ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಸಿಐಎಸ್​ಎಫ್​ಗೆ ಅಮಿತ್ ಶಾ ನೀಡಿದ ನಿರ್ದೇಶನಗಳೇನು?

ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪ್ರಮುಖ ಸಂಸ್ಥೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಸಿಐಎಸ್ಎಫ್​(ಕೇಂದ್ರ ಕೈಗಾರಿಕಾ ಭದ್ರತಾ ಪಡೆ)ಗೆ ನಿರ್ದೇಶನ ನೀಡಿದ್ದಾರೆ. ಭಾರತದಾದ್ಯಂತ ವಿಮಾನ ನಿಲ್ದಾಣಗಳು, ವಿದ್ಯುತ್ ಸ್ಥಾವರಗಳು, ಪರಮಾಣು ಸ್ಥಾಪನೆಗಳು, ಬಾಹ್ಯಾಕಾಶ ಸಂಶೋಧನಾ ಸೌಲಭ್ಯಗಳು ಮತ್ತು ಪ್ರಮುಖ ಸರ್ಕಾರಿ ಕಟ್ಟಡಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳನ್ನು ರಕ್ಷಿಸುವ ಕಾರ್ಯವನ್ನು CISF ಹೊಂದಿದೆ.

ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಸಿಐಎಸ್​ಎಫ್​ಗೆ ಅಮಿತ್ ಶಾ ನೀಡಿದ ನಿರ್ದೇಶನಗಳೇನು?
ಅಮಿತ್ ಶಾ

Updated on: May 09, 2025 | 1:00 PM

ನವದೆಹಲಿ, ಮೇ 09: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪ್ರಮುಖ ಸಂಸ್ಥೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಸಿಐಎಸ್ಎಫ್​(ಕೇಂದ್ರ ಕೈಗಾರಿಕಾ ಭದ್ರತಾ ಪಡೆ)ಗೆ ನಿರ್ದೇಶನ ನೀಡಿದ್ದಾರೆ. ಭಾರತದಾದ್ಯಂತ ವಿಮಾನ ನಿಲ್ದಾಣಗಳು, ವಿದ್ಯುತ್ ಸ್ಥಾವರಗಳು, ಪರಮಾಣು ಸ್ಥಾಪನೆಗಳು, ಬಾಹ್ಯಾಕಾಶ ಸಂಶೋಧನಾ ಸೌಲಭ್ಯಗಳು ಮತ್ತು ಪ್ರಮುಖ ಸರ್ಕಾರಿ ಕಟ್ಟಡಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳನ್ನು ರಕ್ಷಿಸುವ ಕಾರ್ಯವನ್ನು CISF ಹೊಂದಿದೆ.

ಗಡಿ ಪರಿಸ್ಥಿತಿ ಮತ್ತು ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಶಾ ಅವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಹಾನಿರ್ದೇಶಕರು, ಸಿಐಎಸ್‌ಎಫ್ ಮಹಾನಿರ್ದೇಶಕರು ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಮೇ 08 ಮತ್ತು 09 ರ ಮಧ್ಯರಾತ್ರಿ ಪಾಕಿಸ್ತಾನ ಸಶಸ್ತ್ರ ಪಡೆಗಳು ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಮಿಲಿಟರಿ, ವಿಮಾನ ನಿಲ್ದಾಣಗಳು ಮತ್ತು ಇತರ ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದು, ಆದರೆ ಭಾರತವು ಈ ದಾಳಿಯನ್ನು ತಡೆದಿದೆ. ಈ ನಿಟ್ಟಿನಲ್ಲಿ ಈ ನಿರ್ದೇಶನಗಳನ್ನು ನೀಡಲಾಗಿದೆ.

ಇದನ್ನೂ ಓದಿ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ಕಟ್ಟುನಿಟ್ಟಿನ ಕ್ರಮಗಳಿಂದ ಪಾಕ್ ಪರಿಸ್ಥಿತಿ ಮುಂದೆ ಏನಾಗುತ್ತೆ?
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ

ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು ಮತ್ತು ಕದನ ವಿರಾಮ ಉಲ್ಲಂಘಟನೆಗೆ ಸೂಕ್ತ ಪ್ರತ್ಯುತ್ತರ ನೀಡಲಾಯಿತು. 2025 ರ ಮೇ 8 ಮತ್ತು 9 ರ ಮಧ್ಯರಾತ್ರಿ ನಿಯಂತ್ರಣ ರೇಖೆ (LoC) ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ (IB) ದೊಡ್ಡ ಪ್ರಮಾಣದ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯು ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತು.

ಮತ್ತಷ್ಟು ಓದಿ:  ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಬಿಎಸ್​ಎಫ್​

ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ಪ್ರಯತ್ನಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಸೇನೆಯು ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ತ್ವರಿತವಾಗಿ ಪ್ರತಿಕ್ರಿಯಿಸಿ ಉಧಂಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಸೇರಿದಂತೆ ಪ್ರದೇಶಗಳಲ್ಲಿ ಡ್ರೋನ್‌ಗಳನ್ನು ಗುರಿಯಾಗಿಸಿಕೊಂಡು ಪ್ರತಿ ದಾಳಿ ನಡೆಸಿದೆ.

ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ 100 ಉಗ್ರರನ್ನು ಹತ್ಯೆ ಮಾಡಿತ್ತು. ಇದಾದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ಪ್ರತಿ ದಾಳಿ ಶುರು ಮಾಡಿತ್ತು, ಗಡಿಗಳ ಉದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಅನೇಕ ನಾಗರಿಕರನ್ನು ಹತ್ಯೆ ಮಾಡಿತ್ತು, ಹೀಗಾಗಿ ಕೋಪಗೊಂಡ ಭಾರತ ಮತ್ತೆ ಪಾಕ್​ ವಿರುದ್ಧ ದಾಳಿಗೆ ನಿಂತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

Published On - 12:59 pm, Fri, 9 May 25