AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಅಮೆರಿಕದ ಪಾಪ್ ಗಾಯಕಿ ರಿಹಾನ್ನಾ ಮತ್ತು ಸ್ವೀಡನ್​ನ ಪರಿಸರ ಹೋರಾಟಗಾರ್ತಿ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 03, 2021 | 10:12 PM

Share

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಅಮೆರಿಕದ ಪಾಪ್ ಗಾಯಕಿ ರಿಹಾನ್ನಾ ಮತ್ತು ಸ್ವೀಡನ್​ನ ಪರಿಸರ ಹೋರಾಟಗಾರ್ತಿ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ನಡುವೆಯೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯೊಂದನ್ನು ಹೊರಡಿಸಿದೆ.

ಪ್ರಕಟಣೆಯಲ್ಲಿ ಏನಿದೆ? ಈ ರೀತಿಯ ವಿಷಯಗಳಿಗೆ ಪ್ರತಿಕ್ರಿಯೆ ನೀಡುವ ಮುನ್ನ ನಿಜ ಏನು ಎಂಬುದನ್ನು ತಿಳಿದುಕೊಂಡು ಸಮಸ್ಯೆಯನ್ನು ಅರಿಯಿರಿ ಎಂದು ನಾವು ವಿನಂತಿಸುತ್ತೇವೆ. ವಿಶೇಷವಾಗಿ ಸೆಲಬ್ರಿಟಿ ಅಥವಾ ಇನ್ನಿತರರು ಸಾಮಾಜಿಕ ಮಾಧ್ಯಮಗಳಲ್ಲಿ ಹ್ಯಾಷ್​​ಟ್ಯಾಗ್ ಮತ್ತು ಕಾಮೆಂಟ್​ಗಳ ಮೂಲಕ ಸಂಚಲನ ಸೃಷ್ಟಿಸಿದಾಗ, ಎಲ್ಲ ಸಂದರ್ಭಗಳಲ್ಲಿಯೂ ಅದು ನಿಖರವಾದುದು ಅಥವಾ ಜವಾಬ್ದಾರಿಯುತವಾದುದು ಆಗಿರುವುದಿಲ್ಲ ಎಂದಿದೆ.

ಈ ಪ್ರಕಟಣೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರು #IndiaTogether #IndiaAgainstPropaganda ಎಂಬ ಹ್ಯಾಷ್​​ಟ್ಯಾಗ್ ಜತೆ ಟ್ವೀಟ್ ಮಾಡಿದ್ದಾರೆ.

ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು ಸರ್ಕಾರದ ಈ ಪ್ರಕಟಣೆಯನ್ನು ರೀಟ್ವೀಟ್ ಮಾಡಿದ ಅಕ್ಷಯ್ ಕುಮಾರ್, ರೈತರು ನಮ್ಮ ದೇಶದ ಪ್ರಧಾನ ಘಟಕವಾಗಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ತಾರತಮ್ಯ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ಕಡೆ ಗಮನ ಹರಿಸುವ ಬದಲು ಸೌಹಾರ್ದಯುತ ವಾತಾವರಣ ಸೃಷ್ಟಿಸೋಣ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

ಕರಣ್ ಜೋಹರ್ ಟ್ವೀಟ್ ನಾವು ಪ್ರಕ್ಷುಬ್ಧ ಕಾಲದಲ್ಲಿ ವಾಸಿಸುತ್ತೇವೆ ಮತ್ತು ಪ್ರತಿ ತಿರುವಿನಲ್ಲಿಯೂ ವಿವೇಕ ಮತ್ತು ತಾಳ್ಮೆ ಈಗಿನ ತುರ್ತು. ನಾವು ಒಟ್ಟಾಗಿ,  ಪರಿಹಾರಗಳನ್ನು ಕಂಡುಹಿಡಿಯಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡೋಣ – ನಮ್ಮ ರೈತರು ಭಾರತದ ಬೆನ್ನೆಲುಬು. ಯಾರೂ ನಮ್ಮನ್ನು ವಿಭಜಿಸಲು ಬಿಡಬಾರದು ಎಂದು ಕರಣ್ ಜೋಹರ್ ಹೇಳಿದ್ದಾರೆ.

ಸಚಿನ್ ತೆಂಡುಲ್ಕರ್ ಪ್ರತಿಕ್ರಿಯೆ ಭಾರತದ ಸಾರ್ವಭೌಮತ್ವದ ವಿಚಾರದಲ್ಲಿ ಎಂದಿಗೂ ರಾಜಿ ಮಾಡಲು ಆಗುವುದಿಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು ಆದರೆ ಭಾಗವಹಿಸುವವರಲ್ಲ. ಭಾರತೀಯರಿಗೆ ಭಾರತ ತಿಳಿದಿದೆ ಮತ್ತು ಭಾರತಕ್ಕಾಗಿ ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ನಾವು ಒಂದು ರಾಷ್ಟ್ರವಾಗಿ ಉಳಿಯೋಣ ಎಂದು ಹಿರಿಯ ಕ್ರಿಕೆಟ್ ಆಟಗಾರ ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.

ಕೇಂದ್ರ ಸಚಿವ  ಹರ್​ದೀಪ್ ಸಿಂಗ್ ಪುರಿ ಟ್ವೀಟ್ ಕೃಷಿ ಕಾನೂನಿಗೆ ಮಸಿಬಳಿಯಲು ಮತ್ತು ಸಂಧಾನದ ಹಳಿ ತಪ್ಪಿಸಲು ಪಟ್ಟಭದ್ರ ಹಿತಾಸಕ್ತಿಗಳು ತಪ್ಪು ಮಾಹಿತಿ ಹರಡಲು ಬಳಸುವ ಉಪಕರಣಗಳಲ್ಲಿ ಸುಳ್ಳೂ ಒಂದು. ಈ ಕಾನೂನುಗಳು ಚರ್ಚೆಗೊಳಪಟ್ಟಿಲ್ಲ ಎಂಬುದು ಇದೇ ರೀತಿಯ ಸುಳ್ಳು ಎಂದು ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಸುರೇಶ್ ರೈನಾ ಟ್ವೀಟ್  ಒಂದು ದೇಶವಾಗಿ ನಾವು ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆಗಳು ಇಂದು ನಮ್ಮೆದುರು ಇವೆ, ನಾಳೆಯೂ ಇರುತ್ತವೆ. ಇದರರ್ಥ ನಮ್ಮಲ್ಲಿ ಒಡಕು ಮೂಡಿದೆ ಅಥವಾ ಬಾಹ್ಯಶಕ್ತಿಗಳಿಂದ ನಾವು ಕೆರಳುತ್ತೇವೆ ಎಂದಲ್ಲ. ಎಲ್ಲವನ್ನೂ ನಾವು ಸೂಕ್ತ ಮತ್ತು ನಿಷ್ಪಕ್ಷಪಾತ ಮಾತುಕತೆಯಿಂದ ಪರಿಹರಿಸಬಹುದು ಎಂದು ಕ್ರಿಕೆಟ್ ಆಟಗಾರ ಸುರೇಶ್​ ರೈನಾ ಹೇಳಿದ್ದಾರೆ.

ಟ್ವೀಟ್ ವಾರ್: ದಿಲ್ಜಿತ್ ಹಾಡು ರಿಹಾನ್ನಾಗೆ ಅರ್ಪಣೆ, ದೇಶಪ್ರೇಮ ಸಾಬೀತಿಗೆ ಕಂಗನಾ ಸವಾಲು

Published On - 10:10 pm, Wed, 3 February 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ