ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ: ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳಿಂದ ಪ್ರಧಾನಿ ಮೋದಿಗೆ ಪತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ತಾರತಮ್ಯವನ್ನು ಪರಿಹರಿಸುವಂತೆ 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಇಸ್ಕಾನ್ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಅವರು ಮಧ್ಯಸ್ಥಿಕೆವಹಿಸಬೇಕೆಂದು ಮನವಿ ಮಾಡಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ತಾರತಮ್ಯವನ್ನು ಪರಿಹರಿಸುವಂತೆ 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಇಸ್ಕಾನ್ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಅವರು ಮಧ್ಯಸ್ಥಿಕೆವಹಿಸಬೇಕೆಂದು ಮನವಿ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, 68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, IAS, IPS, IRS, IIS, IFS ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್ನ ಚಿನ್ಮಯ್ ಕೃಷ್ಣ ಅವರ ಅನ್ಯಾಯದ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಯಾವುದೇ ತಪ್ಪಿಲ್ಲದೆ ಬಂಧನಕ್ಕೊಳಗಾಗಿರುವ ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆಗೆ ಒತ್ತಾಯಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಅನ್ಯಾಯವಾಗಿ ಬಂಧಿಸಲ್ಪಟ್ಟಿರುವ ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡುವುದು ಅತ್ಯಗತ್ಯ. ಅವರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ಅವರ ಕಳವಳಗಳನ್ನು ವ್ಯಕ್ತಪಡಿಸುವ ಅವರ ಹಕ್ಕುಗಳನ್ನು ಎತ್ತಿಹಿಡಿಯಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.
ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್
ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ತಕ್ಷಣದ ರಕ್ಷಣೆ ಕೊಡಬೇಕು, ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆ, ಹಿಂದೂ ಮಹಿಳೆಯರಿಗೆ ನ್ಯಾಯ, ಉದ್ಯೋಗ ಮತ್ತು ಆಸ್ತಿ ಹಕ್ಕುಗಳ ರಕ್ಷಣೆ ಮತ್ತು ಬಾಂಗ್ಲಾದೇಶದ ಮೇಲೆ ಅಂತರರಾಷ್ಟ್ರೀಯ ನಿರ್ಬಂಧಗಳ ಬಗ್ಗೆ ಭಾರತ ಸರ್ಕಾರವು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
Hon’ble PM @narendramodi, we, a group of 68 retired Judge of High Court, IAS, IPS, IRS, IIS, IFS and state officers, along with a sitting Member of Parliament, have signed and submitted an urgent appeal regarding the atrocities against Hindus in Bangladesh, including the unjust… pic.twitter.com/doQRRksPzb
— Shesh Paul Vaid (@spvaid) November 27, 2024
ಚಿನ್ಮಯ್ ಅವರನ್ನು ಸೋಮವಾರ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಮತ್ತು ಮಂಗಳವಾರ ಚಿತ್ತಗಾಂಗ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ಅಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು ಮತ್ತು ಅವರನ್ನು ಕಸ್ಟಡಿಯಲ್ಲಿ ಇರಿಸಲಾಯಿತು. ಢಾಕಾ ಟ್ರಿಬ್ಯೂನ್ ವರದಿ ಮಾಡಿದಂತೆ, ಅವರು ಆರನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕಾಜಿ ಶರೀಫುಲ್ ಇಸ್ಲಾಂ ಅವರ ಮುಂದೆ ಹಾಜರಾದರು.
ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರೂ, ಅದನ್ನು ತಿರಸ್ಕರಿಸಲಾಯಿತು ಮತ್ತು ನಂತರ ಅವರನ್ನು ಜೈಲಿಗೆ ಕಳುಹಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ