AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ನೋನಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಶಾಲಾ ಬಸ್: 15 ವಿದ್ಯಾರ್ಥಿಗಳು ದುರ್ಮರಣ

Manipur Bus Accident ಮಣಿಪುರದ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ವರದಿಗಳ ಪ್ರಕಾರ, ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದವು.

ಮಣಿಪುರದ ನೋನಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಶಾಲಾ ಬಸ್: 15 ವಿದ್ಯಾರ್ಥಿಗಳು ದುರ್ಮರಣ
ಮಣಿಪುರದಲ್ಲಿ ರಸ್ತೆ ಅಪಘಾತ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 21, 2022 | 4:23 PM

Share

ಮಣಿಪುರದ (Manipur) ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮ ಬಳಿ ಬುಧವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್‌ಗಳು ನಿಯಂತ್ರಣ ಕಳೆದುಕೊಂಡು ಸಂಭವಿಸಿದ ಅಪಘಾತದಲ್ಲಿ (Road Accident) ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಮಣಿಪುರದ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ವರದಿಗಳ ಪ್ರಕಾರ, ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದವು. ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಹೋಗುತ್ತಿದ್ದವು.ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ದುಃಖ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸಲು ಎಸ್‌ಡಿಆರ್‌ಎಫ್ ಮತ್ತು ವೈದ್ಯಕೀಯ ತಂಡಗಳು, ಶಾಸಕರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಹೇಳಿದರು.

ಇಂದು ಹಳೇ ಕ್ಯಾಚಾರ್ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ. ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ಮತ್ತು ಶಾಸಕರು ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸಲು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್‌ನಲ್ಲಿರುವ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ” ಎಂದ ಅವರು ಟ್ವೀಟ್‌ನಲ್ಲಿ ಅಪಘಾತದ ವಿಡಿಯೊವನ್ನು ಹಂಚಿಕೊಂಡಿದ್ದಾರೆ

ವರದಿಗಳ ಪ್ರಕಾರ, ಅಪಘಾತದಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯಕ್ಕೆ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಯಾವುದೇ ದೃಢೀಕೃತ ವರದಿಗಳಿಲ್ಲ, ಆದರೆ ಸಾವುನೋವುಗಳು ಹೆಚ್ಚಾಗಬಹುದು ಎಂದು ನೋನಿ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಕೆಲವು ವಿದ್ಯಾರ್ಥಿಗಳನ್ನು ಇಂಫಾಲ್‌ನ ಖಾಸಗಿ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Wed, 21 December 22