AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾದ ಆರ್​​ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಅಪ್ರಾಪ್ತ ಸೋದರಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೋಲ್ಕತ್ತಾದ ಆರ್​​ಜಿಕರ್ ಕಾಲೇಜಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ(Murder) ಪ್ರಕರಣದ ಅಪರಾಧಿಯ ಸೋದರ ಸೊಸೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 11 ವರ್ಷದ ಸೋದರ ಸೊಸೆ ಕೋಲ್ಕತ್ತಾದ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಭಾನುವಾರ ಘಟನೆ ನಡೆದಾಗ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೋಲ್ಕತ್ತಾದ ಆರ್​​ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಅಪ್ರಾಪ್ತ ಸೋದರಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಸಂಜಯ್
ನಯನಾ ರಾಜೀವ್
|

Updated on: Oct 21, 2025 | 2:53 PM

Share

ಕೋಲ್ಕತ್ತಾ, ಅಕ್ಟೋಬರ್ 21: ಕೋಲ್ಕತ್ತಾದ ಆರ್​​ಜಿಕರ್ ಕಾಲೇಜಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ(Murder) ಪ್ರಕರಣದ ಅಪರಾಧಿಯ ಸೋದರ ಸೊಸೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 11 ವರ್ಷದ ಸೋದರ ಸೊಸೆ ಕೋಲ್ಕತ್ತಾದ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರ ಘಟನೆ ನಡೆದಾಗ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಯಿಯನ್ನು ಕಳೆದುಕೊಂಡಿರುವ ಬಾಲಕಿ ತನ್ನ ಚಿಕ್ಕಮ್ಮ ಪೂಜಾ ರಾಯ್ ಜೊತೆ ವಾಸಿಸುತ್ತಿದ್ದಳು. ಆಕೆಯ ಕುಟುಂಬ ಸದಸ್ಯರು ಮಾರುಕಟ್ಟೆಯಿಂದ ಹಿಂತಿರುಗಿದಾಗ, ಆಕೆಯ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡರು. ಪದೇ ಪದೇ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಅವರು ಬಾಗಿಲು ಒಡೆದು ನೋಡಿದಾಗ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ತಂಡವೊಂದು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಾಲಕಿಯ ಕಾಲುಗಳ ಒಂದು ಭಾಗ ನೆಲವನ್ನು ಮುಟ್ಟುತ್ತಿರುವುದನ್ನು ಗಮನಿಸಿದ ಪೊಲೀಸ್ ಮೂಲವೊಂದು ಇದು ಆತ್ಮಹತ್ಯೆಯೇ ಕಾಣುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ: ಹುಟ್ಟುಹಬ್ಬದಂದೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಅಲಿಪೋರ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಬಾಲಕಿ ಖಿನ್ನತೆಯಿಂದ ಬಳಲುತ್ತಿದ್ದಾಳೇ ಅಥವಾ ಆಕೆಯ ಸಾವಿಗೆ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂದು ನಿರ್ಧರಿಸಲು ಪೊಲೀಸರು ಕುಟುಂಬ ಸದಸ್ಯರು ಮತ್ತು ಅಕ್ಕಪಕ್ಕದ ಮನೆಯವರನ್ನು ಪ್ರಶ್ನಿಸುತ್ತಿದ್ದಾರೆ. ಈ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು ಹುಟ್ಟುಹಾಕಿದ್ದು, ಹುಡುಗಿಯ ಮಾವ ಸಂಜಯ್ ರಾಯ್ ಒಳಗೊಂಡ ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ಈ ಘಟನೆ ಗಮನ ಸೆಳೆದಿದೆ.

ರಾಯ್, ಕಳೆದ ವರ್ಷ ಕೋಲ್ಕತ್ತಾದ ಪ್ರಸಿದ್ಧ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ 26 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ