ಪಹಲ್ಗಾಮ್ ದಾಳಿ, 26/11 ಮುಂಬೈ ದಾಳಿಯಂತೆಯೇ ಎಲ್​ಇಟಿ-ಐಎಸ್​ಐ ಜಂಟಿ ಯೋಜನೆಯಾಗಿತ್ತು

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯು 26 ಅಮಾಯಕರನ್ನು ಬಲಿ ಪಡೆದಿತ್ತು. ಈ ದಾಳಿಯ ಹಿಂದೆ ಐಎಸ್​ಐ ಹಾಗೂ ಲಷ್ಕರ್​-ಎ-ತೊಯ್ಬಾದ ಬೆಂಬಲವಿದ್ದು, ಪಾಕಿಸ್ತಾನದ ರಾಜಕೀಯ ಮತ್ತು ಮಿಲಿಟರಿ ಅಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎನ್ನವು ಮಾಹಿತಿಯೊಂದು ಬಹಿರಂಗಗೊಂಡಿದೆ. ಬೈಸರನ್ ಹುಲ್ಲುಗಾವಲುಗಳಲ್ಲಿ ಜನರನ್ನು ಅವರ ಧರ್ಮವನ್ನು ಕೇಳಿದ ಬಳಿಕ ಹತ್ಯೆ ಮಾಡಲಾಗಿತ್ತು. ಪಾಕಿಸ್ತಾನಿ ಭಯೋತ್ಪಾದಕರು ಮಾತ್ರ ನಡೆಸಿದ್ದರು , ಈ ಯೋಜನೆಯಲ್ಲಿ ಯಾವುದೇ ಕಾಶ್ಮೀರಿ ಭಯೋತ್ಪಾದಕರನ್ನು ಸೇರಿಸಿಕೊಂಡಿರಲಿಲ್ಲ ಎಂದು ಗುಪ್ತಚರ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

ಪಹಲ್ಗಾಮ್ ದಾಳಿ,  26/11 ಮುಂಬೈ ದಾಳಿಯಂತೆಯೇ ಎಲ್​ಇಟಿ-ಐಎಸ್​ಐ ಜಂಟಿ ಯೋಜನೆಯಾಗಿತ್ತು
ಪಹಲ್ಗಾಮ್

Updated on: Jul 15, 2025 | 10:37 AM

ನವದೆಹಲಿ, ಜುಲೈ 15: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರ ದಾಳಿಯು 26/11 ಮುಂಬೈ ದಾಳಿಯಂತೆಯೇ ಎಲ್​ಇಟಿ-ಐಎಸ್​ಐ ಜಂಟಿ ಯೋಜನೆಯಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.  ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯು 26 ಅಮಾಯಕರನ್ನು ಬಲಿ ಪಡೆದಿತ್ತು. ಈ ದಾಳಿಯ ಹಿಂದೆ ಐಎಸ್​ಐ ಹಾಗೂ ಲಷ್ಕರ್​-ಎ-ತೊಯ್ಬಾದ ಬೆಂಬಲವಿದ್ದು, ಪಾಕಿಸ್ತಾನದ ರಾಜಕೀಯ ಮತ್ತು ಮಿಲಿಟರಿ ಅಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎನ್ನವು ಮಾಹಿತಿಯೊಂದು ಬಹಿರಂಗಗೊಂಡಿದೆ.

ಬೈಸರನ್ ಹುಲ್ಲುಗಾವಲುಗಳಲ್ಲಿ ಜನರನ್ನು ಅವರ ಧರ್ಮವನ್ನು ಕೇಳಿದ ಬಳಿಕ ಹತ್ಯೆ ಮಾಡಲಾಗಿತ್ತು. ಪಾಕಿಸ್ತಾನಿ ಭಯೋತ್ಪಾದಕರು ಮಾತ್ರ ನಡೆಸಿದ್ದರು , ಈ ಯೋಜನೆಯಲ್ಲಿ ಯಾವುದೇ ಕಾಶ್ಮೀರಿ ಭಯೋತ್ಪಾದಕರನ್ನು ಸೇರಿಸಿಕೊಂಡಿರಲಿಲ್ಲ ಎಂದು ಗುಪ್ತಚರ ಸಂಸ್ಥೆ ವರದಿಯಲ್ಲಿ ತಿಳಿಸಿದೆ.
ಪಹಲ್ಗಾಮ್ ದಾಳಿಯು 26/11 ಮುಂಬೈ ದಾಳಿಯಂತೆಯೇ ಎಲ್​ಇಟಿ-ಐಎಸ್​ಐ ಯೋಜನೆಯಾಗಿತ್ತು.

ಪಾಕಿಸ್ತಾನಿ ಬೇಹುಗಾರಿಕೆ ಸಂಸ್ಥೆ ಲಷ್ಕರ್ ಕಮಾಂಡರ್ ಸಾಜಿದ್ ಜಟ್ಟ್‌ಗೆ ವಿದೇಶಿ ಭಯೋತ್ಪಾದಕರನ್ನು ಮಾತ್ರ ಸೇರಿಸಿಕೊಳ್ಳುವಂತೆ ಮತ್ತು ಯೋಜನೆಯಲ್ಲಿ ಕನಿಷ್ಠ ಸ್ಥಳೀಯ ಒಳಗೊಳ್ಳುವಿಕೆಯನ್ನು ಹೊಂದಿರುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಮತ್ತಷ್ಟು ಓದಿ: ಪಹಲ್ಗಾಮ್​ ದಾಳಿಗೆ ಒಂದು ತಿಂಗಳು, ಆಪರೇಷನ್​ ಸಿಂಧೂರ್​ನಿಂದ ಸರ್ವಪಕ್ಷ ಸಂಸದರ ನಿಯೋಗ ರಚನೆವರೆಗೆ ಇಲ್ಲಿದೆ ಮಾಹಿತಿ

ಪಾಕಿಸ್ತಾನದ ಮಾಜಿ ವಿಶೇಷ ಪಡೆಗಳ ಕಮಾಂಡೋ ಸುಲೈಮಾನ್ ಈ ದಾಳಿಯ ನೇತೃತ್ವ ವಹಿಸಿದ್ದ ಎಂದು ಹೇಳಲಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಭಯೋತ್ಪಾದಕ ಸಂಘಟನೆಯ ಪ್ರಧಾನ ಕಚೇರಿ ಇರುವ ಮುರಿಡ್ಕೆಯಲ್ಲಿ ಲಷ್ಕರ್ ಭಯೋತ್ಪಾದಕರಿಗೆ ತರಬೇತಿ ನೀಡುತ್ತಿದ್ದ ಅವರು 2022 ರಲ್ಲಿ ಜಮ್ಮು ಪ್ರದೇಶದ ನಿಯಂತ್ರಣ ರೇಖೆಯನ್ನು ದಾಟಿದ್ದರು. ದಾಳಿ ನಡೆಸಿದ ತಂಡದಲ್ಲಿ ಇತರ ಇಬ್ಬರು ಪಾಕಿಸ್ತಾನಿಗಳು ಕೂಡ ಭಾಗಿಯಾಗಿದ್ದರು ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ವರದಿಯ ಪ್ರಕಾರ, ಏಪ್ರಿಲ್ 2023 ರಲ್ಲಿ ಪೂಂಚ್‌ನಲ್ಲಿ ಭಾರತೀಯ ಸೇನಾ ಟ್ರಕ್ ಮೇಲೆ ನಡೆದ ದಾಳಿಯಲ್ಲಿ ಸುಲೈಮಾನ್ ಕೂಡ ಭಾಗಿಯಾಗಿದ್ದ, ಇದರಲ್ಲಿ ಐದು ಸೈನಿಕರು ಸಾವನ್ನಪ್ಪಿದ್ದರು. ಬಳಿಕ ಆತ ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ಗುರುತುಗಳನ್ನು ಮೂಲಗಳು ಬಹಿರಂಗಪಡಿಸಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us