ಸಮನ್ಸ್ ಇಲ್ಲದೆಯೇ ಸಂಪಾದಕ ಅರ್ನಬ್ ಅರೆಸ್ಟ್

| Updated By: ಸಾಧು ಶ್ರೀನಾಥ್​

Updated on: Nov 04, 2020 | 11:00 AM

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ ವ್ಯಾನ್‌ನಲ್ಲಿ ಕರೆದೊಯ್ದಿದ್ದಾರೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಾಬ್ ಪ್ರಚೋದನೆ ನೀಡಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಇಂದು ಬೆಳಗ್ಗೆ ಮುಂಬೈನಲ್ಲಿರುವ ಅರ್ನಾಬ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ. ಇನ್ನು ರಿಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ವಿಡಿಯೋದಲ್ಲಿ ಮುಂಬೈ ಪೊಲೀಸರು ಅರ್ನಾಬ್ ಬಂಧನದ ವೇಳೆ ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹಾಗೂ ತಮ್ಮ ಪತ್ನಿ, ಮಗ, ಅತ್ತೆ-ಮಾವಂದಿರ ಮೇಲೆ […]

ಸಮನ್ಸ್ ಇಲ್ಲದೆಯೇ ಸಂಪಾದಕ ಅರ್ನಬ್ ಅರೆಸ್ಟ್
Follow us on

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ ವ್ಯಾನ್‌ನಲ್ಲಿ ಕರೆದೊಯ್ದಿದ್ದಾರೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಾಬ್ ಪ್ರಚೋದನೆ ನೀಡಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಇಂದು ಬೆಳಗ್ಗೆ ಮುಂಬೈನಲ್ಲಿರುವ ಅರ್ನಾಬ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ವಿಡಿಯೋದಲ್ಲಿ ಮುಂಬೈ ಪೊಲೀಸರು ಅರ್ನಾಬ್ ಬಂಧನದ ವೇಳೆ ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹಾಗೂ ತಮ್ಮ ಪತ್ನಿ, ಮಗ, ಅತ್ತೆ-ಮಾವಂದಿರ ಮೇಲೆ ಕೂಡ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಅರ್ನಾಬ್ ಗೋಸ್ವಾಮಿ ತಿಳಿಸಿದ್ದಾರೆ.

Published On - 9:14 am, Wed, 4 November 20