AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RJD ಅತಿ ದೊಡ್ಡ ಪಕ್ಷ, BJPಗೆ ಉತ್ತಮ ಫಲಿತಾಂಶ; ಕಳೆಗುಂದಿದ ಕಾಂಗ್ರೆಸ್ ಮತ್ತು ಜೆಡಿಯು!

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಿನ್ನೆ ತಡರಾತ್ರಿಯ ವೇಳೆಗೆ ಪೂರ್ಣಗೊಂಡಿದ್ದು, ಫಲಿತಾಂಶ ಹೊರಬಿದ್ದಿದೆ. ಕೊನೆಯ ಕ್ಷಣದವರೆಗೂ ಕುತೂಹಲ ಉಳಿಸಿದ್ದ ರಾಜಕೀಯ ಪಕ್ಷಗಳ ಹಾವು ಏಣಿ ಆಟಕ್ಕೆ ಕೊನೆಗೂ ತೆರೆಬಿದ್ದಿದೆ. ಬಿಹಾರದ ಅತ್ಯಂತ ದೊಡ್ಡ ಪಕ್ಷವಾಗಿ ತೇಜಸ್ವಿ ಯಾದವ್ ಮುಂದಾಳತ್ವದ ಆರ್.ಜೆ.ಡಿ. ಹೊರಹೊಮ್ಮಿದ್ದು, ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಿದೆ. ಕಳೆದ ಬಾರಿಗಿಂತ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಜೆಡಿಯು ಮತ್ತು ಕಾಂಗ್ರೆಸ್ ಹಿನ್ನಡೆ ಸಾಧಿಸಿವೆ. NDA ಮಿತ್ರಕೂಟದ ಸ್ಥಿತಿ-ಗತಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ […]

RJD ಅತಿ ದೊಡ್ಡ ಪಕ್ಷ, BJPಗೆ ಉತ್ತಮ ಫಲಿತಾಂಶ; ಕಳೆಗುಂದಿದ ಕಾಂಗ್ರೆಸ್ ಮತ್ತು ಜೆಡಿಯು!
Follow us
ಸಾಧು ಶ್ರೀನಾಥ್​
|

Updated on:Nov 11, 2020 | 1:02 PM

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಿನ್ನೆ ತಡರಾತ್ರಿಯ ವೇಳೆಗೆ ಪೂರ್ಣಗೊಂಡಿದ್ದು, ಫಲಿತಾಂಶ ಹೊರಬಿದ್ದಿದೆ. ಕೊನೆಯ ಕ್ಷಣದವರೆಗೂ ಕುತೂಹಲ ಉಳಿಸಿದ್ದ ರಾಜಕೀಯ ಪಕ್ಷಗಳ ಹಾವು ಏಣಿ ಆಟಕ್ಕೆ ಕೊನೆಗೂ ತೆರೆಬಿದ್ದಿದೆ.

ಬಿಹಾರದ ಅತ್ಯಂತ ದೊಡ್ಡ ಪಕ್ಷವಾಗಿ ತೇಜಸ್ವಿ ಯಾದವ್ ಮುಂದಾಳತ್ವದ ಆರ್.ಜೆ.ಡಿ. ಹೊರಹೊಮ್ಮಿದ್ದು, ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಿದೆ. ಕಳೆದ ಬಾರಿಗಿಂತ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಜೆಡಿಯು ಮತ್ತು ಕಾಂಗ್ರೆಸ್ ಹಿನ್ನಡೆ ಸಾಧಿಸಿವೆ.

NDA ಮಿತ್ರಕೂಟದ ಸ್ಥಿತಿ-ಗತಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನಾಯಕತ್ವದ ಜೆಡಿಯು ಪಕ್ಷ, 71 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ್ದರೆ, ಈ ಬಾರಿ ಕೇವಲ 43 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ. ಕೊವಿಡ್ ನಿಯಂತ್ರಿಸುವಲ್ಲಿ ವೈಫಲ್ಯ,, ವಲಸಿಗರ ಸಂಕಷ್ಟ, ಉದ್ಯೋಗ ಸಮಸ್ಯೆ ಮುಂತಾದ ಕಾರಣಗಳಿಂದ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿತ್ತು.

ಹೀಗಾಗಿ ಆಡಳಿತ ಪಕ್ಷಕ್ಕೆ ಮತದಾರ ಸರಿಯಾದ ಏಟು ಕೊಟ್ಟಿದ್ದಾನೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕಳೆದಬಾರಿಗಿಂತ ಉತ್ತಮ ಪ್ರದರ್ಶನ ತೋರಿದೆ. 2015ರ ಚುನಾವಣೆಯಲ್ಲಿ 53 ಸ್ಥಾನಗಳನ್ನು ಗೆದ್ದಿದ್ದ ಬೆಜೆಪಿ, ಈ ಚುನಾವಣೆಯಲ್ಲಿ 74 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಬಿಹಾರದ ಹಿಡಿತವನ್ನು ಬಿಗುಗೊಳಿಸಿದೆ.

ಮಹಾಘಟಬಂಧನ್ ಗೆ RJD ಆಸರೆ ಲಾಲೂಪ್ರಸಾದ್ ಯಾದವ್ ಪುತ್ರ, ತೇಜಸ್ವಿ ಯಾದವ್ ನೇತೃತ್ವದ ಆರ್.ಜೆ.ಡಿ., 75 ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದ ಅತಿದೊಡ್ಡ ಪಕ್ಷವಾಗಿ ಕಾಣಿಸಿಕೊಂಡಿದೆ. ಆದರೆ ಕಳೆದ ಚುನಾವಣೆಗೆ ಹೋಲಿಸಿದರೆ ಆರ್.ಜೆ.ಡಿ. ಐದು ಸ್ಥಾನಗಳ ಹಿನ್ನಡೆ ಸಾಧಿಸಿದೆ. 2015ರಲ್ಲಿ ಪಕ್ಷವು ಒಟ್ಟು 80 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ರಾಷ್ಟ್ರೀಯ ಪಕ್ಷ ಕಾಂಗ್ರೆಸ್, ಬಿಹಾರ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದೆ. ಕೇವಲ 19 ಸ್ಥಾನಗಳಲ್ಲಿ ಜಯಿಸಿರುವ ಕಾಂಗ್ರೆಸ್, ಬಿಹಾರದಲ್ಲಿ ಬಲಿಷ್ಠವಾಗಿ ಉಳಿಯಲು ಹರಸಾಹಸ ಪಡುತ್ತಿದೆ. 2015ರಲ್ಲಿ 27 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಮತ್ತೆ 8 ಸ್ಥಾನಗಳನ್ನು ಕಳೆದುಕೊಂಡಿದೆ. ಕಮ್ಯುನಿಸ್ಟ್ ಪಕ್ಷಗಳು ಕಳೆದ ಚುನಾವಣೆಗಿಂತ ಉತ್ತಮ ಪ್ರದರ್ಶನ ತೋರಿವೆಯಾದರೂ ಮಹಾಘಟಬಂಧನ್ ಗೆ ಆರ್.ಜೆ.ಡಿ. ಒಂದೇ ಆಸರೆಯಾಗಿದೆ.

Published On - 1:01 pm, Wed, 11 November 20

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!