Defamation Case Against Narendra Modi: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ ರೇಣುಕಾ ಚೌಧರಿ

ಶೂರ್ಪನಕಿ ಎಂದು ಕರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ ಹೇಳಿದ್ದಾರೆ.

Defamation Case  Against Narendra Modi: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ ರೇಣುಕಾ ಚೌಧರಿ
ರೇಣುಕಾ ಚೌಧರಿ, ನರೇಂದ್ರ ಮೋದಿImage Credit source: ABP Live
Follow us
ನಯನಾ ರಾಜೀವ್
|

Updated on: Mar 24, 2023 | 9:24 AM

ಶೂರ್ಪನಕಿ ಎಂದು ಕರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ ಹೇಳಿದ್ದಾರೆ. 2018 ರಲ್ಲಿ ಅವರು ಸದನದಲ್ಲಿ ಭಾಷಣ ಮಾಡುವಾಗ, ಪ್ರಧಾನಿಯವರು ರೇಣುಕಾ ಚೌಧರಿಯವರ ನಗುವನ್ನು ಲೇವಡಿ ಮಾಡಿದ್ದರು ಮತ್ತು ಅವರ ನಗುವನ್ನು ರಾಮಾಯಣ, ಶೂರ್ಪನಕಿ ಪಾತ್ರಕ್ಕೆ ಪರೋಕ್ಷವಾಗಿ ಹೋಲಿಸಿದ್ದರು.

ಇದೀಗ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ರೇಣುಕಾ ಚೌಧರಿ ಕೂಡ ಪ್ರಧಾನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಮಾತನಾಡಿದ್ದಾರೆ. ಸದನದಲ್ಲಿ ನನ್ನನ್ನು ಶೂರ್ಪನಕಿ ಎಂದು ಮೋದಿ ಕರೆದಿದ್ದರು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರೇಣುಕಾ ಚೌಧರಿ ಬರೆದುಕೊಂಡಿದ್ದಾರೆ.

ಈ ತ್ವರಿತ ನ್ಯಾಯಾಲಯಗಳು ಈಗ ಹೇಗೆ ಕಾರ್ಯನಿರ್ವಹಿಸುತ್ತವೆ ಎಂದು ನೋಡಬೇಕು ಎಂದು ಲೇವಡಿ ಮಾಡಿದ್ದಾರೆ.

ಮತ್ತಷ್ಟು ಓದಿ: ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ತೀರ್ಪು ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ

ವಿವಾದ ಏನು? ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರೇಣುಕಾ ಚೌಧರಿ ಕೆಲವು ಬಾರಿ ಜೋರಾಗಿ ನಕ್ಕಿದ್ದರು. ಈ ಕುರಿತು ಪ್ರಧಾನಿಯವರು ಅಂದಿನ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ, ಸಭಾಪತಿಗಳೇ, ರೇಣುಕಾ ಜೀ ಅವರಿಗೆ ಏನನ್ನೂ ಹೇಳಬೇಡಿ ಎಂದು ನಾನು ವಿನಂತಿಸುತ್ತೇನೆ. ರಾಮಾಯಣ ಧಾರಾವಾಹಿಯ ನಂತರ ಇಂದು ಅಂತಹ ನಗುವನ್ನು ಕೇಳುವ ಭಾಗ್ಯ ಸಿಕ್ಕಿದೆ ಎಂದು ನಗೆ ಚಟಾಕಿ ಹಾರಿಸಿದ್ದರು.

ಪ್ರಧಾನಿ ಮೋದಿಯವರ ಈ ಮಾತಿಗೆ ಸದನದಲ್ಲಿ ಆಡಳಿತ ಪಕ್ಷದ ಸಂಸದರ ನಗು ಮೊಳಗಿತ್ತು. ಇನ್ನು ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್​ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿದೆ. ಆದರೆ, ರಾಹುಲ್ ಗಾಂಧಿಗೂ ಜಾಮೀನು ಸಿಕ್ಕಿದ್ದು, 30 ದಿನಗಳ ಕಾಲಾವಕಾಶ ಸಿಕ್ಕಿದೆ. ಈ ಸಮಯದಲ್ಲಿ ಅವರು ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುತ್ತದೆ. 2019 ರಲ್ಲಿ ತಮ್ಮ ಭಾಷಣವೊಂದರಲ್ಲಿ, ರಾಹುಲ್ ಗಾಂಧಿ ಅವರು ಎಲ್ಲಾ ಕಳ್ಳರಿಗೆ ಮೋದಿ ಅವರ ಉಪನಾಮ ಏಕೆ ಎಂದು ಹೇಳಿದ್ದರು.

ರಾಹುಲ್ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸುವ ನಿರ್ಧಾರವನ್ನು ಪ್ರತಿಪಕ್ಷ ನಾಯಕರು ಟೀಕಿಸಿದ್ದಾರೆ ಮತ್ತು ಸರ್ಕಾರವು ಸರ್ಕಾರಿ ಸಂಸ್ಥೆಗಳ ಸಹಾಯದಿಂದ ಪ್ರತಿಪಕ್ಷಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ಶುಕ್ರವಾರ ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಇನ್ನು ಹಲವು ವಿರೋಧ ಪಕ್ಷಗಳ ನಾಯಕರು ಕೂಡ ಮೆರವಣಿಗೆಯಲ್ಲಿ ಪಾಲ್ಗೊಳ್ಳಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ