AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಕೇವಲ 50 ತಾಸಿನೊಳಗೆ ಸಿದ್ಧವಾಯ್ತು ಆಕ್ಸಿಜನ್​ ಘಟಕ; ನಿತ್ಯ 100 ಸಿಲಿಂಡರ್​ಗಳಿಗೆ ಆಮ್ಲಜನಕ ಪೂರೈಕೆ

ಮೆಡಿಕಲ್ ಆಕ್ಸಿಜನ್ ಉತ್ಪಾದನೆಗೆಂದೇ ಸುಮಾರು 170 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಖರೀದಿ ಮಾಡಲಾಗಿದ್ದು, ಇದಕ್ಕಾಗಿ ಶಾಸಕರ ನಿಧಿಯನ್ನು ಬಳಸಿಕೊಳ್ಳಲಾಗಿದೆ. ಇದರಲ್ಲಿ ಸುಮಾರು 70 ಯಂತ್ರಗಳು ಈಗಾಗಲೇ ಕಾರ್ಯ ಆರಂಭಿಸಿದ್ದು ಸುಮಾರು 140 ರೋಗಿಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಸಬಹುದಾಗಿದೆ.

ಮಧ್ಯಪ್ರದೇಶದಲ್ಲಿ ಕೇವಲ 50 ತಾಸಿನೊಳಗೆ ಸಿದ್ಧವಾಯ್ತು ಆಕ್ಸಿಜನ್​ ಘಟಕ; ನಿತ್ಯ 100 ಸಿಲಿಂಡರ್​ಗಳಿಗೆ ಆಮ್ಲಜನಕ ಪೂರೈಕೆ
ಆಕ್ಸಿಜನ್​ ಪ್ಲಾಂಟ್
Skanda
| Updated By: Lakshmi Hegde|

Updated on: May 01, 2021 | 3:39 PM

Share

ಭೋಪಾಲ್: ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಗಂಭೀರಾವಸ್ಥೆಗೆ ತಲುಪಿದ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯಕೀಯ ಲೋಕಕ್ಕೆ ಸವಾಲಾಗಿದೆ. ದೇಶದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ ಉಂಟಾಗಿರುವುದರಿಂದ ಹಲವು ಜನ ಸೂಕ್ತ ಸಂದರ್ಭದಲ್ಲಿ ಆಕ್ಸಿಜನ್, ರೆಮ್​ಡೆಸಿವರ್, ಐಸಿಯು, ವೆಂಟಿಲೇಟರ್ ಸೇರಿದಂತೆ ಮೂಲಭೂತ ಚಿಕಿತ್ಸೆ ಸಿಗದೇ ಪ್ರಾಣ ಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಪೂರೈಸುವುದಕ್ಕೆ ಸೂಪರ್ ಸ್ಪೆಷಾಲಿಟಿ ಪ್ಲಾಂಟ್ ಸ್ಥಾಪಿಸಲಾಗಿದ್ದು, ಉತ್ಸಾಹಿ ಇಂಜಿನಿಯರ್ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಕೇವಲ 50 ಗಂಟೆಗಳ ಅವಧಿಯಲ್ಲಿ ಇದನ್ನು ನಿರ್ಮಿಸಲಾಗಿದೆ. ಸದ್ಯಕ್ಕೆ ಇದರಲ್ಲಿ ಪ್ರತಿನಿತ್ಯ 100 ಆಕ್ಸಿಜನ್ ಸಿಲಿಂಡರ್ ತುಂಬಿಸಲಾಗುತ್ತಿದ್ದು, ಪ್ರತಿನಿತ್ಯ 1 ಸಾವಿರ ಆಕ್ಸಿಜನ್ ಸಿಲಿಂಡರ್ ತುಂಬಿಸುವ ಗುರಿಯನ್ನು ಇಟ್ಟುಕೊಂಡಿರುವುದಾಗಿ ಸಂಬಂಧಪಟ್ಟವರು ತಿಳಿಸಿದ್ದಾರೆ.

ಮೆಡಿಕಲ್ ಆಕ್ಸಿಜನ್ ಉತ್ಪಾದನೆಗೆಂದೇ ಸುಮಾರು 170 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಖರೀದಿ ಮಾಡಲಾಗಿದ್ದು, ಇದಕ್ಕಾಗಿ ಶಾಸಕರ ನಿಧಿಯನ್ನು ಬಳಸಿಕೊಳ್ಳಲಾಗಿದೆ. ಇದರಲ್ಲಿ ಸುಮಾರು 70 ಯಂತ್ರಗಳು ಈಗಾಗಲೇ ಕಾರ್ಯ ಆರಂಭಿಸಿದ್ದು ಸುಮಾರು 140 ರೋಗಿಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಸಬಹುದಾಗಿದೆ. ಈ ಕಾರಣದಿಂದಾಗಿ ಪ್ರಸ್ತುತ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ನೀಗಿದ್ದು ಸದ್ಯದಲ್ಲೇ ಇನ್ನುಳಿದ 100 ಯಂತ್ರಗಳ ಜೋಡಣೆ ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದರಿಂದಾಗಿ ಜಿಲ್ಲೆಯಲ್ಲಿ ಆಮ್ಲಜನಕದ ಅಭಾವ ಬಹುತೇಕ ಇಲ್ಲವೆಂಬಂತಾಗಿದ್ದು, ಇದೇ ಸಂದರ್ಭದಲ್ಲಿ ಸುಮಾರು 12 ಸಾಮುದಾಯಿಕ ಆಸ್ಪತ್ರೆಗಳಿಂದ ಆಕ್ಸಿಜನ್​ ಸೌಲಭ್ಯವುಳ್ಳ 52 ಬೆಡ್​ಗಳನ್ನು ಸಿದ್ದಪಡಿಸಲಾಗಿದೆ. ಪ್ರಸ್ತುತ ಸಂದಿಗ್ಧ ಪರಿಸ್ಥಿತಿಯಲ್ಲಿ ಇದು ಇಡೀ ದೇಶಕ್ಕೆ ಮಾದರಿಯಾಗಿದ್ದು, ಕರ್ನಾಟಕ ಸೇರಿದಂತೆ ಆಮ್ಲಜನಕದ ಕೊರತೆ ಎದುರಿಸುತ್ತಿರುವ ಇತರ ರಾಜ್ಯಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಉತ್ತಮವಾಗಿದೆ.

ಇದನ್ನೂ ಓದಿ: ಆಕ್ಸಿಜನ್ ಸಿಲಿಂಡರ್ ಮತ್ತು ಉತ್ಪಾದನಾ ಘಟಕ ಹೆಚ್ಚಳಕ್ಕೆ ತ್ವರಿತ ಕ್ರಮ: ಲವ್ ಅಗರ್ವಾ​ಲ್