AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆ ಹೆಚ್ಚಳ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳ ಉಂಟಾಗಿದ್ದು, ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದೆ. ರಾಜಸ್ಥಾನ, ಕರ್ನಾಟಕ, ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಆದೇಶವನ್ನು ನೀಡಿದೆ.

ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆ ಹೆಚ್ಚಳ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 29, 2023 | 10:57 AM

Share

ಚೀನಾದಲ್ಲಿ (China) ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳ ಉಲ್ಬಣಗೊಂಡಿದ್ದು, ಇದೀಗ ಭಾರತದಲ್ಲೂ ಕೂಡ ಆತಂಕ ಸೃಷ್ಟಿಯಾಗಿದ್ದು, ಈ ಕಾರಣಕ್ಕೆ ಆರೋಗ್ಯ ಇಲಾಖೆ ರಾಜ್ಯಗಳಿಗೂ ಈ ಬಗ್ಗೆ ನಿರ್ದೇಶನ ನೀಡಿದೆ. ಒಟ್ಟು ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಲರ್ಟ್​​ ಆಗಿರುವಂತೆ ಆದೇಶವನ್ನು ನೀಡಿದೆ., ಎಲ್ಲ ಆರೋಗ್ಯ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡುವಂತೆ ಹಾಗೂ ಈಗಾಗಲೇ ಎಲ್ಲ ರೀತಿಯ ಪರೀಕ್ಷೆಗೂ ಸಿದ್ದತೆ ಮಾಡಿಕೊಳ್ಳವಂತೆ ಹೇಳಿದೆ.

ರಾಜಸ್ಥಾನ, ಕರ್ನಾಟಕ, ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಆದೇಶವನ್ನು ನೀಡಿದೆ. ಈ ರಾಜ್ಯದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ಕ್ರಮವಹಿಸುವಂತೆ ನಿರ್ದೇಶನದಲ್ಲಿ ತಿಳಿಸಿದೆ.

ಇನ್ನು ಈ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಜಾಗೃತೆಯನ್ನು ವಹಿಸಿಕೊಂಡಿದೆ. ಕಾಲೋಚಿತ ಜ್ವರದ ಬಗ್ಗೆ ನಾಗರಿಕರು ಜಾಗೃತರಾಗಿರಲು ಕೇಳಿಕೊಂಡಿದೆ. ಕಾಲೋಚಿತ ಜ್ವರದ ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳನ್ನು ಬಗ್ಗೆ ಪಟ್ಟಿ ಮಾಡಿದೆ. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಕಿಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್​​​​ ಬಳಸಬೇಕು ಎಂದು ಹೇಳಿದೆ.

ಇನ್ನು ರಾಜಸ್ಥಾನ ಆರೋಗ್ಯ ಇಲಾಖೆ ತಿಳಿಸಿರುವಂತೆ ರಾಜ್ಯದಲ್ಲಿ ಅಂತಹ ಯಾವುದೇ ಆತಂಕದ ಸ್ಥಿತಿ ಇಲ್ಲ. ಆದರೆ ವೈದ್ಯಕೀಯ ಸಿಬ್ಬಂದಿ ಜಾಗರೂಕರಾಗಿರಿ ಮತ್ತು ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬೇಕು. ಮಕ್ಕಳ ಘಟಕಗಳು ಮತ್ತು ಔಷಧ ವಿಭಾಗಗಳಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.

ಗುಜರಾತ್‌ನ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರು COVID-19 ಸಾಂಕ್ರಾಮಿಕ ಸಮಯದಲ್ಲಿ ರಚಿಸಲಾದ ಆರೋಗ್ಯ ಮೂಲಸೌಕರ್ಯಗಳನ್ನೇ ಈಗ ಚೀನಾದಲ್ಲಿ ಉಂಟಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಬಲಪಡಿಸಲಾಗುತ್ತಿದೆ ಎಂದು ಹೇಳಿದರು. ತಮ್ಮ ಸಿದ್ಧತೆಯನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರವು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದೆ.

ಇದನ್ನೂ ಓದಿ: China Virus: ನ್ಯುಮೋನಿಯಾ ಹೆಚ್ಚಳ, ಇದರ ಹಿಂದೆ ಯಾವುದೇ ವೈರಸ್​ಗಳ ಪ್ರಭಾವವಿಲ್ಲ ಎಂದು ಚೀನಾ ಹೇಳಿದೆ: WHO

ಉತ್ತರಾಖಂಡ ಸರ್ಕಾರವು ಉಸಿರಾಟದ ಕಾಯಿಲೆಗಳ ಪ್ರಕರಣಗಳಿಗೆ ಕಣ್ಗಾವಲು ಹೆಚ್ಚಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಉತ್ತರಾಖಂಡದ ಮೂರು ಜಿಲ್ಲೆಗಳಾದ ಚಮೋಲಿ, ಉತ್ತರಕಾಶಿ ಮತ್ತು ಪಿಥೋರಗಢ ಚೀನಾದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಇಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಲಾಗುವುದು ಎಂದು ಹೇಳಿದ್ದಾರೆ.

ಹರಿಯಾಣ ಆರೋಗ್ಯ ಇಲಾಖೆಯು ಕೂಡ ನಿರ್ದೇಶನವನ್ನು ಹೊರಡಿಸಿದೆ, ಸಾರ್ವಜನಿಕ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಅಸಾಧಾರಣ ಉಸಿರಾಟದ ಕಾಯಿಲೆಯು ಕಂಡುಬಂದರು, ಅದನ್ನು ತಕ್ಷಣವೇ ವರದಿ ಮಾಡಬೇಕು ಎಂದು ಹೇಳಿದೆ. ಇನ್ನು ತಮಿಳುನಾಡಿನಲ್ಲಿ, ರಾಜ್ಯ ಆರೋಗ್ಯ ಇಲಾಖೆಯು ಸಿದ್ಧತೆಗಳನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ನಿರ್ದೇಶನವನ್ನು ನೀಡಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ