ರಿಲಯನ್ಸ್ ವಿಮಾ ಭ್ರಷ್ಟಾಚಾರ ಪ್ರಕರಣ: ಜಮ್ಮು, ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್​ಗೆ ಸಿಬಿಐ ಸಮನ್ಸ್

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 28 ರಂದು ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಬರುವಂತೆ ಸಮನ್ಸ್​ ನೀಡಿದೆ.

ರಿಲಯನ್ಸ್ ವಿಮಾ ಭ್ರಷ್ಟಾಚಾರ ಪ್ರಕರಣ: ಜಮ್ಮು, ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್​ಗೆ ಸಿಬಿಐ ಸಮನ್ಸ್
ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 22, 2023 | 11:34 AM

ದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu, Kashmir) ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ (Satya Pal Malik) ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 28 ರಂದು ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಬರುವಂತೆ ಸಮನ್ಸ್​ ನೀಡಿದೆ. ದೆಹಲಿಯಲ್ಲಿರುವ ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್‌ಹೌಸ್‌ನಲ್ಲಿ ಕೆಲವು ಸ್ಪಷ್ಟೀಕರಣಗಳಿಗಾಗಿ ಸಿಬಿಐ ನನಗೆ ನೋಟಿಸ್ ನೀಡಿದೆ ಎಂದು ಸತ್ಯಪಾಲ್ ಮಲಿಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಸಿಬಿಐ ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಲು ಬಯಸುತ್ತಿದೆ, ಅದಕ್ಕಾಗಿ ನನ್ನನ್ನೂ ದೆಹಲಿಗೆ ಬರುವಂತೆ ತಿಳಿಸಿದೆ. ನಾನು ಈಗಾಗಲೇ ರಾಜಸ್ಥಾನಕ್ಕೆ ಹೋಗುತ್ತಿದ್ದೇನೆ ಹಾಗಾಗಿ ನಾನು ಏಪ್ರಿಲ್ 27 ರಿಂದ 29 ರವರೆಗೆ ದಿನಾಂಕವನ್ನು ತನಿಖಾ ದಳಕ್ಕೆ ನೀಡಿದ್ದೇನೆ ಸತ್ಯಪಾಲ್ ಮಲಿಕ್ ಪಿಟಿಐಗೆ ತಿಳಿಸಿದರು.

ಸತ್ಯಪಾಲ್ ಮಲಿಕ್ ಅವರು 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದಾಗ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಡೆತನದ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿದ್ದರು. ತನಿಖಾ ಸಂಸ್ಥೆ ದಾಖಲಿಸಿಕೊಂಡ ಎಫ್‌ಐಆರ್ (ಮೊದಲ ಮಾಹಿತಿ ವರದಿಯಲ್ಲಿ) ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ವೈದ್ಯಕೀಯ ವಿಮಾ ಯೋಜನೆಯನ್ನು ಮಾಡುವಾಗ ದೊಡ್ಡ ಹಗರಣದಲ್ಲಿ ರಿಲಯನ್ಸ್ ಜನರಲ್ ಇನ್ಶುರೆನ್ಸ್ ಜೊತೆಗೆ ಟ್ರಿನಿಟಿ ಮರುವಿಮಾ ಬ್ರೋಕರ್‌ಗಳ ಕೈವಾಡ ಇದೆ ಎಂದು ಸಿಬಿಐ ಹೇಳಿದೆ.

ಸತ್ಯಪಾಲ್ ಮಲಿಕ್ ಅವರು ವಿಮಾ ಈ ಯೋಜನೆಯಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಈ ಕಾರಣಕ್ಕೆ ಸಿಬಿಐ ಅವರನ್ನು ತನಿಖೆಗೆ ಬರುವಂತೆ ತಿಳಿಸಿದೆ. ಸುಮಾರು 3.5 ಲಕ್ಷ ಉದ್ಯೋಗಿಗಳನ್ನು ಒಳಗೊಂಡಿರುವ ಈ ಯೋಜನೆಯನ್ನು ಸೆಪ್ಟೆಂಬರ್ 2018ರಲ್ಲಿ ಬಿಡುಗಡೆ ಮಾಡಲಾಗಿತ್ತು. ನಂತರ ಈ ಯೋಜನೆಯನ್ನು ಅಂದಿನ ಜಮ್ಮು ಮತ್ತು ಕಾಶ್ಮೀರದ ಗವರ್ನರ್​ ಸತ್ಯಪಾಲ್ ಮಲಿಕ್ ಒಂದು ತಿಂಗಳೊಳಗೆ ರದ್ದುಗೊಳಿಸಿದರು.

ಇದನ್ನೂ ಓದಿ;ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ: ಮೇಘಾಲಯ ಗವರ್ನರ್ ಸತ್ಯಪಾಲ್ ಮಲಿಕ್

ರಾಜ್ಯ ಸರ್ಕಾರಿ ನೌಕರರು ಒಪ್ಪಂದವನ್ನು ಮೋಸವಾಗಿದೆ ಎಂದು ಪ್ರಾಥಮಿಕವಾಗಿ ಕಾಣುತ್ತಿದೆ ಎಂದು ಈ ಯೋಜನೆಯನ್ನು ಸತ್ಯಪಾಲ್ ಮಲಿಕ್ ರದ್ದುಗೊಳಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಪರಿಶೀಲಿಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿತ್ತು ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು. ನಾನೇ ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದ್ದೇನೆ ಮತ್ತು ಒಪ್ಪಂದವನ್ನು ತಪ್ಪಾಗಿ ನೀಡಲಾಗಿದೆ ಎಂಬ ತೀರ್ಮಾನಕ್ಕೆ ಬಂದ ನಂತರ ಈ ಯೋಜನೆಯನ್ನು ನಾನು ಅದನ್ನು ರದ್ದುಗೊಳಿಸಿದೆ ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸತ್ಯಪಾಲ್ ಮಲಿಕ್ ಅವರು ವಿಮಾ ಸಂಸ್ಥೆಗಳ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಕಿರು ಜಲವಿದ್ಯುತ್ ಯೋಜನೆಯಲ್ಲಿ ಸಿವಿಲ್ ಕಾಮಗಾರಿಯ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಿಬಿಐಗೆ ದೂರು ನೀಡಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 22 April 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ