ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್ ಬಿಷ್ಣೋಯ್ 60 ಶೂಟರ್ಗಳನ್ನು ನೇಮಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹಲವು ವರ್ಷಗಳಿಂದ ಸಲ್ಮಾನ್ ಖಾನ್ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿದ್ದರು.
ಲಾರೆನ್ಸ್ ಸೇರಿರುವ ಬಿಷ್ಣೋಯ್ ಸಮುದಾಯವು ಕೃಷ್ಣಮೃಗವನ್ನು ಪವಿತ್ರವೆಂದು ಪರಿಗಣಿಸುತ್ತದೆ, ಇದು ಲಾರೆನ್ಸ್ ಅಸಮಾಧಾನಕ್ಕೆ ಮೂಲ ಕಾರಣವೆಂದೇ ಹೇಳಬಹುದು. ಜೀ ನ್ಯೂಸ್‌ನ ಇತ್ತೀಚಿನ ವರದಿಯ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್‌ಗೆ ಅನೇಕ ಬಾರಿ ಬೆದರಿಕೆಗಳನ್ನು ಹಾಕಿದೆ.
ಗ್ಯಾಂಗ್ 60 ಶೂಟರ್ಗಳನ್ನು ನೇಮಿಸಿಕೊಂಡಿದ್ದು, ಖಾನ್ ಸುರಕ್ಷತೆ ಕುರಿತು ಗಂಭೀರ ಕಳವಳ ಉಂಟಾಗಿದೆ.
ಈಗಾಗಲೇ ಪದೇ ಪದೇ ಬೆದರಿಕೆಯೊಡ್ಡುತ್ತಿರುವುದರಿಂದ ಸಲ್ಮಾನ್ ಖಾನ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಮತ್ತಷ್ಟು ಓದಿ: ಬಾಬಾ ಸಿದ್ದಿಕಿ ಹಂತಕರಿಗೆ ಶಸ್ತ್ರಾಸ್ತ್ರ ಒದಗಿಸಿದ್ದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್
ಶನಿವಾರ ನಡೆದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಘಟನೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ.
ಬಾಬಾ ಸಿದ್ದಿಕಿ ಕಚೇರಿಯಿಂದ ಮನೆಗೆ ಮರಳುತ್ತಿರುವ ಸಮಯದಲ್ಲಿ ದುಷ್ಕರ್ಮಿಗಳು ಆರು ಸುತ್ತಿನ ಗುಂಡು ಹಾರಿಸಿದ್ದರು ಅದರಲ್ಲಿ 3 ಗುಂಡುಗಳು ಸಿದ್ದಿಕಿ ದೇಹ ಹೊಕ್ಕಿದ್ದವು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ, ಅವರು ಸಲ್ಮಾನ್ ಖಾನ್ಗೂ ಆಪ್ತರಾಗಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ