ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಎಎಪಿ ಶಾಸಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಫೇಸ್‌ಬುಕ್ ಲೈವ್‌ನಲ್ಲಿ ನಟಿ-ರಾಜಕಾರಣಿ ಹೇಮಾ ಮಾಲಿನಿ ಬಗ್ಗೆ ಟೀಕೆ ಮಾಡಿದ್ದಕ್ಕಾಗಿ ಎಎಪಿ ಶಾಸಕ ನರೇಶ್ ಬಲ್ಯಾನ್ ಅವರನ್ನು ದೆಹಲಿಯ ಬಿಜೆಪಿ ಟೀಕಿಸಿದೆ. ಉತ್ತಮ್ ನಗರದ ರಸ್ತೆಗಳನ್ನು ಹೇಮಾ ಮಾಲಿನಿಯ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಎಎಪಿ ಶಾಸಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ
ನರೇಶ್

Updated on: Nov 05, 2024 | 11:21 AM

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಆಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಫೇಸ್‌ಬುಕ್ ಲೈವ್‌ನಲ್ಲಿ ನಟಿ-ರಾಜಕಾರಣಿ ಹೇಮಾ ಮಾಲಿನಿ ಬಗ್ಗೆ ಟೀಕೆ ಮಾಡಿದ್ದಕ್ಕಾಗಿ ಎಎಪಿ ಶಾಸಕ ನರೇಶ್ ಬಲ್ಯಾನ್ ಅವರನ್ನು ದೆಹಲಿಯ ಬಿಜೆಪಿ ಟೀಕಿಸಿದೆ. ಉತ್ತಮ್ ನಗರದ ರಸ್ತೆಗಳನ್ನು ಹೇಮಾ ಮಾಲಿನಿಯ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ನಲ್ಲಿ ಆಪ್‌ ಶಾಸಕ ಈ ತಿಂಗಳೊಳಗಾಗಿ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು, ಉತ್ತಮ್​ನಗರದ ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಯಂತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಅಗೌರವ ತೋರಿದ ಶಾಸಕರನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಉಚ್ಚಾಟಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಎಎಪಿ ಶಾಸಕಿ ಸ್ವಾತಿ ಮಲಿವಾಲ್ ಮತ್ತು ಮಾಜಿ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ಅವರು ಬಲ್ಯಾನ್ ಅವರ ಹೇಳಿಕೆಯನ್ನು ಸ್ತ್ರೀದ್ವೇಷ ಎಂದು ಖಂಡಿಸಿದರು.

ಮತ್ತಷ್ಟು ಓದಿ:ಆಮ್ ಆದ್ಮಿ ಪಕ್ಷಕ್ಕೆ ವಿದೇಶಗಳಿಂದ 7 ಕೋಟಿ ದೇಣಿಗೆ; ಗೃಹ ಸಚಿವಾಲಯಕ್ಕೆ ಪತ್ರ ಬರೆದ ಇಡಿ

ಸ್ವಾತಿ ಮಲಿವಾಲ್​ ಮಾತನಾಡಿ, ಉತ್ತಮನಗರದ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿವೆ ಆದರೆ ಈ ವ್ಯಕ್ತಿ ಹತ್ತು ವರ್ಷಗಳಿಂದ ಮಲಗಿದ್ದಾನೆ. ಹೆಣ್ಣನ್ನು ವಸ್ತುವನ್ನಾಗಿ ಪರಿಗಣಿಸುವ ಇಂತಹ ಅಗ್ಗದ ಚಿಂತನೆಗೆ ಸಮಾಜದಲ್ಲಿ ಸ್ಥಾನವಿಲ್ಲ. ಮಹಿಳಾ ವಿರೋಧಿ ಚಿಂತನೆ ಹೊಂದಿರುವ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಬಾಲ್ಯಾನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಎಪಿಯನ್ನು ಒತ್ತಾಯಿಸಿದ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ಇಂತಹ ಜನರನ್ನು ವ್ಯವಸ್ಥೆಯಿಂದ ಹೊರಹಾಕಬೇಕು ಎಂದು ಪ್ರತಿಪಾದಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ