ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯುವುದರ ಬಗ್ಗೆ ಸುಳಿವು ನೀಡಿದ ರಾಜನಾಥ್ ಸಿಂಗ್

ಪಾಕಿಸ್ತಾನವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳನ್ನು ಖಾಲಿ ಮಾಡಬೇಕು ಎಂದು ನಿರ್ಣಯದಲ್ಲಿ ಹೇಳಿದೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯುವುದರ ಬಗ್ಗೆ ಸುಳಿವು ನೀಡಿದ ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 27, 2022 | 4:28 PM

ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರವನ್ನು (PoK) ಹಿಂಪಡೆಯುವುದು ಮೋದಿ ಸರ್ಕಾರದ ಕಾರ್ಯಸೂಚಿಯಲ್ಲಿದೆ ಎಂದು ಹೇಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಸಂಸತ್ತಿನಲ್ಲಿ ಅಂಗೀಕರಿಸಿದ 1994 ರ ನಿರ್ಣಯವನ್ನು ಜಾರಿಗೆ ತರಲು ಭಾರತ ಬದ್ಧವಾಗಿದೆ ಎಂದು ಗುರುವಾರ ಹೇಳಿದ್ದಾರೆ. 1994 ಫೆಬ್ರವರಿ 22ರಂದು ಸಂಸತ್ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಿತು. ಪಾಕಿಸ್ತಾನವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳನ್ನು ಖಾಲಿ ಮಾಡಬೇಕು ಎಂದು ನಿರ್ಣಯದಲ್ಲಿ ಹೇಳಿದೆ. “ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಸೇರಿದಂತೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವ ಬಗ್ಗೆ ಸಂಸತ್ತಿನಲ್ಲಿ ಅಂಗೀಕರಿಸಿದ ನಿರ್ಣಯವನ್ನು ಜಾರಿಗೆ ತರಲು ಭಾರತ ಬದ್ಧವಾಗಿದೆ” ಎಂದು ‘ಶೌರ್ಯ ದಿವಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ ಸಿಂಗ್ ಹೇಳಿದ್ದಾರೆ. ಅಕ್ಟೋಬರ್ 27 ಅನ್ನು ಪದಾತಿಸೈನ್ಯದ ದಿನ (ಶೌರ್ಯ ದಿವಸ್) ಎಂದು ಆಚರಿಸಲಾಗುತ್ತದೆ. . ಈ ದಿನದಂದು ಸೇನೆಯು ಪಾಕಿಸ್ತಾನಿ ಆಕ್ರಮಣಕಾರರ ವಿರುದ್ಧ ಹೋರಾಡಿತು ಮತ್ತು 1947 ರಲ್ಲಿ ಅವರನ್ನು ಹಿಮ್ಮೆಟ್ಟುವಂತೆ ಮಾಡಿತು. ಬುದ್ಗಾಮ್ ಹೋರಾಟವು ಸ್ವತಂತ್ರ ಭಾರತದ ಮೊದಲ ಮಿಲಿಟರಿ ಕಾರ್ಯಾಚರಣೆಯಾಗಿದೆ. ಗುರುವಾರ ಈ ಪ್ರಮುಖ ಘಟನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಚಿತ್ರಹಿಂಸೆ ಮತ್ತು ಕಿರುಕುಳ ಸಾಮಾನ್ಯ ಎಂಬಂತಿರುವ ಪಿಒಕೆಯ ಪ್ರತಿಯೊಬ್ಬ ನಾಗರಿಕನ ನೋವನ್ನು ಭಾರತ ಅನುಭವಿಸುತ್ತದೆ ಎಂದು ರಕ್ಷಣಾ ಸಚಿವರು ಹೇಳಿದರು. ತಥಾಕಥಿತ ಬುದ್ಧಿಜೀವಿಗಳ ವಿರುದ್ಧ ಗುಡುಗಿದ ಸಿಂಗ್ “ಸೇನೆ ಅಥವಾ ರಾಜ್ಯ ಭದ್ರತಾ ಪಡೆಗಳಿಂದ ಭಯೋತ್ಪಾದಕರ ವಿರುದ್ಧ ಕ್ರಮದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ” ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಹೇಳಿದರು.

“ನಮ್ಮ ಪಡೆಗಳ ಮೇಲೆ ಅದೇ ಭಯೋತ್ಪಾದಕರು ದಾಳಿ ಮಾಡಿದಾಗ ಅಥವಾ ಸಾರ್ವಜನಿಕರ ಮೇಲೆ ದಾಳಿ ಮಾಡಿದಾಗ ಮತ್ತು ನಿರ್ದಯತೆಯಿಂದ ನಡೆಸಿಕೊಂಡಾಗ ಮಾನವ ಹಕ್ಕುಗಳ ಮೇಲಿನ ಕಾಳಜಿ ಎಲ್ಲಿಗೆ ಹೋಗುತ್ತದೆ?” ಸಿಂಗ್ ಕೇಳಿದರು.

ಪಾಕಿಸ್ತಾನ ಸರ್ಕಾರವು ಪಿಒಕೆಯಲ್ಲಿ ದ್ವೇಷದ ಬೀಜಗಳನ್ನು ಬಿತ್ತುತ್ತಿದೆ ಮತ್ತು ಜನರು ಅಲ್ಲಿ ಸಾಮೂಹಿಕ ದಂಗೆಯನ್ನು ಆಶ್ರಯಿಸುವ ಸಮಯ ದೂರವಿಲ್ಲ ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರ , ಲಡಾಖ್ ಅವಳಿ ಕೇಂದ್ರಾಡಳಿತ ಪ್ರದೇಶಗಳಿಗೆ ಮೂರು ದಿನಗಳ ಭೇಟಿಯಲ್ಲಿರುವ ರಕ್ಷಣಾ ಸಚಿವರು, “ಪಒಕೆ ಜನರು ಎಲ್ಲಾ ಮೂಲಭೂತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ” ಎಂದು ಹೇಳಿದರು. 1947ರಲ್ಲಿ ಕಾಶ್ಮೀರವನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಕಿಡಿಗೇಡಿತನ ಮಾಡಲು ಯತ್ನಿಸಿದ ಶತ್ರುಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿತ್ತು. “ನಮ್ಮ ಶತ್ರುಗಳನ್ನು ಬೇರುಸಹಿತ ಕಿತ್ತೊಗೆಯಲು ಮತ್ತು ದೇಶದ ಸಾರ್ವಭೌಮತ್ವವನ್ನು ರಕ್ಷಿಸುವ ನಮ್ಮ ಪ್ರತಿಜ್ಞೆ ಬಗ್ಗೆ ಕಾಲಾಳುಪಡೆ ದಿನವು ನಮಗೆ ನೆನಪಿಸುತ್ತದೆ” ಎಂದು ಸಿಂಗ್ ಹೇಳಿದರು. ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಮತ್ತು ಭಯೋತ್ಪಾದಕರ ಏಕೈಕ ಗುರಿ ಭಾರತವನ್ನು ಗುರಿಯಾಗಿಸುವುದು ಎಂದು ಅವರು ಹೇಳಿದರು.

ಆರ್ಟಿಕಲ್ 370 ರ ಅಡಿಯಲ್ಲಿ ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಜನರ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸಿದೆ. ಆಗಸ್ಟ್ 5, 2019 ಕ್ಕಿಂತ ಮೊದಲು, ಕಾಶ್ಮೀರಿ ಸಮಾಜವನ್ನು ವಿಭಾಗಗಳಾಗಿ ವಿಂಗಡಿಸಲಾಗಿತ್ತು. ಆದರೆ ಈಗ ಎಲ್ಲಾ ವಿಭಾಗಗಳು ಸಮಾಜವು ಒಟ್ಟಾಗಿ ಯಶಸ್ಸು ಮತ್ತು ಸಮೃದ್ಧಿಯತ್ತ ಸಾಗುತ್ತಿದೆ ಎಂದಿದ್ದಾರೆ ಸಿಂಗ್.

ಈ ತಿಂಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಎರಡನೇ ಕೇಂದ್ರ ಸಚಿವರಾಗಿದ್ದಾರೆ ರಾಜನಾಥ್ ಸಿಂಗ್. ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಕ್ಟೋಬರ್ 4 ರಿಂದ ಮೂರು ದಿನಗಳ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಜಮ್ಮ ಕಾಶ್ಮೀರ ಭೇಟಿ ನಂತರ ರಕ್ಷಣಾ ಸಚಿವರು ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳಿಗೆ ಎರಡು ದಿನಗಳ ಭೇಟಿಗಾಗಿ ಲೇಹ್‌ಗೆ ತಲುಪುತ್ತಾರೆ.

Published On - 4:17 pm, Thu, 27 October 22

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ