AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ದೇಶದಲ್ಲಿ ಕಮರ್ಷಿಯಲ್ ಎಲ್​ಪಿಜಿ ಬಿಕ್ಕಟ್ಟು ಉಂಟಾಗಿರುವುದರಿಂದ ಕೆಲವು ಹೋಟೆಲ್​ಗಳೇ ಬಾಗಿಲು ಮುಚ್ಚಿವೆ. ಇನ್ನು ಕೆಲವು ಹೋಟೆಲ್​ಗಳಲ್ಲಿ ದುಪ್ಪಟ್ಟು ಹಣ ಪಡೆಯಲಾಗುತ್ತಿದೆ. ಮತ್ತೆ ಕೆಲವು ರೆಸ್ಟೋರೆಂಟ್​ಗಳಲ್ಲಿ ಮೆನುವನ್ನು ಕಡಿತಗೊಳಿಸಲಾಗಿದೆ. ಹಾಗೇ, ಕೆಲವು ರೆಸ್ಟೋರೆಂಟ್ ಮತ್ತು ಹೋಟೆಲ್​ಗಳು ತಮ್ಮ ಬಿಲ್​ನಲ್ಲಿ ಎಲ್​ಪಿಜಿ ಗ್ಯಾಸ್​ ಶುಲ್ಕವನ್ನೂ ಸೇರಿಸುತ್ತಿರುವುದು ಬೆಳಕಿಗೆ ಬಂದಿದೆ. ಇನ್ಮುಂದೆ ನೀವು ಹೋಗುವ ಹೋಟೆಲ್​ಗಳ ಬಿಲ್​ನಲ್ಲಿ ಈ ಶುಲ್ಕ ಕಂಡುಬಂದರೆ ನೀವು ಸುಮ್ಮನೆ ಹಣ ಕೊಟ್ಟು ಬರಬೇಕಾಗಿಲ್ಲ. ಆ ರೀತಿ ಎಲ್​ಪಿಜಿ ಶುಲ್ಕ ವಿಧಿಸಿದ ಹೋಟೆಲ್ ವಿರುದ್ಧ ಗ್ರಾಹಕರು ಕ್ರಮ ಕೈಗೊಳ್ಳಬಹುದು. ಆ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?
Hotel BillImage Credit source: iStock
ಸುಷ್ಮಾ ಚಕ್ರೆ
|

Updated on:Mar 25, 2026 | 7:55 PM

Share

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಈ ರೀತಿ ಹಣ ವಸೂಲಿ ಮಾಡುವುದು ಅಕ್ರಮ. ಗ್ಯಾಸ್ ಸರ್‌ಚಾರ್ಜ್, ಇಂಧನ ರಿಕವರಿ ಹೆಸರಿನಲ್ಲಿ ಬಿಲ್ ಮಾಡೋದು ಶಿಕ್ಷಾರ್ಹ ಅಪರಾಧ. ಮೆನುವಿನಲ್ಲಿ ಉಲ್ಲೇಖಿಸಲಾದ ಬೆಲೆಗೆ ಅನ್ವಯವಾಗುವ ತೆರಿಗೆಗಳನ್ನು ಮಾತ್ರ ಸೇರಿಸಬಹುದು ಎಂದು ಸೂಚಿಸಿದೆ. ಹೆಚ್ಚುವರಿ ಶುಲ್ಕದಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ. ಆಹಾರದ ಬೆಲೆಯಲ್ಲೇ ವೆಚ್ಚ ಸೇರಿರಬೇಕು ಎಂದು ಸಿಸಿಪಿಎ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಮನೆಯಲ್ಲಿ ಪಿಎನ್​ಜಿ ಕನೆಕ್ಷನ್ ಇದ್ದರೂ ಬಳಸದಿದ್ದರೆ ಎಲ್​ಪಿಜಿ ಪೂರೈಕೆ ಸ್ಥಗಿತ; ಸರ್ಕಾರದಿಂದ ಎಚ್ಚರಿಕೆ

ಇಂಧನ, LPG, ವಿದ್ಯುತ್ ಮತ್ತು ಇತರ ಕಾರ್ಯಾಚರಣೆಯ ವೆಚ್ಚಗಳಂತಹ ಇನ್‌ಪುಟ್ ವೆಚ್ಚಗಳು ವ್ಯವಹಾರವನ್ನು ನಡೆಸುವ ವೆಚ್ಚದ ಭಾಗವಾಗಿದೆ. ಅದು ಮೆನು ಐಟಂಗಳ ಬೆಲೆಯಲ್ಲಿ ಸೇರಿಸಬೇಕು ಎಂದು CCPA ಸ್ಪಷ್ಟಪಡಿಸಿದೆ.

ಆಹಾರದ ಬೆಲೆಯಲ್ಲೇ ಇಂಧನ ಮತ್ತು ಸೇವೆಯ ವೆಚ್ಚ ಸೇರಿರಬೇಕೆಂದು ಸೂಚಿಸಲಾಗಿದೆ. ಬೆಲೆ ಮತ್ತು ಅನ್ವಯವಾಗುವ ತೆರಿಗೆ ಹೊರತುಪಡಿಸಿ ಬೇರೆ ಶುಲ್ಕ ವಿಧಿಸುವಂತಿಲ್ಲ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕದಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಹಾಗೇ, ಕಾನೂನಿನಿಂದ ಪಾರಾಗಲು ಹೊಸ ಹೆಸರಲ್ಲಿ ಹಣ ಪಡೆಯುವುದು ಕೂಡ ಅಪರಾಧವಾಗಿದೆ. ಸೇವಾ ಶುಲ್ಕದ ನಿಯಮ ತಪ್ಪಿಸಲು ಹಣ ಪಡೆಯುವುದು ಅಪರಾಧ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಹೆಚ್ಚು ಹಣ ಪಡೆದರೆ ನೀವೇನು ಮಾಡಬೇಕು?:

ಅನಗತ್ಯ ಚಾರ್ಜ್‌ಗಳ ವಿರುದ್ಧ ನೀವು ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ದೂರು ನೀಡಬಹುದು. ಹೆಲ್ಪ್​ಲೈನ್ 1915 ಅಥವಾ ಇ-ಜಾಗೃತಿ ಪೋರ್ಟಲ್ ಮೂಲಕ ದೂರು ಸಲ್ಲಿಸಬಹುದು. ಡಿಸಿ ಅಥವಾ ಸಿಸಿಪಿಎಗೆ ಇ-ಮೇಲ್ ಮೂಲಕವೂ ದೂರು ನೀಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Wed, 25 March 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ