AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.​ಜಿ ಕರ್ ಅತ್ಯಾಚಾರ ಪ್ರಕರಣ: ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಆರ್​ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸೀಲ್ದಾ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್​ ತಿರಸ್ಕರಿಸಿದೆ. ಈ ಕುರಿತು ಸಿಬಿಐ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್​ ಸ್ವೀಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖಾ ಸಂಸ್ಥೆಯಾಗಿದ್ದು, ಮೇಲ್ಮನವಿ ಸಲ್ಲಿಸುವ ಹಕ್ಕು ತನಗೆ ಮಾತ್ರ ಇದೆ ಎಂದು ಈ ಹಿಂದೆ ಹೇಳಿತ್ತು. ಕೇಂದ್ರ ಸಂಸ್ಥೆಯ ಜೊತೆಗೆ, ವಿಚಾರಣಾ ನ್ಯಾಯಾಲಯವು ನೀಡಿದ ಶಿಕ್ಷೆಯ ಅಸಮರ್ಪಕತೆಯನ್ನು ಪ್ರತಿಪಾದಿಸಿ ಮೇಲ್ಮನವಿ ಸಲ್ಲಿಸಬಹುದು ಎಂದು ಮಮತಾ ಬ್ಯಾನರ್ಜಿ ಸರ್ಕಾರ ವಾದಿಸಿತು.

ಆರ್.​ಜಿ ಕರ್ ಅತ್ಯಾಚಾರ ಪ್ರಕರಣ: ಸಂಜಯ್  ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಸಂಜಯ್ ರಾಯ್ Image Credit source: The News Minute
ನಯನಾ ರಾಜೀವ್
|

Updated on:Feb 07, 2025 | 12:43 PM

Share

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ  ಸಲ್ಲಿಸಿದ್ದ ಮೇಲ್ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್​ ತಿರಸ್ಕರಿಸಿದೆ.

ಈ ಕುರಿತು ಸಿಬಿಐ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್​ ಸ್ವೀಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖಾ ಸಂಸ್ಥೆಯಾಗಿದ್ದು, ಮೇಲ್ಮನವಿ ಸಲ್ಲಿಸುವ ಹಕ್ಕು ತನಗೆ ಮಾತ್ರ ಇದೆ ಎಂದು ಈ ಹಿಂದೆ ಹೇಳಿತ್ತು. ಕೇಂದ್ರ ಸಂಸ್ಥೆಯ ಜೊತೆಗೆ, ವಿಚಾರಣಾ ನ್ಯಾಯಾಲಯವು ನೀಡಿದ ಶಿಕ್ಷೆಯ ಅಸಮರ್ಪಕತೆಯನ್ನು ಪ್ರತಿಪಾದಿಸಿ ಮೇಲ್ಮನವಿ ಸಲ್ಲಿಸಬಹುದು ಎಂದು ಮಮತಾ ಬ್ಯಾನರ್ಜಿ ಸರ್ಕಾರ ವಾದಿಸಿತು .

ಕಳೆದ ವರ್ಷ ಆಗಸ್ಟ್ 9 ರಂದು ಇಲ್ಲಿನ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಕಳೆದ ವರ್ಷ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಕ್ಕಾಗಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಮತ್ತಷ್ಟು ಓದಿ: RG Kar Case:ಆರ್‌.ಜಿ ಕರ್ ಅತ್ಯಾಚಾರ ಪ್ರಕರಣ, ಆರೋಪಿ ಸಂಜಯ್​ಗೆ ಜೀವಾವಧಿ ಶಿಕ್ಷೆ

ಆದರೆ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಬಹುದು ಎಂದು ಎಲ್ಲರೂ ಭಾವಿಸಿದ್ದರು. ಈ ಶಿಕ್ಷೆ ನಿರಾಶೆಯ ಅಲೆಯನ್ನು ಉಂಟುಮಾಡಿತ್ತು. ಸೀಲ್ದಾ ನ್ಯಾಯಾಲಯವು ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ರೂ., ಪರಿಹಾರ ನೀಡುವಂತೆ ಆದೇಶಿಸಿದೆ.

ಪ್ರಕರಣದಲ್ಲಿ ಅಪರಾಧಿಗೆ ಮರಣದಂಡನೆ ವಿಧಿಸಬೇಕೆಂದು ಸಿಬಿಐ ಒತ್ತಾಯಿಸಿತ್ತು. ಇದು ಅಪರೂಪದ ಪ್ರಕರಣಗಳಲ್ಲಿ ಅಪರೂಪದ ಪ್ರಕರಣವಲ್ಲ, ಆದ್ದರಿಂದ ಮರಣದಂಡನೆ ವಿಧಿಸಲಾಗಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದರು. ಶಿಕ್ಷೆಯ ಪ್ರಮಾಣವನ್ನು ಬಂಗಾಳ ಸರ್ಕಾರ ಮತ್ತು ಸಿಬಿಐ ಎರಡೂ ಪ್ರಶ್ನಿಸಿದ್ದವು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀರ್ಪಿನ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಕ್ಕೆ ಮರಣದಂಡನೆ ವಿಧಿಸಬೇಕು ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:41 pm, Fri, 7 February 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ