ನವದೆಹಲಿ: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪನವರು (bs yediyurappa) ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (pralhad joshi) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ (Areca nut research centre in Karnataka) ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಯಡಿಯೂರಪ್ಪನವರು ಸುಧೀರ್ಘ ಚರ್ಚೆ ನಡೆಸಿದರು. ಈ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವರ ಜೊತೆ ಚರ್ಚಿಸಿ, ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸಹಕರಿಸಬೇಕೆಂದು ಯಡಿಯೂರಪ್ಪನವರು ಸೇರಿದಂತೆ ಶಿವಮೊಗ್ಗದ ಬಿಜೆಪಿ ನಾಯಕರು ಜೋಶಿಯವರಿಗೆ ಮನವರಿಕೆ ಮಾಡಿದ್ದಾರೆ.
ಎಲೆ ಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ತೀವ್ರ ನಷ್ಟ ಅನುಭವಿಸುತ್ತಿದ್ದು, ರೈತರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು, ಪ್ರಲ್ಹಾದ ಜೋಶಿಯವರು ಹಾಗೂ ಕೇಂದ್ರ ಕೃಷಿ ಸಚಿವರು ಮನವಿ ಮಾಡಿದ್ದಾರೆ.
ಈ ಭೇಟಿ ವೇಳೆ ಯಡಿಯೂರಪ್ಪ ಪ್ರಲ್ಜಾದ್ ಜೋಶಿಯವರು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದರು ಎನ್ನಲಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಈ ಭೇಟಿ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿದೆ.