AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು

ಮಹಾರಾಷ್ಟ್ರದ ರಾಜಕಾರಣದಲ್ಲಿ ಶಿವಸೇನೆ (ಯುಬಿಟಿ) ಪಕ್ಷದೊಳಗೆ ಮತ್ತೆ ಬಿರುಕು ಅಥವಾ ಬಂಡಾಯದ ವದಂತಿಗಳು ಜೋರಾಗಿವೆ. ಇದರ ಬೆನ್ನಲ್ಲೇ ಸಂಸದರಿಗೆ ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯ ಯಶಸ್ಸಿನ ಬೆನ್ನಲ್ಲೇ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷಕ್ಕೆ ಮತ್ತೆ ಬಂಡಾಯದ ಭೀತಿ ಎದುರಾಗಿದೆ. ಪಕ್ಷದ ಸಂಸದರನ್ನು ಸೆಳೆಯಲು ತಲಾ 50 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು
Sanjay RautImage Credit source: PTI
ಸುಷ್ಮಾ ಚಕ್ರೆ
|

Updated on: Jun 17, 2026 | 4:45 PM

Share

ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಶಿವಸೇನೆ ಠಾಕ್ರೆ ಬಣದ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಹಗಲಿರುಳು ಶ್ರಮಿಸಿ ಇವರನ್ನು ಲೋಕಸಭೆಗೆ ಗೆಲ್ಲಿಸಿದ್ದಾರೆ. ಉದ್ಧವ್ ಠಾಕ್ರೆ ಅವರ ನಾಯಕತ್ವ ಹಾಗೂ ಪಕ್ಷದ ಚಿಹ್ನೆಯಡಿ ಗೆದ್ದು ಬಂದಿರುವ ಸಂಸದರು, ಈಗ ಪಕ್ಷದಲ್ಲಿ ಇರಲು ಇಷ್ಟವಿಲ್ಲದಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಗುಡುಗಿದ್ದಾರೆ. ಆಶ್ಚರ್ಯದ ಸಂಗತಿಯೆಂದರೆ, ಉದ್ಧವ್ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಕೇವಲ ಮೂವರು (ಅರವಿಂದ್ ಸಾವಂತ್, ಅನಿಲ್ ದೇಸಾಯಿ ಮತ್ತು ರಾಜಾಭಾವು ವಾಜೆ) ಮಾತ್ರ ಸಂಜಯ್ ರಾವತ್ ಅವರ ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು?

ನಮ್ಮ ಪಕ್ಷದ ಸಂಸದರನ್ನು ಸೆಳೆಯಲು ವಿರೋಧಿ ಬಣಗಳು ಮತ್ತು ತೃತೀಯ ಶಕ್ತಿಗಳು ಹಣದ ಹೊಳೆಯನ್ನೇ ಹರಿಸುತ್ತಿವೆ ಎಂದು ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಸಂಸದರನ್ನು ಖರೀದಿಸಲು ತಲಾ 50 ಕೋಟಿ ರೂ. ಹಾಗೂ ಇತರೆ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಿದೆ. ಕೆಲವು ಸಂಸದರನ್ನು ರಹಸ್ಯವಾಗಿ ಕರೆದೊಯ್ಯಲು ಈಗಾಗಲೇ ವಿಶೇಷ ಚಾರ್ಟರ್ಡ್ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಪಕ್ಷದ ‘ವಿಪ್’ ಈಗಲೂ ಜಾರಿಯಲ್ಲಿದೆ. ಪಕ್ಷದ ಅಸ್ತಿತ್ವದ ಕಾನೂನು ಹೋರಾಟ ಮುಂದುವರಿದಿದ್ದು, ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಕುರಿತು ಲೋಕಸಭಾ ಸ್ಪೀಕರ್ ಅವರಿಗೆ ಅಧಿಕೃತ ಪತ್ರ ಬರೆಯಲಾಗಿದೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ