ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ ನಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುವಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಘಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಗಾಯಗೊಂಡಿದ್ದರು. ಇದೀಗ ಆ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿಯ ವೇಳೆ ಮೊಹಮ್ಮದ್ ಶಫಿ ಮಿರ್ ಮುಂಜಾನೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಉಗ್ರರು ಪರಾರಿಯಾಗಿದ್ದಾರೆ . ಪೊಲೀಸರು ಮತ್ತು ಸೇನಾ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಉಗ್ರರ ಶೋಧ ನಡೆಯುತ್ತಿದೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:30 am, Sun, 24 December 23