AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ!

ದೆಹಲಿಯ ರೋಹಿಣಿ ಪ್ರದೇಶದಲ್ಲಿ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದು ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿ ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ದಿದ್ದು ಆ ವ್ಯಕ್ತಿಯ ಗೆಳೆಯನಿಗೆ ಗೊತ್ತೇ ಆಗಿರಲಿಲ್ಲ. ಮರುದಿನ ಈ ವಿಷಯ ಎಲ್ಲೆಡೆ ಹರಡಿದಾಗಲೇ ಅವರಿಗೂ ಗೊತ್ತಾಗಿತ್ತು. ಕುಡಿದ ಮತ್ತಿನಲ್ಲಿದ್ದ ಇಬ್ಬರು ಸ್ನೇಹಿತರು ನಡೆಯುತ್ತಿದ್ದಾಗ ಬಿರ್ಜು ಮ್ಯಾನ್​ಹೋಲ್​ಗೆ ಬಿದ್ದಿದ್ದರು. ಮುಂದೆ ನಡೆಯುತ್ತಿದ್ದ ಗೆಳಯನಿಗೆ ಇದರ ಸುಳಿವೇ ಇರಲಿಲ್ಲ. ಆತ ತನ್ನ ಪಾಡಿಗೆ ತಾನು ಮನೆಗೆ ಹೋಗಿದ್ದ.

ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ!
Rohini Manhole Death
ಸುಷ್ಮಾ ಚಕ್ರೆ
|

Updated on: Feb 11, 2026 | 3:40 PM

Share

ನವದೆಹಲಿ, ಫೆಬ್ರವರಿ 11: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೋಹಿಣಿ ಸೆಕ್ಟರ್ 32ರಲ್ಲಿ ತೆರೆದ ಒಳಚರಂಡಿ ಮ್ಯಾನ್‌ಹೋಲ್‌ಗೆ (Manhole) ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಬಿರ್ಜು ಕುಮಾರ್ ರೈ ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಬೇಗಂಪುರ ಪ್ರದೇಶದ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿ ಸಂಭವಿಸಿದೆ. ಬಿರ್ಜು ಕುಮಾರ್ ಸೋಮವಾರ ಸಂಜೆ ರೋಹಿಣಿ ಸೆಕ್ಟರ್ 32ರಲ್ಲಿ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಿರ್ಜು ಆಕಸ್ಮಿಕವಾಗಿ ತೆರೆದ ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದರು. ಆದರೆ, ಅವರ ಮುಂದೆ ನಡೆಯುತ್ತಿದ್ದ ಅವರ ಸ್ನೇಹಿತನಿಗೆ ಈ ಘಟನೆಯ ಬಗ್ಗೆ ತಿಳಿದೇ ಇರಲಿಲ್ಲ. ಕುಡಿದ ನಶೆಯಲ್ಲಿದ್ದ ಆತ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದರಿಂದ ಗೆಳೆಯ ಬಿದ್ದ ವಿಷಯವೇ ಗೊತ್ತಾಗಲಿಲ್ಲ. ಈ ವಿಷಯ ಮಂಗಳವಾರ ಅವರ ಗಮನಕ್ಕೆ ಬಂದಿತು.

ಬಿರ್ಜು ಒಳಚರಂಡಿಗೆ ಬಿದ್ದ ವಿಷಯವನ್ನು ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಘಟನೆಯ ಬಗ್ಗೆ ತಿಳಿಸಲಾಯಿತು. ಸುಮಾರು ಮೂರು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ನಂತರ ಬಿರ್ಜು ಅವರ ಶವವನ್ನು ಒಳಚರಂಡಿಯಿಂದ ಹೊರತೆಗೆಯಲಾಯಿತು. ಈ ಘಟನೆಯ ನಂತರ ಸರ್ಕಾರ ತೆರೆದ ಮ್ಯಾನ್‌ಹೋಲ್ ಅನ್ನು ಮುಚ್ಚಿ, ಹೆಚ್ಚಿನ ಅಪಘಾತಗಳನ್ನು ತಪ್ಪಿಸಲು ಪ್ರದೇಶದ ಸುತ್ತಲೂ ಕಲ್ಲುಗಳನ್ನು ಹಾಕಿತು.

ಇದನ್ನೂ ಓದಿ: ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ

ದೆಹಲಿ ಪೊಲೀಸರ ಪ್ರಕಾರ, ಇಬ್ಬರೂ ವ್ಯಕ್ತಿಗಳು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಹಗಲಿನಲ್ಲಿಯೇ ಮದ್ಯ ಸೇವಿಸಿದ್ದರು. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಆ ಸ್ಥಳದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಹಿಂದೆ ನಡೆಯುತ್ತಿದ್ದ ಕಾರ್ಮಿಕ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದರೂ ಮುಂದೆ ಇದ್ದವನಿಗೆ ಏನಾಯಿತು ಎಂದು ತಿಳಿದಿರಲಿಲ್ಲ. ಈ ವಿಷಯದಲ್ಲಿ ನಿರ್ಲಕ್ಷ್ಯಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!