Jnanpith Award: ಖ್ಯಾತ ಉರ್ದು ಕವಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ
ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯ ಮತ್ತು ಖ್ಯಾತ ಉರ್ದು ಕವಿ ಗುಲ್ಜಾರ್ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. ಗುಲ್ಜಾರ್ ಈ ಹಿಂದೆ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ದೆಹಲಿ ಫೆಬ್ರುವರಿ 17: ಖ್ಯಾತ ಉರ್ದು ಕವಿ ಗುಲ್ಜಾರ್ (Gulzar) ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ (Rambhadracharya) ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ(Jnanpith Award,) ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿ, ಗೀತೆ ರಚನೆಕಾರರಾಗಿ ಗುರುತಿಸಿಕೊಂಡಿದ್ದು, ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು. ಗಜಲ್ ಮತ್ತು ಕಾವ್ಯ ಕ್ಷೇತ್ರದಲ್ಲಿ ಖ್ಯಾತಿಯನ್ನು ಗಳಿಸಿರುವ ಗುಲ್ಜಾರ್ ಅವರ ನಿಜವಾದ ಹೆಸರು ಸಂಪೂರ್ಣ ಸಿಂಗ್ ಕಲ್ರಾ. ಅವಿಭಜಿತ ಭಾರತದ ಝೇಲಂ ಜಿಲ್ಲೆಯ ದೇನಾ ಗ್ರಾಮದಲ್ಲಿ 18 ಆಗಸ್ಟ್ 1934 ರಂದು ಜನಿಸಿದ ಗುಲ್ಜಾರ್ ಅವರಿಗೆ ಶಾಲಾ ಕಲಿಕೆಯಲ್ಲಿ ಹೆಚ್ಚು ಆಸಕ್ತಿ ಇರಲಿಲ್ಲ. 12 ನೇ ಪರೀಕ್ಷೆಯಲ್ಲಿಯೂ ಅನುತ್ತೀರ್ಣರಾಗಿದ್ದ ಗುಲ್ಜಾರ್ಗೆ ಸಾಹಿತ್ಯದಲ್ಲಿ ಅಪಾರ ಒಲವು ಇತ್ತು.
ರವೀಂದ್ರನಾಥ ಟ್ಯಾಗೋರ್ ಮತ್ತು ಶರತ್ ಚಂದ್ ಅವರ ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿ, ಪ್ರೀತಿ ಹೊಂದಿದ್ದ ಗುಲ್ಜಾರ್ ಅವರಿಗೆ 002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿದೆ. ಗುಲ್ಜಾರ್ ಸಾಬ್ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.
Urdu poet Gulzar and Sanskrit litterateur Jagadguru Rambhadracharya selected for Jnanpith Award for 2023: Selection panel
— Press Trust of India (@PTI_News) February 17, 2024
ಪ್ರಶಸ್ತಿಗೆ ಭಾಜನರಾದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ ಮತ್ತು 100 ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಜನಿಸಿದ 2 ತಿಂಗಳಲ್ಲೇ ದೃಷ್ಟಿ ಕಳೆದುಕೊಂಡ ಜಗದ್ಗುರು ರಾಮಭದ್ರಾಚಾರ್ಯರು ಅತ್ಯುತ್ತಮ ಶಿಕ್ಷಕ ಮತ್ತು ಸಂಸ್ಕೃತ ಭಾಷಾ ಪಂಡಿತರಾಗಿದ್ದಾರೆ. ಜಗದ್ಗುರು ರಾಮಭದ್ರಾಚಾರ್ಯರಿಗೆ 22 ಭಾಷೆಗಳ ಜ್ಞಾನವಿದೆ. ಜಗದ್ಗುರು ರಾಮಭದ್ರಾಚಾರ್ಯರಿಗೆ ಭಾರತ ಸರ್ಕಾರ 2015 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಇದನ್ನೂ ಓದಿ:ಕುವೆಂಪು ಜನ್ಮದಿನ: ಇಲ್ಲಿದೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಪುಟ್ಟಪ್ಪನವರ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ
“ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಗುಲ್ಜಾರ್ ಎಂಬ ಎರಡು ಭಾಷೆಗಳ ಖ್ಯಾತ ಬರಹಗಾರರಿಗೆ (2023 ಕ್ಕೆ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಜ್ಞಾನಪೀಠದ ಆಯ್ಕೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಗೋವಾದ ಬರಹಗಾರ ದಾಮೋದರ್ ಮೌಜೊ ಅವರು 2022 ರ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:19 pm, Sat, 17 February 24