Robert Vadra: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಸವಾಲು ಹಾಕುತ್ತಾರೆ; ರಾಬರ್ಟ್ ವಾದ್ರಾ

ಇದು ಸಂಸತ್ ಅಧಿವೇಶನದ ಮೊದಲ ದಿನ. ತುರ್ತು ಪರಿಸ್ಥಿತಿಯಂತಹ ನಕಾರಾತ್ಮಕ ವಿಷಯವನ್ನು ಹೊರತರಲು ಅಥವಾ ಗಾಂಧಿ ಕುಟುಂಬ, ಇಂದಿರಾ ಗಾಂಧಿ ಮತ್ತು ನೆಹರೂ ಅವರ ಬಗ್ಗೆ ಗೀಳನ್ನು ಹೊರಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಯತ್ನಿಸುವುದಿಲ್ಲ ಎಂದುಕೊಂಡಿದ್ದೆ ಎಂದು ರಾಬರ್ಟ್ ವಾದ್ರಾ ತಿಳಿಸಿದ್ದಾರೆ.

Robert Vadra: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಸವಾಲು ಹಾಕುತ್ತಾರೆ; ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ
Follow us
ಸುಷ್ಮಾ ಚಕ್ರೆ
|

Updated on: Jun 24, 2024 | 5:26 PM

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿದ್ದಾರೆ. ಅವರು ಪ್ರತಿಯೊಂದು ವಿಷಯದಲ್ಲೂ ಬಿಜೆಪಿಗೆ ಸವಾಲು ಹಾಕುತ್ತಾರೆ. ನಾನು ರಾಹುಲ್ ಗಾಂಧಿಯನ್ನು ನನ್ನ ಸಹೋದರನಂತೆಯೇ ಚೆನ್ನಾಗಿ ಬಲ್ಲೆ. ಅವರು ಏನೇ ಮಾಡಿದರೂ ಅವರು ತಮ್ಮ ಹೃದಯ, ಮನಸ್ಸು ಮತ್ತು ಆತ್ಮವನ್ನು ಅದರಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ನನಗೆ ತಿಳಿದಿದೆ. ವಿರೋಧ ಪಕ್ಷದ ನಾಯಕನಾಗಿ ಅವರು ಬಿಜೆಪಿಯ ಎಲ್ಲಾ ಯೋಜನೆಗಳ ಬಗ್ಗೆ ಸವಾಲು ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಉದ್ಯಮಿ ರಾಬರ್ಟ್ ವಾದ್ರಾ (Robert Vadra) ಹೇಳಿದ್ದಾರೆ.

ಹಾಗೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ. ತಮ್ಮ ಸಹೋದರ ರಾಹುಲ್ ಗಾಂಧಿ ಈ ಹಿಂದೆ ಪ್ರತಿನಿಧಿಸುತ್ತಿದ್ದ ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಅವರ ಪತಿ ರಾಬರ್ಟ್ ವಾದ್ರಾ ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದರಾಗಿದ್ದ ಅವಧಿಯಲ್ಲಿ ವಯನಾಡಿನ ಜನರಿಂದ ಪಡೆದ ಬೆಂಬಲವನ್ನು ಪ್ರಸ್ತಾಪಿಸಿದ ಅವರು ಅದೇ ರೀತಿಯ ಬೆಂಬಲ ಪ್ರಿಯಾಂಕಾ ಗಾಂಧಿಗೂ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Priyanka Gandhi: ವಯನಾಡಿನಲ್ಲಿ ರಾಹುಲ್ ಗಾಂಧಿಯ ಅನುಪಸ್ಥಿತಿ ಕಾಡದಂತೆ ಕೆಲಸ ಮಾಡುವೆ; ಪ್ರಿಯಾಂಕಾ ಗಾಂಧಿ ಭರವಸೆ

ರಾಹುಲ್‌ ಗಾಂಧಿಗೆ ವಯನಾಡಿನ ಜನರಿಂದ ಅಪಾರ ಪ್ರೀತಿ ಸಿಕ್ಕಿದೆ. ಪ್ರಿಯಾಂಕಾ ಗಾಂಧಿ ಕೂಡ ಅಲ್ಲಿಂದ ಸ್ಪರ್ಧಿಸುವುದು ತುಂಬಾ ಸಂತೋಷದ ಸಂಗತಿ. ಅವರು ಗೆದ್ದು ವಯನಾಡು ಸಂಸದರಾದರೆ ರಾಹುಲ್‌ಗೆ ವಯನಾಡಿನ ಬಗ್ಗೆ ಏನೇನು ಯೋಚನೆ, ಯೋಜನೆಗಳಿದ್ದವೋ ಅವುಗಳನ್ನು ಪ್ರಿಯಾಂಕಾ ಈಡೇರಿಸುತ್ತಾರೆ. ವಯನಾಡಿನ ಜನರು ಪ್ರಿಯಾಂಕಾ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಬರ್ಟ್ ವಾದ್ರಾ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Rahul Gandhi: ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಈ ತಿಂಗಳ ಆರಂಭದಲ್ಲಿ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಮತ್ತು ವಯನಾಡು ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ನಂತರ ಅವರು ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟು ರಾಯ್​ಬರೇಲಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದರು. ಅವರ ಸ್ಥಾನಕ್ಕೆ ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದಾಗಿ ಘೋಷಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ