Uniform Civil Code: ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

|

Updated on: Jun 30, 2023 | 9:17 AM

ಮುಂದಿನ ತಿಂಗಳು ಆರಂಭವಾಗಲಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕೆ ಸಂಹಿತೆಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

Uniform Civil Code: ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ
ನರೇಂದ್ರ ಮೋದಿ
Image Credit source: Outlook
Follow us on

ಮುಂದಿನ ತಿಂಗಳು ಆರಂಭವಾಗಲಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code) ಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ. ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಬಹುದು. ಹಲವಾರು ರಾಜ್ಯಗಳಲ್ಲಿ ಚುನಾವಣೆಗಳು ಸಮೀಪಿಸುತ್ತಿರುವಾಗ ರಾಜಕೀಯ ಲಾಭಕ್ಕಾಗಿ ಯುಸಿಸಿ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಹಲವಾರು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಂತೆ ಪ್ರಧಾನಿ ಮೋದಿಯವರ ಹೇಳಿಕೆಯು ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಯಿತು.

ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರದ ಪರಿಸ್ಥಿತಿಯಂತಹ ನೈಜ ಸಮಸ್ಯೆಗಳಿಂದ ದಿಕ್ಕು ತಪ್ಪಿಸುವ ತಂತ್ರವಾಗಿ ಪ್ರಧಾನಿ ಮೋದಿ ಯುಸಿಸಿ ಸಮಸ್ಯೆಯನ್ನು ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ಧರ್ಮಗಳು, ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಆಧರಿಸಿದ ವೈಯಕ್ತಿಕ ಕಾನೂನುಗಳನ್ನು ಧರ್ಮ, ಜಾತಿ, ಪಂಥ, ಲೈಂಗಿಕ ದೃಷ್ಟಿಕೋನ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲರಿಗೂ ಒಂದು ಸಾಮಾನ್ಯ ಕಾನೂನಿನೊಂದಿಗೆ ಬದಲಿಸುವ ಗುರಿಯನ್ನು ಹೊಂದಿದೆ.

ಮತ್ತಷ್ಟು ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ

ಏಕರೂಪ ನಾಗರಿಕ ಸಂಹಿತೆ ಸಂಬಂಧಿಸಿದಂತೆ ಕಾನೂನು ಆಯೋಗ ಇತ್ತೀಚೆಗೆ, ಜನರಿಂದ ಅಭಿಪ್ರಾಯ ಕೇಳಿತ್ತು, ಇದಕ್ಕಾಗಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು ಅದು ಜುಲೈ 14ಕ್ಕೆ ಕೊನೆಗೊಳ್ಳಲಿದೆ.

ಬುಡಕಟ್ಟು ಮತ್ತು ಇತರೆ ಸಮಾಜಗಳ ಜನರು ಸಂಹಿತೆಯನ್ನು ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೇ ಎಂಬುದನ್ನು ಬಿಜೆಪಿ ಹೇಳಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದರು.

ಆದರೆ ಬಿಜೆಪಿ ಈ ವಿಚಾರದಲ್ಲಿ ಹಿಂದೆ ಸರಿಯುವಂತೆ ಕಾಣುತ್ತಿಲ್ಲ, ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂಸತ್ ಮುಂಗಾರು ಅಧಿವೇಶನವು ಜುಲೈ ಕೊನೆಯ ವಾರದಲ್ಲಿ ಆರಂಭವಾಗಿ ಆಗಸ್ಟ್ 10ಕ್ಕೆ ಮುಗಿಯಬಹುದು ಎಂದು ಅಂದಾಜಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜುಲೈ 17 ಅಥವಾ 20ರಿಂದ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ