Big News: ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿಯಿಂದ ಉಚ್ಛಾಟಿತ ಶಾಸಕ ರಾಜಾ ಸಿಂಗ್ ಮತ್ತೆ ಬಂಧನ
ಧರ್ಮದ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಉತ್ತೇಜಿಸಿದ್ದಕ್ಕಾಗಿ ಹೈದರಾಬಾದ್‌ನ ವಿವಿಧ ಭಾಗಗಳಲ್ಲಿ ಮತ್ತು ತೆಲಂಗಾಣದ ಇತರ ಜಿಲ್ಲೆಗಳಲ್ಲಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ನವದೆಹಲಿ: ಪ್ರವಾದಿ ಮೊಹಮ್ಮದ್ (Prophet Mohammad) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ 2 ಹಳೆಯ ಪ್ರಕರಣಗಳಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ (Raja Singh) ವಿರುದ್ಧ ನೋಟಿಸ್ ಜಾರಿಗೊಳಿಸಲಾಗಿತ್ತು. ಅದಾದ ನಂತರ ಹೈದರಾಬಾದ್ ಪೊಲೀಸರು ಅವರನ್ನು ಇಂದು ಮತ್ತೆ ಬಂಧಿಸಿದ್ದಾರೆ. ಹೈದರಾಬಾದ್ನಲ್ಲಿರುವ ರಾಜಾ ಸಿಂಗ್ ಅವರ ಮನೆಯಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆಗಸ್ಟ್ 23ರಂದು ರಾಜಾ ಸಿಂಗ್ ಅವರ ಬಂಧನದ ವಿರುದ್ಧ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿತ್ತು. ಬಳಿಕ ಅವರಿಗೆ ಜಾಮೀನು ಮಂಜೂರಾಗಿತ್ತು.
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ಶನಿನಾಯತ್‌ಗುಂಜ್ ಮತ್ತು ಮಂಗಲ್‌ಹಾಟ್ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಈ ಹಿಂದೆ ರಾಜಾ ಸಿಂಗ್ ಅವರ ವಿರುದ್ಧ ನೋಟಿಸ್‌ಗಳನ್ನು ನೀಡಿದ್ದರು.
ಮಂಗಲ್‌ಹಟ್ ಪೊಲೀಸರು ಫೆಬ್ರವರಿಯಲ್ಲಿ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವೈರಲ್ ಆಗಿದ್ದ ವಿಡಿಯೋ ಮೂಲಕ ಮತದಾರರಿಗೆ ಬೆದರಿಕೆ ಹಾಕಿದ್ದಕ್ಕಾಗಿ ದಾಖಲಿಸಲಾದ ದೂರಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದರು. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಬೇಗಂ ಬಜಾರ್‌ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿನಾಯತ್‌ಗುಂಜ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು.
ಇದನ್ನೂ ಓದಿ: Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
ಶಾಸಕರ ವಿರುದ್ಧ ನಿರಂತರ ಪ್ರತಿಭಟನೆಗಳು ಮತ್ತು ಹೈದರಾಬಾದ್‌ನ ಕೆಲವು ಭಾಗಗಳಲ್ಲಿ ಉದ್ವಿಗ್ನ ಪರಿಸ್ಥಿತಿಯ ನಡುವೆ ಈ ಬೆಳವಣಿಗೆ ನಡೆದಿದೆ. ಅವರ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಭಾರೀ ಪ್ರತಿಭಟನೆಗಳ ನಂತರ, ಪೊಲೀಸರು ಮಂಗಳವಾರ ರಾಜಾ ಸಿಂಗ್ ಅವರನ್ನು ಬಂಧಿಸಿದ್ದರು. ಆದರೆ, ಅದೇ ದಿನ ಅವರಿಗೆ ನಗರದ ನ್ಯಾಯಾಲಯ ಜಾಮೀನು ನೀಡಿತ್ತು.
#WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.
Massive protests had taken place on August 23, against the leader for his alleged statement. pic.twitter.com/PzwxHWHcY8
— ANI (@ANI) August 25, 2022
ಬಿಜೆಪಿ ಅಮಾನತುಗೊಂಡಿರುವ ಶಾಸಕ ರಾಜಾ ಸಿಂಗ್ ವಾಟ್ಸಾಪ್ ಮೂಲಕ ಪತ್ರಿಕಾ ಟಿಪ್ಪಣಿಯನ್ನು ಬಿಡುಗಡೆ ಮಾಡಿದ್ದು, ತೆಲಂಗಾಣ ಪೊಲೀಸ್ ಇಲಾಖೆಯು ವಿವಿಧ ಪೊಲೀಸ್ ಠಾಣೆಗಳಾದ ಶಾಹಿನಾಯತ್‌ಗುಂಜ್ ಮತ್ತು ಮಂಗಲ್‌ಹತ್ ಪಿಎಸ್‌ನಿಂದ ಎರಡು 41 (ಎ) ಸಿಆರ್‌ಪಿಸಿಯನ್ನು ನೀಡುವ ಮೂಲಕ ಸಂಚು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಇಂದು ಮತ್ತೆ ನನ್ನನ್ನು ಬಂಧಿಸಲು ಯೋಜನೆ ರೂಪಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಧರ್ಮದ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಉತ್ತೇಜಿಸಿದ್ದಕ್ಕಾಗಿ ಹೈದರಾಬಾದ್‌ನ ವಿವಿಧ ಭಾಗಗಳಲ್ಲಿ ಮತ್ತು ತೆಲಂಗಾಣದ ಇತರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೂ, ಅವರ ಜಾಮೀನು ಅರ್ಜಿಯ ಮೇಲಿನ ವಾದದ ಸಂದರ್ಭದಲ್ಲಿ, ಗರಿಷ್ಠ 7 ವರ್ಷಗಳ ಶಿಕ್ಷೆಯನ್ನು ಒದಗಿಸುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ಗಳ ಅಡಿಯಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಪೊಲೀಸರು ಅನುಸರಿಸಿಲ್ಲ ಎಂದು ಅವರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.
ಆಗಸ್ಟ್ 23ರಂದು ತೆಲಂಗಾಣದಲ್ಲಿ ನಡೆದ ಪ್ರತಿಭಟನೆಯ ನಂತರ ನಡೆಯುತ್ತಿರುವ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ ಇಂದು ಚಾರ್ ಮಿನಾರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವರ ಹೇಳಿಕೆಗಳ ಮೇಲೆ ಹೈದರಾಬಾದ್‌ನ ಶಾಲಿಬಂಡಾದಲ್ಲಿ ಪ್ರತಿಭಟನಾಕಾರರ ದೊಡ್ಡ ಗುಂಪು ಜಮಾಯಿಸಿತು. ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ 10 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡುವ ಮೂಲಕ ರಾಜಾ ಸಿಂಗ್ ಪ್ರತಿಭಟನೆಗೆ ಪ್ರಚೋದಿಸಿದ್ದರು. ಬಳಿಕ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಆದರೆ ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅವರ ಹೇಳಿಕೆಗಳು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿದೆ ಎಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು.