ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಅವರ ಜನ್ಮ ದಿನಾಚರಣೆಯನ್ನು ಒಳಗೊಂಡಂತೆ ಈ ಬಾರಿಯ ಗಣರಾಜ್ಯೋತ್ಸವವು (Republic Day) ಜನವರಿ 23 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರಿ ಮೂಲಗಳ ಹೇಳಿಕೆಯನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಪ್ರತಿ ವರ್ಷ ಜನವರಿ 24ರಿಂದ ಗಣರಾಜ್ಯೋತ್ಸವದ ಆಚರಣೆ ಆರಂಭವಾಗುತ್ತಿತ್ತು. ‘‘ ದೇಶದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲು ಮತ್ತು ಆಚರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳಲ್ಲಿ ಇದೂ ಒಂದಾಗಿದೆ’’ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲು ಸರ್ಕಾರ ಪ್ರಾರಂಭಿಸಿತ್ತು.
Republic Day Celebrations will now begin every year from 23rd January instead of 24th January to include the birth anniversary of Subash Chandra Bose: GoI Sources
— ANI (@ANI) January 15, 2022
ಸರ್ಕಾರವು ಅನೇಕ ಮಹನೀಯರ ದಿನಾಚರಣೆಗಳನ್ನು ಆಚರಿಸುತ್ತಿದೆ. ಆಗಸ್ಟ್ 14 ಅನ್ನು ‘ವಿಭಜನೆಯ ಕರಾಳ ನೆನಪಿನ ದಿನ’, ಅಕ್ಟೋಬರ್ 31 ಅನ್ನು ‘ರಾಷ್ಟ್ರೀಯ ಏಕತಾ ದಿನ’ (ಸರ್ದಾರ್ ಪಟೇಲ್ ಅವರ ಜನ್ಮದಿನ), ನವೆಂಬರ್ 15 ‘ಜನಜಾತಿಯ ಗೌರವ ದಿವಸ’ (ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಮತ್ತು ಡಿಸೆಂಬರ್ 26 ಅನ್ನು ವೀರ್ ಬಾಲ್ ದಿವಸ್ (ಗುರು ಗೋಬಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ಆಗಿ ಆಚರಿಸಲಾಗುತ್ತದೆ.
ಇದೇ ಮಾದರಿಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯನ್ನು ‘ಪರಾಕ್ರಮ್ ದಿವಸ್’ ಆಗಿ ಆಚರಿಸಲಾಗುತ್ತದೆ. ಈ ಬಾರಿ ಸರ್ಕಾರವು ಅದನ್ನು ಗಣರಾಜ್ಯೋತ್ಸವ ಆಚರಣೆಯ ವೇಳಾಪಟ್ಟಿಗೆ ಸೇರಿಸಿದೆ. ಈ ಮೂಲಕ ವಿಶೇಷ ಗೌರವ ಸಲ್ಲಿಸಲಾಗುತ್ತದೆ.
ಇದನ್ನೂ ಓದಿ:
RRB NTPC 2021ರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ ರೈಲ್ವೆ ನೇಮಕಾತಿ ಮಂಡಳಿ; ಪರಿಶೀಲಿಸುವ ವಿಧಾನ ಇಲ್ಲಿದೆ