ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ 18ರಿಂದ 35 ವರ್ಷ ವಯೋಮಾನದವರೇ ಹೆಚ್ಚಾಗಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ರಸ್ತೆ ಅಪಫಾತಗಳನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳತ್ತ ತೀವ್ರ ಗಮನ ಹರಿಸುತ್ತಿದೆ ಎಂದು ನಿತಿನ್ ಗಡ್ಕರಿ ತಿಳಿಸಿದರು.

ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
Follow us
guruganesh bhat
| Updated By: Skanda

Updated on: Mar 18, 2021 | 5:31 PM

ದೆಹಲಿ: ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆಯೇ ಹೆಚ್ಚು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು. ಈ ಕುರಿತು ಅಂಕಿಅಂಶಗಳನ್ನು ತೆರೆದಿಟ್ಟ ಅವರು ಸುಮಾರು 1.46 ಲಕ್ಷ ಜನರು ಕೊರೊನಾ ಪಿಡುಗಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸುತ್ತದೆ. ಆದರೆ ರಸ್ತೆ ಅವಘಡಗಳಲ್ಲಿ 1.50 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು.

ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ 18ರಿಂದ 35 ವರ್ಷ ವಯೋಮಾನದವರೇ ಹೆಚ್ಚಾಗಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ರಸ್ತೆ ಅಪಫಾತಗಳನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳತ್ತ ತೀವ್ರ ಗಮನ ಹರಿಸುತ್ತಿದ್ದೇವೆ ಎಂದು ಅವರು ತಿಳಿಸಿದರು. ಇತ್ತೀಚಿಗೆ ವಿಶ್ವಬ್ಯಾಂಕ್ ಬಿಡುಗಡೆಗೊಳಿಸಿದ ವರದಿಯೊಂದರ ಪ್ರಕಾರ, ಭಾರತದಲ್ಲಿ ಪ್ರತಿವರ್ಷ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಪ್ರತಿವರ್ಷ 4.5 ಲಕ್ಷ ಅಪಫಾತಗಳು ಸಂಭವಿಸುತ್ತಿದ್ದು, ದೇಶದ ಜಿಡಿಪಿಯ ಶೇ 3.14ರಷ್ಟು ಭಾಗ ಈ ಅಪಘಾತಗಳಿಂದ ನಷ್ಟವಾಗುತ್ತದೆ ಎಂದು ಹೇಳಲಾಗಿತ್ತು.

ರಸ್ತೆ ಅಪಘಾತ ಕಡಿಮೆಗೊಳಿಸುವ ವಿಶ್ವಾಸ ದೇಶದಲ್ಲಿ 2025ರ ವೇಳೆಗೆ ರಸ್ತೆ ಅಪಘಾತ ಹಾಗೂ ಅಪಘಾತಗಳಿಂದ ಸಾವಿಗೀಡಾಗುವವರ ಪ್ರಮಾಣ ಶೇ 50ರಷ್ಟು ಕುಸಿಯಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಇತ್ತೀಚಿಗಷ್ಟೇ ಭರವಸೆ ವ್ಯಕ್ತಪಡಿಸಿದ್ದರು. ಭಾರತದಲ್ಲಿ ಪ್ರತಿನಿತ್ಯ ಸುಮಾರು 415 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸವಾಲು ನಮ್ಮ ಮುಂದಿದ್ದು ಸರ್ಕಾರ ಇದಕ್ಕಾಗಿ ಶ್ರಮಿಸಲಿದೆ ಎಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದರು.

ಕಳೆದ ಬಾರಿ ಸ್ವೀಡನ್​ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ 2030ರ ವೇಳೆಗೆ ಭಾರತದಲ್ಲಿ ರಸ್ತೆ ಅಪಘಾತಗಳಿಂದ ಯಾರೊಬ್ಬರೂ ಸಾಯದಂತೆ ನೋಡಿಕೊಳ್ಳುವ ಉದ್ದೇಶ ವ್ಯಕ್ತಪಡಿಸಲಾಗಿದೆ. ಅದರಂತೆ ನಾವು 2025ರೊಳಗೆ ಶೇ.50ರಷ್ಟು ರಸ್ತೆ ಅಪಘಾತ ಮತ್ತು ಅದರಿಂದಾಗುವ ಸಾವುಗಳನ್ನು ತಡೆಗಟ್ಟುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ತಮಿಳುನಾಡು ಈಗಾಗಲೇ ರಸ್ತೆ ಅಪಘಾತದ ಪ್ರಮಾಣವನ್ನು ಶೇ 53ರಷ್ಟು ತಗ್ಗಿಸಿದೆ. ಅದು ನಮಗೆ ಮಾದರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ದೇಶಾದ್ಯಂತ ರಸ್ತೆಗಳಲ್ಲಿನ ಅತಿ ಹೆಚ್ಚು ಅಪಾಯಕಾರಿ ಸ್ಥಳಗಳನ್ನು ಪತ್ತೆಹಚ್ಚಿ ಅವುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ₹14 ಸಾವಿರ ಕೋಟಿ ವ್ಯಯಿಸಲಿದೆ. ಇದಕ್ಕಾಗಿ ವಿಶ್ವ ಬ್ಯಾಂಕ್​ ಮತ್ತು ಏಷ್ಯನ್​ ಡೆವಲಪ್​ಮೆಂಟ್​ ಬ್ಯಾಂಕ್​ (ಎಡಿಬಿ) ತಲಾ ₹7 ಸಾವಿರ ಕೋಟಿ ವೆಚ್ಚದ ಎರಡು ಯೋಜನೆಗಳಿಗೆ ಒಪ್ಪಿಗೆ ಸೂಚಿಸಿವೆ. ಕೇಂದ್ರ ಹಣಕಾಸು ಸಚಿವಾಲಯದಿಂದಲೂ ಈ ಯೋಜನೆಗಳಿಗೆ ಶೀಘ್ರದಲ್ಲಿ ಅನುಮತಿ ಸಿಗುವ ನಿರೀಕ್ಷೆ ಇದೆ. ನಾವು ಈಗಾಗಲೇ ದಿನಕ್ಕೆ 30 ಕಿ.ಮೀ ರಸ್ತೆ ನಿರ್ಮಿಸುವ ಗುರಿ ತಲುಪಿದ್ದೇವೆ. ಮಾರ್ಚ್​ ಅಂತ್ಯದ ಒಳಗೆ ದಿನಕ್ಕೆ 40 ಕಿ.ಮೀನಷ್ಟು ರಸ್ತೆ ನಿರ್ಮಿಸುವ ಧ್ಯೇಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Electric Vehicles: ಪೆಟ್ರೋಲ್​, ಡೀಸೆಲ್​ ವಾಹನ ಬದಲು ಎಲೆಕ್ಟ್ರಿಕ್​ ವಾಹನ ಬಳಸಿದರೆ ಭಾರಿ ಹಣ ಉಳಿತಾಯ ಆಗುತ್ತೆ: ನಿತಿನ್​ ಗಡ್ಕರಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ