AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ಮೂವರು ವಿದ್ಯಾರ್ಥಿಗಳು; ಇವರ ಸಾಧನೆ ಏನು ಗೊತ್ತಾ?

Video: ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ಮೂವರು ವಿದ್ಯಾರ್ಥಿಗಳು; ಇವರ ಸಾಧನೆ ಏನು ಗೊತ್ತಾ?

ಅಕ್ಷತಾ ವರ್ಕಾಡಿ
|

Updated on: Jun 05, 2026 | 2:58 PM

Share

ಭಾರತದ ಮೂವರು ಯುವ ವಿದ್ಯಾರ್ಥಿಗಳು ಮೈಕ್ರೋಪ್ಲಾಸ್ಟಿಕ್ ಸಮಸ್ಯೆಗೆ ಹುಣಸೆ ಬೀಜದ ಪುಡಿಯಿಂದ ನೈಸರ್ಗಿಕ ಪರಿಹಾರ ಕಂಡುಕೊಂಡಿದ್ದಾರೆ. ಪ್ಲಾಸ್-ಸ್ಟಿಕ್ ಎಂಬ ಅವರ ಆವಿಷ್ಕಾರಕ್ಕೆ 2026ರ ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಲಭಿಸಿದೆ. ರಾಸಾಯನಿಕ ಮುಕ್ತ ಮತ್ತು ಕಡಿಮೆ ವೆಚ್ಚದ ಈ ತಂತ್ರಜ್ಞಾನವು ಜಾಗತಿಕ ಜಲಮಾಲಿನ್ಯಕ್ಕೆ ದೊಡ್ಡ ಪರಿಹಾರವಾಗಿದೆ.

ಮೈಕ್ರೋಪ್ಲಾಸ್ಟಿಕ್ ಸಮಸ್ಯೆಗೆ ಹುಣಸೆ ಬೀಜದಿಂದ ಪರಿಹಾರ ಕಂಡುಕೊಂಡ ಮೂವರು ಭಾರತೀಯ ವಿದ್ಯಾರ್ಥಿಗಳಾದ ವಿವಾನ್, ಅರಿಯಾನ್ ಅಗರ್‌ವಾಲ್ ಮತ್ತು ಅವ್ಯಾನ ಮೆಹ್ತಾ 2026ರ ಪ್ರತಿಷ್ಠಿತ ಅರ್ಥ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಜಸ್ಥಾನದ ಜೈಪುರದ ಜಯಶ್ರೀ ಪೆರಿವಾಲ್ ಇಂಟರ್ನ್ಯಾಷನಲ್ ಸ್ಕೂಲ್‌ನ ಈ 16 ವರ್ಷದ ವಿದ್ಯಾರ್ಥಿಗಳು ತಮ್ಮ ಪ್ಲಾಸ್-ಸ್ಟಿಕ್ ಆವಿಷ್ಕಾರಕ್ಕಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಹುಣಸೆ ಬೀಜದಲ್ಲಿರುವ ನೈಸರ್ಗಿಕ ಅಂಟಿನ ಗುಣವು ನೀರಿನಲ್ಲಿರುವ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳನ್ನು ಆಕರ್ಷಿಸಿ ಹೆಪ್ಪುಗಟ್ಟುವಂತೆ ಮಾಡುತ್ತದೆ. ನಂತರ ಅವುಗಳನ್ನು ಸುಲಭವಾಗಿ ಬೇರ್ಪಡಿಸಬಹುದು. ಈ ರಾಸಾಯನಿಕ ಮುಕ್ತ ಮತ್ತು ಕಡಿಮೆ ವೆಚ್ಚದ ವಿಧಾನವು ಕುಡಿಯುವ ನೀರನ್ನು ಶುದ್ಧೀಕರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅವರ ಈ ಪರಿಸರ ಸ್ನೇಹಿ ಆವಿಷ್ಕಾರಕ್ಕೆ 23,000ಕ್ಕೂ ಹೆಚ್ಚು ಜಾಗತಿಕ ತಜ್ಞರು ಮತ್ತು ಸಾರ್ವಜನಿಕರು ಮತ ಚಲಾಯಿಸಿದ್ದಾರೆ. ಭಾರತೀಯರಿಗೆ ಮೊದಲ ಬಾರಿಗೆ ಈ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More