AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಟ್ರಸ್ಟ್​ನ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಕ ಮಾಡಲಾಗಿದೆ. ದೇವಾಲಯದಲ್ಲಿ ಕಾಣಿಕೆ ಹಣ ಕಳವಿನ ಪ್ರಕರಣ ಬೆಳಕಿಗೆ ಬಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವ್ಯಾಪಕ ವಾಗ್ದಾಳಿ ನಡೆಸಿದ ಕೆಲವು ತಿಂಗಳ ನಂತರ, ಅಯೋಧ್ಯೆ ರಾಮಮಂದಿರವನ್ನು ನಿರ್ವಹಿಸುವ ಟ್ರಸ್ಟ್‌ನಲ್ಲಿ ಶಾಸನಬದ್ಧ ಮತ್ತು ಆಡಳಿತಾತ್ಮಕ ಬದಲಾವಣೆಗಳು ಆರಂಭವಾಗಿವೆ. ಇನ್ಮುಂದೆ ದೇವಾಲಯದ ಆಡಳಿತ ಮತ್ತು ಹಣಕಾಸಿನ ವ್ಯವಹಾರಗಳನ್ನು ಟ್ರಸ್ಟ್ ಮುಖ್ಯಸ್ಥರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ನಿರ್ವಹಿಸಲಿದ್ದಾರೆ.

ರಾಮ ಮಂದಿರ ಟ್ರಸ್ಟ್​ನ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ
ಜಿತೇಂದ್ರ ಮಿಶ್ರಾ Image Credit source: PTI
ಸುಷ್ಮಾ ಚಕ್ರೆ
|

Updated on:Sep 02, 2026 | 5:09 PM

Share

ಅಯೋಧ್ಯೆ, ಸೆಪ್ಟೆಂಬರ್ 2: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮೊದಲ ಸಿಇಒ ಆಗಿ ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಮ ಮಂದಿರದಲ್ಲಿ ಇತ್ತೀಚೆಗೆ ನಡೆದ ಕಾಣಿಕೆ ಹುಂಡಿಯ ಹಣ ಕಳವು ಪ್ರಕರಣದ ನಂತರ ಆಡಳಿತ ವೈಫಲ್ಯಗಳನ್ನು ತಡೆಯಲು ಮತ್ತು ಪಾರದರ್ಶಕತೆ ತರಲು ರಾಮ ಮಂದಿರ ಟ್ರಸ್ಟ್ ಈ ಪ್ರಮುಖ ನಿರ್ಧಾರಕ್ಕೆ ಬಂದಿದೆ.

ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ ನೇತೃತ್ವದ ತ್ರಿ-ಸದಸ್ಯ ಶೋಧನಾ ಸಮಿತಿಯು ನಡೆಸಿದ 600 ಅಂಕಗಳ ಕಠಿಣ ಮೌಲ್ಯಮಾಪನ ಮತ್ತು ಸಂದರ್ಶನಗಳ ನಂತರ, ಅಂತಿಮವಾಗಿ ಪರಿಶೀಲಿಸಿದ ಮೂವರು ಅತ್ಯಂತ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರ ಹೆಸರು ಮುಂಚೂಣಿಯಲ್ಲಿದೆ.

ಮಿಲಿಟರಿ ಹಿನ್ನೆಲೆ, ಸುದೀರ್ಘ ನಿರ್ವಹಣಾ ಅನುಭವ ಮತ್ತು ನಿಸ್ಸೀಮ ಪ್ರಾಮಾಣಿಕತೆಯನ್ನು ಪರಿಗಣಿಸಿ ಜಿತೇಂದ್ರ ಮಿಶ್ರಾ ಅವರ ಹೆಸರನ್ನು ಟ್ರಸ್ಟ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಕೋಟ್ಯಂತರ ರೂ. ವೆಚ್ಚದ ಯೋಜನೆಗಳು, ದೇಣಿಗೆ ನಿರ್ವಹಣೆ ಮತ್ತು ಭದ್ರತಾ ಚೌಕಟ್ಟನ್ನು ಬಲಪಡಿಸುವುದು ನೂತನ ಸಿಇಒ ಜಿತೇಂದ್ರ ಮಿಶ್ರಾ ಅವರ ಪ್ರಮುಖ ಜವಾಬ್ದಾರಿಯಾಗಲಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ವದಂತಿಗೆ ತೆರೆ: 3,300 ಕೋಟಿ ರೂ. ಲೆಕ್ಕಪತ್ರ ಪಕ್ಕಾ

ಇದುವರೆಗೂ ಟ್ರಸ್ಟ್ ಪದಾಧಿಕಾರಿಗಳೇ ಆಡಳಿತಾತ್ಮಕ ಮತ್ತು ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಆದರೆ, ರಾಮ ಮಂದಿರ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆಯ ನಂತರ, ಇನ್ಮುಂದೆ ರಾಮಮಂದಿರದ ಸಮಗ್ರ ನಿರ್ವಹಣೆ ಮತ್ತು ದಿನನಿತ್ಯದ ಆಡಳಿತಾತ್ಮಕ ಉಸ್ತುವಾರಿಯನ್ನು ಟ್ರಸ್ಟಿಗಳ ಬದಲಿಗೆ ಸಿಇಒ ನೇತೃತ್ವದ ತಂಡವೇ ನೋಡಿಕೊಳ್ಳಲಿದೆ.

ರಾಮಮಂದಿರ ಟ್ರಸ್ಟ್‌ಗೆ ಮೂವರು ಹೊಸ ಟ್ರಸ್ಟಿಗಳು:

ಇದಕ್ಕೂ ಮುನ್ನ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಆಡಳಿತಾತ್ಮಕ ಪುನರ್ ರಚನೆಯ ಭಾಗವಾಗಿ ಮೂವರು ಹೊಸ ಟ್ರಸ್ಟಿಗಳನ್ನು ನೇಮಿಸಲಾಯಿತು. ದೆಹಲಿ ಮೂಲದ ಮಹೇಶ್ ಭಗಚಂದ್ಕಾ, ಅಯೋಧ್ಯೆಯ ಮದನ್ ಮೋಹನ್ ಪಾಂಡೆ ಮತ್ತು ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಹೊಸ ಟ್ರಸ್ಟಿಗಳಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಾಣಿಕೆ ಹಣ ಎಣಿಕೆಗೆ ಸಂಬಂಧಿಸಿದಂತೆ 8 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಕಳವು ಪ್ರಕರಣ ಭಾರಿ ರಾಜಕೀಯ ಚರ್ಚೆಗೆ ಕಾರಣವಾದ ನಂತರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ನೀಡಬೇಕಾಯಿತು. ಬ್ಯಾಂಕಿನ ಸಡಿಲವಾದ ಭದ್ರತಾ ಕ್ರಮಗಳೇ ಈ ಕಳ್ಳತನಕ್ಕೆ ಕಾರಣ ಎಂದು ಚಂಪತ್ ರಾಯ್ ಎಸ್​ಐಟಿಗೆ ತಿಳಿಸಿದ್ದರು.

ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಯಾರು?:

ಸರ್ವೋತ್ತಮ ಯುದ್ಧ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ ಅತ್ಯುನ್ನತ ನಿವೃತ್ತ ಅಧಿಕಾರಿಯಾಗಿದ್ದಾರೆ. ಅವರು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ 38 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು ಹಲವು ಪ್ರಮುಖ ಕಮಾಂಡಿಂಗ್ ಹಾಗೂ ಸಿಬ್ಬಂದಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಈ ನೂತನ ನೇಮಕಾತಿಗೆ ಮೊದಲು ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ (ಆಪರೇಷನ್ಸ್) ಡೆಪ್ಯುಟಿ ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 2 September 26

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು