ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ

ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ
ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರು ಪ್ಯಾರೀಸ್ ಸೇರಿದಂತೆ ವಿವಿಧೆಡೆ ಪ್ರತಿಭಟಿಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 23, 2022 | 1:15 PM

ಶ್ರೀನಗರ: ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (Pakistan Occupied Kashmir – PoK) ನಿವಾಸಿಗಳು ಜಮ್ಮು ನಗರದಲ್ಲಿ ಪ್ರತಿಭಟನೆ ನಡೆಸಿ ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು. ಭುಜಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬಂದಿದ್ದ ನಿರಾಶ್ರಿತರು ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ‘ಆವಾಜ್ ದೋ-ಹಮ್​ ಏಕ್ ಹೈ’ (ಧ್ವನಿ ಕೊಡಿ, ನಾವು ಒಂದು) ಮತ್ತು ‘ಚೀನ್​​ ಕೆ ಲೆಂಗೆ ಅಪ್ನಾ ಹಕ್’ (ನಮ್ಮ ಹಕ್ಕು ಪಡೆದುಕೊಳ್ಳುತ್ತೇವೆ) ಎಂದು ಘೋಷಣೆಗಳನ್ನು ಮೊಳಗಿಸಿದರು.

ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ನಿರಾಶ್ರಿತರು, ‘ನಮ್ಮ ಮನೆಗಳನ್ನು ಅಕ್ರಮವಾಗಿ ಕಿತ್ತುಕೊಳ್ಳಲಾಗಿದೆ. ಇಲ್ಲಿರುವ ನಾವೆಲ್ಲರೂ ನಮ್ಮ ಮನೆಗಳಿಗೆ ಹಿಂದಿರುಗಬೇಕೆಂಬ ಆಸೆ ಹೊಂದಿದ್ದೇವೆ. ನಮ್ಮ ಹುಟ್ಟೂರು ನೋಡಬೇಕು, ನಮ್ಮ ಮನೆಗಳನ್ನು ನೋಡಬೇಕೆಂಬ ಆಸೆ ನಮಗಿದೆ’ ಎಂದು ಅಳಲು ತೋಡಿಕೊಂಡರು.

1947ರಲ್ಲಿ ನಡೆದ ಜನಾಂಗೀಯ ಹತ್ಯಾಕಾಂಡವನ್ನು ನಿರಾಶ್ರಿತರೊಬ್ಬರು ನೆನಪಿಸಿಕೊಂಡು ಕಣ್ಣೀರಿಟ್ಟರು. ‘1947ರಲ್ಲಿ ನನಗೆ ಆರೂವರೆ ವರ್ಷ ವಯಸ್ಸು. ನಮ್ಮ ಕುಟುಂಬದ 28 ಮಂದಿಯನ್ನು ಸಾಲಾಗಿ ನಿಲ್ಲಿಸಿ ಕೊಲ್ಲಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ತಮ್ಮೊಂದಿಗೆ ಒತ್ತಾಯದಿಂದ ಕರೆದೊಯ್ದರು. ನಾವು 1952ರಲ್ಲಿ ಇಲ್ಲಿಗೆ ಬಂದೆವು. ಸರ್ಕಾರವು ಏನಾದರೂ ಮಾಡಿದರೆ ಮತ್ತೆ ನಮ್ಮ ಮನೆಗಳಿಗೆ ಹೋಗಲು ತಯಾರಿದ್ದೇವೆ’ ಎಂದು ಹೇಳಿದರು.

ಭಾರತ ಸರ್ಕಾರವು ರಾಜತಾಂತ್ರಿಕ ಅಥವಾ ಸೇನಾ ಕಾರ್ಯಾಚರಣೆಯ ಮೂಲಕ ನಮಗೆ ನ್ಯಾಯ ಒದಗಿಸಲು ಮುಂದಾಗಬೇಕು. ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು. 1947ರಲ್ಲಿ ಪಾಕಿಸ್ತಾನವು ಜಮ್ಮು ಕಾಶ್ಮೀರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಾವಿರಾರು ಹಿಂದೂಗಳು ಮತ್ತು ಸಿಖ್ಖರು ದೇಶಭ್ರಷ್ಟರಾಗಬೇಕಾಯಿತು. ಮೀರ್​ಪುರ್, ಮುಝಾಫರ್​ಬಾದ್, ಕೊಟ್ಲಿ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಹಿಂದೂ ಮತ್ತು ಸಿಖ್ಖರನ್ನು ಹುಡುಕಿ ಕೊಲ್ಲಲಾಯಿತು.

Published On - 1:10 pm, Sun, 23 October 22

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ