Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು

ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು
ಆಸ್ಪತ್ರೆ, ರೋಗಿ, ವೈದ್ಯರುImage Credit source: India Today
Follow us
ನಯನಾ ರಾಜೀವ್
|

Updated on: Nov 29, 2023 | 2:29 PM

ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ರೋಗಿಯ ಕುಟುಂಬ ಸದಸ್ಯರು, ಅಮರಾವತಿ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ವಿದ್ಯುತ್ ಬ್ಯಾಕಪ್ ಲಭ್ಯವಿಲ್ಲದೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆರೋಪವನ್ನು ಸರ್ಕಾರ ತಳ್ಳಿ ಹಾಕಿದೆ, ರೋಗಿಯ ಸಾವಿಗೆ ಕಾರಣವಾದ ವಿಷಯದ ಬಗ್ಗೆ ತನಿಖೆ ನಡೆಸಲು ಆಸ್ಪತ್ರೆಯು ತಂಡವನ್ನು ಸಹ ರಚಿಸಿದೆ.

ತುರ್ತು ವಿಭಾಗದಲ್ಲಿ ವಿದ್ಯುತ್ ಇಲ್ಲದೇ ಇರುವುದು ಹೇಗೆ ಎಂದು ವೈದ್ಯರಲ್ಲಿ ಕೇಳುತ್ತಿರುವ ವಿಡಿಯೋ ಇದೀಗ ಬಹಿರಂಗವಾಗಿದೆ. ವೈದ್ಯರು ಟಾರ್ಚ್ ಬೆಳಕಿನಲ್ಲಿ ರೋಗಿಗೆ ಇಂಜೆಕ್ಷನ್ ನೀಡುವುದನ್ನು ಸಹ ಕಾಣಬಹುದು.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ಆರೋಪ: ರೋಗಿ ಸಾವು, ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ

ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಂದ ರೋಗಿಯು ವೈದ್ಯಕೀಯ ಸ್ಥಿತಿಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ವಿದ್ಯುತ್ ಕಡಿತವು ಕೇವಲ ಐದು ನಿಮಿಷಗಳ ಕಾಲ ಮಾತ್ರ ಇತ್ತು ಮತ್ತು ವೆಂಟಿಲೇಟರ್‌ಗಳು ಕನಿಷ್ಠ ಒಂದು ಗಂಟೆಗಳ ಕಾಲ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದವು ಎಂದು ಅವರು ಹೇಳಿದರು.

ವೆಂಟಿಲೇಟರ್ ಬೆಂಬಲದಲ್ಲಿರುವ ಇತರ ನಾಲ್ಕು ರೋಗಿಗಳು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ ಎಂದು ಸುಬ್ರಮಣಿಯನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್