AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ: ಕೇಂದ್ರ ಸಚಿವ ಜೋಶಿ ಜೊತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ

ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಯಡಿಯೂರಪ್ಪನವರು ಸುಧೀರ್ಘ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ: ಕೇಂದ್ರ ಸಚಿವ ಜೋಶಿ ಜೊತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ
ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ: ಕೇಂದ್ರ ಸಚಿವ ಜೋಶಿ ಜೊತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ
TV9 Web
| Edited By: |

Updated on: Oct 19, 2022 | 5:55 PM

Share

ನವದೆಹಲಿ: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪನವರು (bs yediyurappa) ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (pralhad joshi) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ (Areca nut research centre in Karnataka) ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಯಡಿಯೂರಪ್ಪನವರು ಸುಧೀರ್ಘ ಚರ್ಚೆ ನಡೆಸಿದರು. ಈ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವರ ಜೊತೆ ಚರ್ಚಿಸಿ, ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸಹಕರಿಸಬೇಕೆಂದು ಯಡಿಯೂರಪ್ಪನವರು ಸೇರಿದಂತೆ ಶಿವಮೊಗ್ಗದ ಬಿಜೆಪಿ ನಾಯಕರು ಜೋಶಿಯವರಿಗೆ ಮನವರಿಕೆ ಮಾಡಿದ್ದಾರೆ.

ಎಲೆ ಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ತೀವ್ರ ನಷ್ಟ ಅನುಭವಿಸುತ್ತಿದ್ದು, ರೈತರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು, ಪ್ರಲ್ಹಾದ ಜೋಶಿಯವರು ಹಾಗೂ ಕೇಂದ್ರ ಕೃಷಿ ಸಚಿವರು ಮನವಿ ಮಾಡಿದ್ದಾರೆ.‌

ಈ ಭೇಟಿ ವೇಳೆ ಯಡಿಯೂರಪ್ಪ ಪ್ರಲ್ಜಾದ್ ಜೋಶಿಯವರು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದರು ಎನ್ನಲಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಈ ಭೇಟಿ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ