AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಗಂಡನಿಂದ ದೂರ ಇರುವ ಹೆಂಡತಿ ತಾಳಿ ತೆಗೆದಿಡುವುದು ತಪ್ಪು; ಡೈವೋರ್ಸ್​ಗೆ ಒಪ್ಪಿಗೆ ನೀಡಿದ ಕೋರ್ಟ್​

ಈ ಭಾಗದಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ತಾಳಿ ಕಟ್ಟುವುದು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಯಾವುದೇ ವಿವಾಹಿತ ಮಹಿಳೆ ತಾಳಿಯನ್ನು ತೆಗೆದು ಬ್ಯಾಂಕ್ ಲಾಕರ್​​ನಲ್ಲಿ ಇಡುವುದಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

Big News: ಗಂಡನಿಂದ ದೂರ ಇರುವ ಹೆಂಡತಿ ತಾಳಿ ತೆಗೆದಿಡುವುದು ತಪ್ಪು; ಡೈವೋರ್ಸ್​ಗೆ ಒಪ್ಪಿಗೆ ನೀಡಿದ ಕೋರ್ಟ್​
ಮಾಂಗಲ್ಯ
TV9 Web
| Edited By: |

Updated on:Jul 15, 2022 | 11:17 AM

Share

ಚೆನ್ನೈ: ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯ (ಮಂಗಳಸೂತ್ರ)ವನ್ನು ತೆಗೆದಿಟ್ಟರೆ ಅದರಿಂದ ಗಂಡನಿಗೆ ಮಾನಸಿಕ ಹಿಂಸೆಯಾಗುತ್ತದೆ ಎಂಬ ಕಾರಣ ನೀಡಿ ಮದ್ರಾಸ್​ ಕೋರ್ಟ್ (Madras Court)​​ ವ್ಯಕ್ತಿಯೊಬ್ಬನಿಗೆ ಡೈವೋರ್ಸ್​ ಪಡೆಯಲು ಅನುಮತಿ ನೀಡಿದೆ. ಪತ್ನಿ ಮಾಂಗಲ್ಯ (Mangalya) ಧರಿಸುತ್ತಿಲ್ಲ ಎಂಬುದನ್ನೂ ಒಂದು ಆಧಾರವಾಗಿಟ್ಟುಕೊಂಡು ನೊಂದ ವ್ಯಕ್ತಿಗೆ ಕೋರ್ಟ್​ ವಿಚ್ಛೇದನಕ್ಕೆ (Divorce) ಒಪ್ಪಿಗೆ ನೀಡಿದೆ.

ಈರೋಡ್‌ನ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ಶಿವಕುಮಾರ್ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಎಂ ವೇಲುಮಣಿ ಮತ್ತು ಎಸ್ ಸೌಂಥರ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತನಗೆ ವಿಚ್ಛೇದನ ನೀಡಲು ನಿರಾಕರಿಸಿದ ಸ್ಥಳೀಯ ಕೌಟುಂಬಿಕ ನ್ಯಾಯಾಲಯದ 2016 ಜೂನ್ 15ರ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಕೋರಿದ್ದರು.

ಈ ಬಗ್ಗೆ ಮಹಿಳೆಯ ವಿಚಾರಣೆ ನಡೆಸಿದಾಗ ಆಕೆ ಗಂಡನಿಂದ ದೂರವಿದ್ದ ಸಮಯದಲ್ಲಿ ಮಾಂಗಲ್ಯವನ್ನು ತೆಗೆದಿಟ್ಟಿದ್ದಾಗಿ ಒಪ್ಪಿಕೊಂಡಿದ್ದಾಳೆ. ತಾನು ತಾಳಿಯನ್ನು ಇನ್ನೂ ಇಟ್ಟುಕೊಂಡಿದ್ದೇನೆ. ಆದರೆ, ಅದರ ಜೊತೆಗಿದ್ದ ಕರಿಮಣಿ ಸರವನ್ನು ಮಾತ್ರ ತೆಗೆದಿದ್ದೇನೆ ಎಂದು ಆಕೆ ವಿವರಿಸಲು ಮುಂದಾದಳು. ಆಗ, ಮಾಂಗಲ್ಯವನ್ನು ತೆಗೆದುಹಾಕುವ ಕ್ರಿಯೆಗೆ ತನ್ನದೇ ಆದ ಮಹತ್ವವಿದೆ ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

ಆಕೆಯ ವಕೀಲರು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿ ಮಾತನಾಡಿದ್ದು, ವಿವಾಹಿತ ಮಹಿಳೆ ತಾಳಿ ಕೊಟ್ಟಿಕೊಳ್ಳಲೇಬೇಕೆಂಬ ನಿಯಮವಿಲ್ಲ ಎಂದು ಹೇಳಿದ್ದಾರೆ. ಮಾಂಗಲ್ಯ ಹಾಕಿಕೊಳ್ಳುವುದು ಅಥವಾ ತೆಗೆದಿಡುವುದು ವೈವಾಹಿಕ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಆದರೆ, ಈ ಭಾಗದಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ತಾಳಿ ಕಟ್ಟುವುದು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಯಾವುದೇ ವಿವಾಹಿತ ಮಹಿಳೆ ತಾಳಿಯನ್ನು ತೆಗೆದು ಬ್ಯಾಂಕ್ ಲಾಕರ್​​ನಲ್ಲಿ ಇಡುವುದಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

“ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದು ವೈವಾಹಿಕ ಜೀವನದ ನಿರಂತರತೆಯನ್ನು ಸಂಕೇತಿಸುತ್ತದೆ. ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಆದ್ದರಿಂದ, ಅರ್ಜಿದಾರರ ಹೆಂಡತಿ ಮಾಂಗಲ್ಯವನ್ನು ತೆಗೆದುಹಾಕುವ ಮೂಲಕ ಗಂಡನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಹೇಳಬಹುದು ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: Crime News: ಆಸ್ಪತ್ರೆಯಲ್ಲಿ ರೋಗಿಯ ಮಾಂಗಲ್ಯ ಕದ್ದ ಆರೋಪಿ ಬಂಧನ, ಕಾರಣ ಇಲ್ಲದೇ ತಮಟೆ ಬಾರಿಸಿದ್ದಕ್ಕೆ ಹಲ್ಲೆ

ಅಲ್ಲದೆ, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಪೊಲೀಸರ ಎದುರು ಆ ಮಹಿಳೆ ತನ್ನ ಗಂಡನಿಗೆ ಮಹಿಳಾ ಸಹೋದ್ಯೋಗಿಗಳೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಗಳನ್ನು ಮಾಡಿದ್ದಾಳೆ ಎಂದು ಪೀಠವು ಗಮನಿಸಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ತೀರ್ಪಿನ ಹಿನ್ನೆಲೆಯಲ್ಲಿ ಪತ್ನಿಯು ಪತಿಗೆ ಮಾನಸಿಕ ಹಿಂಸೆಯನ್ನು ಉಂಟುಮಾಡಿದ್ದಾಳೆ ಎಂದು ಹೇಳಲು ಯಾವುದೇ ಅನುಮಾನವಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಮೇಲ್ಮನವಿದಾರ ಮತ್ತು ಅವರ ಪತ್ನಿ 2011ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಅವಧಿಯಲ್ಲಿ ಪತ್ನಿ ಪುನರ್ಮಿಲನಕ್ಕೆ ಪ್ರಯತ್ನವನ್ನು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪ್ರಕರಣದ ಸತ್ಯಗಳು ಮತ್ತು ಸನ್ನಿವೇಶಗಳಲ್ಲಿ ಮತ್ತು ಹೆಂಡತಿಯು ತನ್ನ ಕೃತ್ಯದಿಂದ ಪತಿಗೆ ಮಾನಸಿಕ ಕ್ರೌರ್ಯವನ್ನುಂಟುಮಾಡಿದ್ದಾಳೆಂದು ನಾವು ಗಮನಿಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

Published On - 9:46 am, Fri, 15 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ