ಮಿಜೋರಾಂನಲ್ಲಿ ರೆಮಲ್ ಚಂಡಮಾರುತದ ಅಬ್ಬರ, ಕಲ್ಲು ಕ್ವಾರಿ ಕುಸಿತ, 10 ಮಂದಿ ಸಾವು

|

Updated on: May 28, 2024 | 11:02 AM

Remal Cyclone: ಮಿಜೋರಾಂನಲ್ಲಿ ರೆಮಲ್ ಚಂಡಮಾರುತದ ಪರಿಣಾಮ ಭಾರಿ ಗಾಳಿ ಮಳೆ ಸುರಿಯುತ್ತಿದ್ದು, ಕಲ್ಲು ಕ್ವಾರಿ ಕುಸಿತ ಉಂಟಾಗಿದೆ. ಹಲವೆಡೆ ಭೂಕುಸಿತವಾಗುತ್ತಿದೆ, ಈಗಾಗಲೇ ಕಲ್ಲು ಕ್ವಾರಿ ಕುಸಿತದಿಂದ 10 ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಮಿಜೋರಾಂನಲ್ಲಿ ರೆಮಲ್ ಚಂಡಮಾರುತದ ಅಬ್ಬರ, ಕಲ್ಲು ಕ್ವಾರಿ ಕುಸಿತ, 10 ಮಂದಿ ಸಾವು
ಚಂಡಮಾರುತ
Follow us on

ಮಿಜೋರಾಂನಲ್ಲೂ ರೆಮಲ್ ಚಂಡಮಾರುತ(Remal Cyclone)ದ ಅಬ್ಬರ ಹೆಚ್ಚಾಗಿದೆ, ಕಲ್ಲು ಕ್ವಾರಿ ಕುಸಿದು 10 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗೆ ಭಾರೀ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು ಹತ್ತು ಜನರು ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಮಲ್ ಚಂಡಮಾರುತವು ರಾಜ್ಯಾದ್ಯಂತ ಅನಾಹುತಗಳನ್ನು ಸೃಷ್ಟಿಸಿದೆ.

ನಂತರ ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಶವಗಳನ್ನು ಹೊರತೆಗೆಯಲಾಗಿದೆ. ಆದಾಗ್ಯೂ, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ: Remal Cyclone: ಪಶ್ಚಿಮ ಬಂಗಾಳದಲ್ಲಿ ರೆಮಲ್ ಚಂಡಮಾರುತ ಆರ್ಭಟ; ನಾಲ್ವರು ಸಾವು

ನಿರಂತರ ಮಳೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ರಕ್ಷಿಸಲ್ಪಟ್ಟ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಂತಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಭೂಕುಸಿತದಿಂದಾಗಿ ಐಜ್ವಾಲ್ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿದೆ ಎಂದು ಅವರು ಹೇಳಿದರು. ಭೂಕುಸಿತದಿಂದಾಗಿ ವಿವಿಧ ಅಂತರ್-ರಾಜ್ಯ ಹೆದ್ದಾರಿಗಳು ಸಹ ಅಸ್ತವ್ಯಸ್ತಗೊಂಡಿವೆ ಎಂದು ಅವರು ಹೇಳಿದರು.

ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವವರನ್ನು ಹೊರತುಪಡಿಸಿ ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ