Delhi violence ನಟ ದೀಪ್ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.
Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಘಟನೆ ನಡೆದಾಗಿನಿಂದ ದೀಪ್ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್, ಸುಖ್ದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.
ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್.ಪಟೇಲ್ ನೇತೃತ್ವದ ಪೀಠ ವಜಾಗೊಳಿಸಿದೆ.
ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್ಬರ್ಗ್
Published On - 1:22 pm, Wed, 3 February 21