‘ಕೆಲಸ ಪುನರಾರಂಭಿಸಿ, ನಾನು ಕ್ರಮ ಕೈಗೊಳ್ಳುವುದಿಲ್ಲ’: ಕೋಲ್ಕತ್ತಾ ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ದಿಢೀರ್ ಭೇಟಿ
ನೀವು ಮಳೆಯಲ್ಲಿ ನೆನೆದು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬೇಡಿಕೆಗಳನ್ನು ಅಧ್ಯಯನ ಮಾಡುತ್ತೇನೆ, ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮಮತಾ ಬ್ಯಾನರ್ಜಿ ಪ್ರತಿಭಟನಾನಿರತ ವೈದ್ಯರಿಗೆ ಹೇಳಿದ್ದಾರೆ.
ಕೋಲ್ಕತ್ತಾ ಸೆಪ್ಟೆಂಬರ್ 14: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಶನಿವಾರ ಸ್ವಾಸ್ಥ್ಯ ಭವನದ ಹೊರಗೆ ಪ್ರತಿಭಟನಾನಿರತ ವೈದ್ಯರನ್ನು ಭೇಟಿ ಮಾಡಿದ್ದಾರೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಪ್ರಶಿಕ್ಷಣ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ ಕೆಲಸಕ್ಕೆ ಮರಳುವಂತೆ ಮಮತಾ ಒತ್ತಾಯಿಸಿದ್ದಾರೆ.
“ನೀವು ಮಳೆಯಲ್ಲಿ ನೆನೆದು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬೇಡಿಕೆಗಳನ್ನು ಅಧ್ಯಯನ ಮಾಡುತ್ತೇನೆ, ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮಮತಾ ಬ್ಯಾನರ್ಜಿ ಪ್ರತಿಭಟನಾನಿರತ ವೈದ್ಯರಿಗೆ ಹೇಳಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆಮಮತಾ ಬ್ಯಾನರ್ಜಿ ಭೇಟಿ
#WATCH | RG Kar Medical College and Hospital rape-murder case: West Bengal CM Mamata Banerjee reaches Swasthya Bhawan in Kolkata to meet the protesting doctors. pic.twitter.com/AbtdOAisKh
— ANI (@ANI) September 14, 2024
ನಾನು ನಿಮ್ಮನ್ನು ಭೇಟಿಯಾಗಲು ನಿಮ್ಮ ‘ದೀದಿ’ಯಾಗಿ ಬರಬೇಕೇ ಹೊರತು ಮುಖ್ಯಮಂತ್ರಿಯಾಗಿ ಅಲ್ಲ ಎಂದೂ ಬ್ಯಾನರ್ಜಿ ಹೇಳಿದ್ದಾರೆ. “ನಿಮ್ಮ ಪ್ರತಿಭಟನೆಯ ಉದ್ದೇಶ ನನಗೆ ಅರ್ಥವಾಗಿದೆ. ನಾನು ವಿದ್ಯಾರ್ಥಿ ನಾಯಕಿಯೂ ಆಗಿದ್ದೆ. ನಿಮಗೆ ನ್ಯಾಯ ಕೊಡಿಸುತ್ತೇನೆ. ನಿಮ್ಮ ಸಹಾಯವಿಲ್ಲದೆ ಹಿರಿಯರು (ವೈದ್ಯರು) ಕೆಲಸ ಮಾಡಲು ಸಾಧ್ಯವಾಗುವುದಿಲ್ಲ, ಕೆಲಸವನ್ನು ಪುನರಾರಂಭಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ನಿಮ್ಮ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತಾ ವೈದ್ಯರ ಪ್ರತಿಭಟನೆ
ಸಾಲ್ಟ್ ಲೇಕ್‌ನಲ್ಲಿರುವ ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಚೇರಿಯ ಹೊರಗೆ ವೈದ್ಯಾಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಐದನೇ ದಿನಕ್ಕೆ ಕಾಲಿಟ್ಟಿದೆ.
ನಗರದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದರೂ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ನ್ಯಾಯಕ್ಕಾಗಿ ಅವರು ಒತ್ತಾಯಿಸಿದ್ದಾರೆ. ಸೆಪ್ಟೆಂಬರ್ 10 ರಂದು ಸಂಜೆ 5 ಗಂಟೆಗೆ ಪ್ರತಿಭಟನಾಕಾರರು ಕೆಲಸ ಪುನರಾರಂಭಿಸುವಂತೆ ಸುಪ್ರೀಂಕೋರ್ಟ್ ನೀಡಿದ ಗಡುವನ್ನು ಲೆಕ್ಕಿಸದೆ ಪ್ರತಿಭಟನೆ ಮುಂದುವರಿದಿದೆ.
ಆರ್‌ಜಿ ಆಸ್ಪತ್ರೆಯಲ್ಲಿ ನಡೆದ ಘಟನೆ ವೇಳೆ ತಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾಗಿರುವ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್, ಆರೋಗ್ಯ ಕಾರ್ಯದರ್ಶಿ ಎನ್.ಎಸ್.ನಿಗಂ, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 9 ರಿಂದ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದ ಎಲ್ಲಾ ಮಹಿಳಾ ಆರೋಗ್ಯ ವೃತ್ತಿಪರರಿಗೆ ಸಾಕಷ್ಟು ಸುರಕ್ಷತೆ ಮತ್ತು ಭದ್ರತಾ ಕ್ರಮಗಳನ್ನು ಒದಿಗಸಬೇಕು ಎಂದು ಪ್ರತಿಭಟನಾಕಾರರು ಬೇಡಿಕೆಯೊಡ್ಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ