೆಯಾದ ಅಮೇಠಿಯಲ್ಲಿ 55,000 ಮತಗಳ ಅಂತರದಿಂದ ಸೋಲಿಸಿದ್ದರು.  2024 ರ ಸಾರ್ವತ್ರಿಕ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಮತ್ತು ವಯನಾಡ್ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆದ್ದರು. ನಂತರ ಅವರು ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟರು. ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿದೆ.

ಜೂನ್‌ನಲ್ಲಿ ನಡೆದ ಚುನಾವಣೆಯಲ್ಲಿ ಸೋತ ನಂತರ, ಸ್ಮೃತಿ ಇರಾನಿ ತಮ್ಮನ್ನು ಬೆಂಬಲಿಸಿದವರಿಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಣೆ; ಅಮಿತ್ ಶಾ ಘೋಷಣೆ

ಜೀವನ ಹೀಗಿದೆ. ನನ್ನ ಜೀವನದ ಒಂದು ದಶಕವು ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗುವುದು, ಜೀವನವನ್ನು ಕಟ್ಟುವುದು, ಭರವಸೆ ಮತ್ತು ಆಕಾಂಕ್ಷೆಗಳನ್ನು ಪೋಷಿಸುವುದು, ರಸ್ತೆಗಳು, ನಾಲಿ, ಖಡಾಂಜ, ಬೈಪಾಸ್, ವೈದ್ಯಕೀಯ ಕಾಲೇಜು ಮೂಲಭೂತ ಸೌಕರ್ಯಗಳ ಕೆಲಸ ಮಾಡುವುದಾಗಿದೆ. ಸೋಲು ಮತ್ತು ಗೆಲುವಿನಲ್ಲಿ ನನ್ನ ಬೆಂಬಲಕ್ಕೆ ನಿಂತವರಿಗೆ ನಾನು ಚಿರಋಣಿ. ಇಂದು ಆಚರಿಸುತ್ತಿರುವವರಿಗೆ, ಅಭಿನಂದನೆಗಳು. ‘ಜೋಶ್ ಹೇಗಿದೆ?’ ಎಂದು ಕೇಳುವವರಿಗೆ. ನಾನು ಹೇಳುತ್ತೇನೆ- ಇದು ಇನ್ನೂ ಹೆಚ್ಚಿದೆ, ಸರ್ ಎಂದು ಸ್ಮೃತಿ ಎಕ್ಸ್ ನಲ್ಲಿ ಬರೆದಿದ್ದರು. ಚುನಾವಣೆಯಲ್ಲಿ ಸೋತ ನಂತರ ಅವರು ಲುಟ್ಯೆನ್ಸ್‌ನ ದೆಹಲಿಯಲ್ಲಿರುವ 28 ತುಘಲಕ್ ಕ್ರೆಸೆಂಟ್‌ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Fri, 12 July 24

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು