AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಎಣ್ಣೆಯ ವ್ಯಾಪಕ ಮರುಬಳಕೆ, ಎಚ್ಚರಿಕೆ ನೀಡಿದ ಮಾನವ ಹಕ್ಕುಗಳ ಸಂಸ್ಥೆ

ಭಾರತದಲ್ಲಿ ಅಡುಗೆ ಎಣ್ಣೆಯ ಮರುಬಳಕೆಯಿಂದ ಯುವಕರಲ್ಲಿ ಹೃದಯ ಕಾಯಿಲೆ, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಎನ್‌ಎಚ್‌ಆರ್‌ಸಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಎಫ್‌ಎಸ್‌ಎಸ್‌ಎಐಗೆ ನೋಟಿಸ್ ಜಾರಿ ಮಾಡಿದೆ. ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ. ಈ ಎಣ್ಣೆಯ ಬಳಕೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿ.

ಅಡುಗೆ ಎಣ್ಣೆಯ ವ್ಯಾಪಕ ಮರುಬಳಕೆ, ಎಚ್ಚರಿಕೆ ನೀಡಿದ ಮಾನವ ಹಕ್ಕುಗಳ ಸಂಸ್ಥೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 25, 2025 | 12:43 PM

Share

ಇತ್ತೀಚಿನ ದಿನಗಳಲ್ಲಿ ಭಾರತದ ಯುವಕರಲ್ಲಿ ಆರೋಗ್ಯ ಸಮಸ್ಯೆ, ಹೃದಯ ಕಾಯಿಲೆ, ಇನ್ನು ಅನೇಕ ಅನಾರೋಗ್ಯ ಉಂಟಾಗಲು ಮರುಬಳಕೆ ಮಾಡಿದ ಎಣ್ಣೆಗಳು (reused cooking oil) ಕಾರಣ ಎಂದು ಹೇಳಲಾಗಿದೆ. ದೇಶದಲ್ಲಿ ಅಡುಗೆ ಎಣ್ಣೆಯನ್ನು ವ್ಯಾಪಕವಾಗಿ ಮರುಬಳಕೆ ಮಾಡಲಾಗುತ್ತಿದೆ ಎಂದು ಎನ್‌ಎಚ್‌ಆರ್‌ಸಿಗೆ ದೂರು ನೀಡಲಾಗಿದೆ. ಇದೀಗ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಎನ್‌ಎಚ್‌ಆರ್‌ಸಿ (ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ) ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)ಕ್ಕೆ ನೋಟಿಸ್ ಜಾರಿ ಮಾಡಿದೆ. ಆರೋಪಗಳ ತನಿಖೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಹಾಗೂ ಎರಡು ವಾರಗಳಲ್ಲಿ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ ನಿರ್ದೇಶಿಸಿದೆ.

ಅಕ್ಟೋಬರ್ 22ರಂದು ಬಂದ ದೂರಿನ ಪ್ರಕಾರ, ಪ್ರಾಥಮಿಕವಾಗಿ ಇದು ಮಾನವ ಹಕ್ಕುಗಳ ಉಲ್ಲಂಘನೆಯಂತೆ ಕಂಡುಬರುತ್ತವೆ ಎಂದು ಹೇಳಿದೆ. ಇನ್ನು ಮಧ್ಯಪ್ರದೇಶದ ಭೋಪಾಲ್‌ನ ಸಾರ್ಥಕ್ ಸಮುದಾಯಿಕ್ ವಿಕಾಸ್ ಏವಮ್ ಜನ್ ಕಲ್ಯಾಣ್ ಸಂಸ್ಥೆಯ ಸಂಸ್ಥಾಪಕರು ನೀಡಿರುವ ದೂರಿನ ಪ್ರಕಾರ, ಭಾರತದಲ್ಲಿ ವ್ಯಾಪಕವಾಗಿ ಅಡುಗೆ ಎಣ್ಣೆಯ ಮರುಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಕಳವಳ ವ್ಯಕ್ತಡಿಸಿದ್ದಾರೆ. ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುತ್ತಿದ್ದಾರೆ. ಸಣ್ಣ ಹೋಟೆಲ್‌ಗಳು, ರಸ್ತೆಬದಿಯ ತಿನಿಸುಗಳು ಮತ್ತು ಆಹಾರ ಮಾರಾಟಗಾರರು ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಮರುಬಳಕೆ ಮಾಡುತ್ತಾರೆ ಅಥವಾ ಮರುಮಾರಾಟ ಮಾಡುತ್ತಾರೆ. ಇದು ಕ್ಯಾನ್ಸರ್, ಹೃದಯ ಕಾಯಿಲೆಗಳು ಮತ್ತು ಯಕೃತ್ತಿನ ಅಸ್ವಸ್ಥತೆಗಳು ಸೇರಿದಂತೆ ತೀವ್ರ ಸಾರ್ವಜನಿಕ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ  ತಕ್ಷಣವೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಸ್ತಕ್ಷೇಪ ಮಾಡುವಂತೆ ಕೋರಿದ್ದಾರೆ. ಇದನ್ನು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಮಾನವ ಹಕ್ಕುಗಳ ಸಮಸ್ಯೆ ಎಂದು ಪರಿಗಣಿಸಬೇಕು ಮತ್ತು ಜಾರಿ ಸಂಸ್ಥೆಗಳಿಗೆ (ಎಫ್‌ಎಸ್‌ಎಸ್‌ಎಐ, ಮಾಲಿನ್ಯ ನಿಯಂತ್ರಣ ಮಂಡಳಿಗಳು, ಪುರಸಭೆ ಅಧಿಕಾರಿಗಳು) ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಾಗೂ ಅಧಿಕೃತ ತೈಲ ಶುದ್ಧೀಕರಣ ಮತ್ತು ಮರುಬಳಕೆ ಕೇಂದ್ರಗಳನ್ನು ಸ್ಥಾಪಿಸಲು, ಮರುಬಳಕೆ ಮಾಡಿದ ಅಡುಗೆ ಎಣ್ಣೆಯ ಅಪಾಯಗಳ ಬಗ್ಗೆ ನಾಗರಿಕರನ್ನು ಎಚ್ಚರಗೊಳಿಸಲು ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸಲು ನಿರ್ದೇಶಿಸಬೇಕು ಎಂದು ಅವರು ದೂರಿನಲ್ಲಿ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪಿಎಂ ಉಜ್ವಲ ಯೋಜನೆ: ಆರೋಗ್ಯ, ಸಮಾನತೆ ಮತ್ತು ಶುದ್ಧ ವಾತಾವರಣ ಉಳಿಸುವ ಸ್ಕೀಮ್

ಇನ್ನು ದೂರಿನಲ್ಲಿ ಮಾಡಲಾದ ಆರೋಪಗಳನ್ನು ವಿಚಾರಣೆ ನಡೆಸಲು ಮತ್ತು ಈ ವಿಷಯದಲ್ಲಿ ರಾಜ್ಯವಾರು ವರದಿಯನ್ನು ಒದಗಿಸಲು ನಿರ್ದೇಶನಗಳೊಂದಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ ಎಂದು ಆರೋಗ ಹೇಳಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ