Supreme Court CJI: ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಸಿಜೆಐ ಡಿವೈ ಚಂದ್ರಚೂಡ್

|

Updated on: Oct 17, 2024 | 9:20 AM

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಜೆಐ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ನಂತರ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ.

Supreme Court CJI: ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಸಿಜೆಐ ಡಿವೈ ಚಂದ್ರಚೂಡ್
ಡಿವೈ ಚಂದ್ರಚೂಡ್
Image Credit source: The Indian Express
Follow us on

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಚಾರವಾಗಿ ಕೊಲಿಜಿಯಂನಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆಯೇ, ಸಂಪ್ರದಾಯದಂತೆ ಸಿಜೆಐ ಅವರು ತಮ್ಮ ನಂತರದ ಹಿರಿಯ ನ್ಯಾಯಮೂರ್ತಿಯ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.

ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ ಉತ್ತರಾಧಿಕಾರಿಯಾಗಬೇಕು ಎಂದು ಕೇಂದ್ರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದಾರೆ.

ಸಿಜೆಐ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ನಂತರ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ. ಅವರು ಡಿಸೆಂಬರ್ 17, 2022 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅವರ ತಂದೆ YV ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ (CJI)ಯಾಗಿದ್ದು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸ್ಥಾನದಲ್ಲಿದ್ದರು.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು 2025ರ ಮೇನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಸುಪ್ರೀಂ ಕೋರ್ಟ್‌ ಮುಖ್ಯ ನಾಯಮೂರ್ತಿಯಾಗಿದ್ದ ಯುಯು ಲಲಿತ್‌ ಅವರ ನಿವೃತ್ತಿ ನಂತರ ಡಿವೈ ಚಂದ್ರಚೂಡ್‌ ಅವರು 2022ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಮತ್ತಷ್ಟು ಓದಿ: ಕಾನೂನು ಕುರುಡಲ್ಲ; ಸುಪ್ರೀಂ ಕೋರ್ಟ್‌ನಲ್ಲಿ ಕಣ್ಣು ತೆರೆದ ಹೊಸ ನ್ಯಾಯದೇವತೆ ಪ್ರತಿಮೆ ಅನಾವರಣ

ನ್ಯಾಯಮೂರ್ತಿ ಸಂಜೀವ್ ಖನ್ನಾ ಯಾರು?
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನವೆಂಬರ್ 10, 2024 ರಿಂದ ಮೇ 13, 2025 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುವ ನಿರೀಕ್ಷೆಯಿದೆ.

ಖನ್ನಾ ಅವರು 14 ವರ್ಷಗಳ ಕಾಲ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದರು. ಅವರು ತೆರಿಗೆ, ವಾಣಿಜ್ಯ ಕಾನೂನುಗಳಲ್ಲಿ ತಮ್ಮ ಪರಿಣತಿ ಹೊಂದಿದ್ದಾರೆ.

ಮೇ 14, 1960 ರಂದು ಜನಿಸಿದ ಖನ್ನಾ ಅವರು ದೆಹಲಿ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿಯನ್ನು ಪಡೆದರು ಮತ್ತು 1983 ರಲ್ಲಿ ಅಭ್ಯಾಸವನ್ನು ಪ್ರಾರಂಭಿಸಿದರು. ಆರಂಭದಲ್ಲಿ ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಾರಂಭಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ