ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ ವಸತಿ ಪ್ರದೇಶದ ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು

ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ
ರಾಕೆಟ್Image Credit source: NDTV
Follow us
ನಯನಾ ರಾಜೀವ್
|

Updated on: Sep 06, 2024 | 2:26 PM

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ  ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು.

ಉಡಾವಣೆಯಾದ ರಾಕೆಟ್‌ಗಳ ವ್ಯಾಪ್ತಿಯು 3 ಕಿಲೋಮೀಟರ್‌ಗಿಂತಲೂ ಹೆಚ್ಚು ಎಂದು ಅಂದಾಜಿಸಲಾಗಿದೆ. ದಾಳಿಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ರಾಕೆಟ್ ಸ್ಫೋಟದಿಂದಾಗಿ ಸ್ಥಳೀಯ ಸಮುದಾಯ ಭವನ ಹಾಗೂ ಮನೆಗೆ ಹಾನಿಯಾಗಿದೆ.

ಶಂಕಿತ ಉಗ್ರರು ಬಿಷ್ಣುಪುರ್ ಜಿಲ್ಲೆಯ ಕಡೆಗೆ ಹಲವಾರು ಸುತ್ತು ಗುಂಡು ಹಾರಿಸಿದರು.ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಗುರುವಾರ ರಾತ್ರಿ ಟ್ರೋಂಗ್ಲೋಬಿಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಕುಂಬಿ ಗ್ರಾಮದಲ್ಲಿ ಹಲವಾರು ಡ್ರೋನ್‌ಗಳು ನೆಲದಿಂದ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುತ್ತಿರುವುದನ್ನು ಕೆಲವರು ಕಂಡಿದ್ದಾರೆ.

Manipur: ಮನೆಯ ಹೊರಗೆ ಭಾರಿ ಸ್ಫೋಟ, ಮಣಿಪುರ ಮಾಜಿ ಶಾಸಕರ ಪತ್ನಿ ಸಾವು

ಶಂಕಿತ ಕುಕಿ ಉಗ್ರರು ಇಂದು ಬೆಳಗ್ಗೆ ಬಿಷ್ಣುಪುರ್ ಜಿಲ್ಲೆಯ ಟ್ರೋಂಗ್ಲಾಬಿ ಪ್ರದೇಶದಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆ.ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದು, ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ