ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ
ಲಾಲು ಪ್ರಸಾದ್​ ಯಾದವ್
Follow us
|

Updated on: Apr 17, 2021 | 1:45 PM

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ​ ಲಾಲೂಪ್ರಸಾದ್ ಯಾದವ್​​ಗೆ ಜಾರ್ಖಂಡ ಹೈಕೋರ್ಟ್ ಇಂದು ಜಾಮೀನು ನೀಡಿದ್ದು, ಶೀಘ್ರವೇ ಲಾಲೂಪ್ರಸಾದ್ ಯಾದವ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ದೇಶದ ಪ್ರಮುಖ ಕೇಸ್​ಗಳಲ್ಲಿ ಒಂದಾದ ಈ ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ದೋಷಿಯೆಂದು ಸಾಬೀತಾಗಿ ಜೈಲು ಸೇರಿದ್ದರು. ಇದೀಗ ಜಾರ್ಖಂಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ವೈಯಕ್ತಿಕ ಬಾಂಡ್​ ವಿಧಿಸಿದ್ದು, ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗಬಾರದು, ವಿಳಾಸ, ಮೊಬೈಲ್​ನಂಬರ್​ಗಳನ್ನು ಬದಲಿಸಬಾರದು ಎಂದು ಸೂಚನೆ ನೀಡಿದೆ.

ಲಾಲೂಪ್ರಸಾದ್​ ಯಾದವ್​ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಪ್ರತ್ಯುತ್ತರ ಸಲ್ಲಿಸಲು ಸಿಬಿಐ ಅವಕಾಶ ಕೇಳಿತ್ತು. ಹೀಗಾಗಿ ಮುಂದೂಡಲಾಗಿತ್ತು. ಲಾಲೂ ಪ್ರಸಾದ್​ ಯಾದವ್​ ವಿರುದ್ಧ ಸಿಬಿಐ ಚೈಬಾಸಾ ಹಾಗೂ ದುಮ್ಕಾ ಖಜಾನೆ ಹಗರಣದಡಿ ಪ್ರಕರಣ ದಾಖಲಿಸಿತ್ತು. ಅದರಲ್ಲಿ ಚೈಬಾಸಾ ಹಗರಣಕ್ಕೆ ಸಂಬಂಧಪಟ್ಟಂತೆ 2020ರ ಅಕ್ಟೋಬರ್​ನಲ್ಲಿ ಜಾರ್ಖಂಡ ಹೈಕೋರ್ಟ್ ಲಾಲೂಗೆ ಜಾಮೀನು ನೀಡಿತ್ತು. ಆದರೆ ದುಮ್ಕಾ ಖಜಾನೆ ಹಗರಣದಲ್ಲಿ ಜಾಮೀನು ಸಿಗದ ಕಾರಣ ಅವರು ಜೈಲಿನಿಂದ ಹೊರಗೆ ಬಂದಿರಲಿಲ್ಲ. ಇದೀಗ ಈ ಪ್ರಕರಣದಲ್ಲೂ ಬೇಲ್​ ಸಿಕ್ಕಂತಾಗಿದ್ದು, ಸದ್ಯದ ಮಟ್ಟಿಗೆ ರಿಲೀಫ್​ ಸಿಕ್ಕಿದೆ.

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಲಾಲೂ ಪ್ರಸಾದ್ ಯಾದವ್ ಸದ್ಯ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವು ಪ್ರಕ್ರಿಯೆಗಳ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ: ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

 Immunity Booster Foods: ಕೊರೊನಾ ಕಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು 5 ಆಹಾರ ಪದಾರ್ಥಗಳು ಇಲ್ಲಿವೆ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?